ಮಂತ್ರಿಗಳ ಮಕ್ಕಳಿಗೆ ಹೈಕಮಾಂಡ್‌ ಮಣೆ; ಟಿಕೆಟ್‌ ಪಡೆಯುವಲ್ಲಿ ಕೊನೆಗೂ ಯಶಸ್ವಿಯಾದ ಸಚಿವರುಗಳು

ಬೆಂಗಳೂರು, ಮಾರ್ಚ್22:‌ ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗಿದೆ. ಕಾಂಗ್ರೆಸ್‌ ಹೈಕಮಾಂಡ್ ಲೋಕಸಭಾ ಚುನಾವಣೆ ಹಿನ್ನೆಲೆ ಗುರುವಾರ ಕರ್ನಾಟಕದ 17 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ್ದು, ಈ ಪಟ್ಟಿಯಲ್ಲಿ ಸಂಬಂಧಿಕರಿಗೆ ಹೆಚ್ಚು ಮಣೆ ಹಾಕಲಾಗಿದೆ.

ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ ಗೊಂದಲಗಳಿಲ್ಲ ಏಳು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರನ್ನ ಘೋಷಿಸಿತ್ತು. ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಬಿಡುಗಡೆ ಮಾಡಿದ್ದು, 17 ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳು ಸಚಿವಗಳು ತಮ್ಮ ತಮ್ಮ ಮಕ್ಕಳಿಗೆ ಟಿಕೆಟ್‌ ಗಿಟ್ಟಿಸುವಲ್ಲಿ ಮೇಲುಗೈ ಸಾಧಿಸಿದ್ದಾರೆ.

Lok Sabha Election 2024 Five Karnataka Ministers Children In List See Details

ಐವರು ಸಚಿವ ಫೈಕಿ ಬೆಂಗಳೂರು ದಕ್ಷಿಣದಿಂದ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ, ಬಾಗಲಕೋಟೆಯಿಂದ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತಾ ಶಿವಾನಾಂದ ಪಾಟೀಲ್, ಚಿಕ್ಕೋಡಿಯಿಂದ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಟಿಕೆಟ್‌ ಗಿಟ್ಟಿಸಿದ್ದರೆ, ಅಲ್ಲದೇ ಕುಂದ ನಗರಿ ಬೆಳಗಾವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್‌ ಹಾಗೂ ಬೀದರ್‌ನಲ್ಲಿ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಅವರನ್ನ ಕಣಕ್ಕಿಳಿಸಿದ್ದು, ಐವರು ಸಚಿವರುಗಳು ತಮ್ಮ ಮಕ್ಕಳ ರಾಜಕೀಯ ಭವಿಷ್ಯವನ್ನ ರೂಪಿಸುವ ನಿಟ್ಟಿನಲ್ಲಿ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ ಅವರ ಹೆಸರು ದಾವಣಗೆರೆ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಅಲ್ಲದೇ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಅವರ ಅಳಿಯನಿಗೆ ಕಲಬುರ್ಗಿಯಿಂದ ಟಿಕೆಟ್‌ ನೀಡಲಾಗಿದೆ.

ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ

1.ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್‌

2.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ

3.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ

4.ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್‌

5.ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ

6.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್‌

7.ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ

8.ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ

9.ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ

10.ಬೆಂಗಳೂರು ಸೆಂಟ್ರಲ್‌ ಕ್ಷೇತ್ರ-ಮನ್ಸೂರ್ ಅಲಿಖಾನ್‌

11.ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್‌

12.ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ

13.ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್‌

14.ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ

15.ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್‌ ಜಿ ನಾಯಕ್‌

16.ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್‌

17. ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+