ಲೋಕಸಭೆ ಚುನಾವಣೆ 2024; ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ
ಬೆಂಗಳೂರು, ಫೆಬ್ರವರಿ 26; ಚುನಾವಾಣಾ ಆಯೋಗ 2024ರ ಲೋಕಸಭೆ ಚುನಾವಣೆ ತಯಾರಿ ನಡೆಸುತ್ತಿದೆ. ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗುತ್ತದೆ.
ಲೋಕಸಭಾ ಚುನಾವಣೆ-2024ರ ಅಂಗವಾಗಿ ಕರ್ನಾಟಕ ಚುನಾವಣಾ ಆಯೋಗ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯನ್ನು ರಚನೆ ಮಾಡಿದೆ. ಈ ಸಮಿತಿ ಜವಾಬ್ದಾರಿ, ಕರ್ತವ್ಯಗಳ ಬಗ್ಗೆ ಜಿಲ್ಲಾ ಚುನಾವಣಾ ವಿಭಾಗದ ಜೊತೆ ವಿಡಿಯೋ ಸಂವಾದವನ್ನು ಕೈಗೊಳ್ಳಲಾಗಿತ್ತು.

ಸಂವಾದದಲ್ಲಿ ಮಾತನಾಡಿದ ಕರ್ನಾಟಕ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಆರ್., "ಚುನಾವಣೆಗಳಲ್ಲಿ ನೀತಿ ಸಂಹಿತೆ ಜಾರಿ ದಿನಾಂಕದಿಂದ ಮುಕ್ತಾಯದ ದಿನಾಂಕದವರೆಗೆ ಚುನಾವಣಾ ನಿಯೋಜಿತ ಸಮಿತಿ, ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಅದರನ್ವಯ ಕಾರ್ಯನಿರ್ವಹಿಸಬೇಕು" ಎಂದರು.
"ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ತಮ್ಮ ಪ್ರಚಾರದ ಮಾರ್ಗವಾಗಿ ದಿನಪತ್ರಿಕೆಗಳು, ಸುದ್ದಿವಾಹಿನಿಗಳು, ರೇಡಿಯೋ, ಎಫ್ಎಂಗಳು, ಸಾಮಾಜಿಕ ಜಾಲತಾಣಗಳನ್ನು ಅವಲಂಬಿಸಿರುತ್ತವೆ. ಆದ್ದರಿಂದ ಇವುಗಳ ಮೇಲೆ ನಿಗಾ ಇಡಲು ಚುನಾವಣಾ ಆಯೋಗದಿಂದ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ" ಎಂದು ಹೇಳಿದರು.
"ಇದರಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿ ವಾರ್ತಾಧಿಕಾರಿಗಳನ್ನು ಒಳಗೊಂಡು ಜಿಲ್ಲಾ ಚುನಾವಣಾಧಿಕಾರಿಗಳು ಸಮಿತಿಯನ್ನು ರಚಿಸಬೇಕು. ಚುನಾವಣೆಗಾಗಿ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಪತ್ರಿಕೆಗಳು, ಸುದ್ದಿವಾಹಿನಿಗಳು ಮುಂತಾದ ಮಾಧ್ಯಮಗಳ ಮೂಲಕ ನೀಡುವ ಜಾಹೀರಾತುಗಳ ಮೇಲೆ, ಮಾಧ್ಯಮಗಳಲ್ಲಿ ಬರುವ ಸುದ್ದಿಗಳ ಮೇಲೆ ಸಮಿತಿಯು ನಿಗಾ ವಹಿಸಬೇಕು" ಎಂದು ಸೂಚನೆ ನೀಡಿದರು.
ಪೇಯ್ಡ್ ಸುದ್ದಿಗಳ ಬಗ್ಗೆ ನಿಗಾ: ಚುನಾವಣಾ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾಗುವ, ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುವ ಸಂದರ್ಶನ, ಏಕ ವ್ಯಕ್ತಿ ಕೇಂದ್ರಿತ ಸುದ್ದಿಗಳ ಮೇಲೆ ನಿಗಾ ವಹಿಸಿ, ಪೇಯ್ಡ್ ಸುದ್ದಿಯ ಕುರಿತು ಎಚ್ಚರಿಕೆ ವಹಿಸಬೇಕು. ಪೇಯ್ಡ್ ಸುದ್ದಿ ಎಂದು ಸಮಿತಿಯು ನಿರ್ಧರಿಸಿದ ಮೇಲೆ ಆಯೋಗದ ಮಾರ್ಗಸೂಚಿಯನ್ವಯ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ಜಾಹೀರಾತು ವೆಚ್ಚದ ಮಾಹಿತಿಯನ್ನು ಆರ್‌ಒ, ಚುನಾವಣಾ ವೆಚ್ಚ ಅಧಿಕಾರಿಗೆ ಪ್ರತಿ ದಿನ ನೀಡಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಜಾಹೀರಾತು, ಸುದ್ದಿಗಳನ್ನು ಗುರುತಿಸಿ ವರದಿ ಮಾಡಬೇಕು ಎಂದು ಸಮಿತಿಯ ಕಾರ್ಯಗಳು, ಜವಾಬ್ದಾರಿಗಳ ಕುರಿತು ವಿವರಣೆ ನೀಡಲಾಗಿದೆ.
ಸದ್ಯದ ಮಾಹಿತಿಯಂತೆ ಮಾರ್ಚ್ 15ರ ಬಳಿಕ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ. 2019ರಲ್ಲಿ ಲೋಕಸಭೆ ಚುನಾವಣೆಯನ್ನು ಒಟ್ಟು 7 ಹಂತಗಳಲ್ಲಿ ನಡೆಸಲಾಗಿತ್ತು. ಈ ಬಾರಿ ಎಷ್ಟು ಹಂತದ ಚುನಾವಣೆ ನಡೆಯಲಿದೆ? ಎಂಬುದು ಖಚಿತವಾಗಿಲ್ಲ.
ಕೇಂದ್ರ ಚುನಾವಣಾ ಆಯೋಗ ವಿವಿಧ ರಾಜ್ಯಗಳ ಚುನಾವಣಾ ಆಯೋಗದ ಜೊತೆ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ/ ಸಿಬ್ಬಂದಿಗಳನ್ನು ಆಯ್ಕೆ ಮಾಡಿ ಅವರಿಗೆ ತರಬೇತಿಯನ್ನು ನೀಡಲಾಗಿದೆ.
ಆಯೋಗದ ನಿರ್ದೇಶನದಂತೆ ಲೋಕಸಭಾ ಕ್ಷೇತ್ರದಲ್ಲಿ ಪಾರದರ್ಶಕವಾಗಿ, ನಿಯಮಾನುಸಾರ ಚುನಾವಣೆ ನಡೆಸಲು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ತಂಡಗಳನ್ನು ರಚಿಸಿ, ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಚೆಕ್‌ಪೋಸ್ಟ್ ಸೇರಿದಂತೆ ಭದ್ರತಾ ವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯ ಜೊತೆ ಸಭೆಗಳನ್ನು ಮಾಡಲಾಗುತ್ತಿದೆ.
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಚುನಾವಣಾ ಫಲಿತಾಂಶ ಪ್ರಕಟವಾಗುವ ತನಕ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು, ಮಾಧ್ಯಮಗಳು ಚುನಾವಣಾ ನೀತಿ ಸಂಹಿತೆ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಇಲ್ಲವಾದಲ್ಲಿ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications