Lok Sabha Election 2024: ಮತದಾನದಂದು ಸಾರ್ವತ್ರಿಕ ರಜೆ ಘೋಷಿಸಿದ ಸರ್ಕಾರ
ಬೆಂಗಳೂರು, ಮಾರ್ಚ್ 31: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಾಗಾಗಿ ಲೋಕಸಭಾ ಚುನಾವಣೆ ನಡೆಯುವ ಎರಡೂ ದಿನವೂ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದೆ.
"ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ 26.04.2024ರ ಶುಕ್ರವಾರದಂದು ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತ ಹಾಗೂ ಶೋರಾಪುರ-36 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ದಿನಾಂಕ 07.05.2024ರ ಮಂಗಳವಾರದಂದು ನಡೆಸುತ್ತಿದೆ".

"ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ದಿನಾಂಕ 26.04.2024 ಮತ್ತು ದಿನಾಂಕ 07.05.2024 ರಂದು ನಡೆಯುವ ಚುನಾವಣೆಗೆ ಕೆಳಗಿನ ಅಂಕಣದಲ್ಲಿ ನಮೂದಿಸಿರುವ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ".
ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಈ ಮೂಲಕ ಆದೇಶಿಸಿದೆ.
ದಿನಾಂಕ 26.04.2024 ಮತ್ತು 07.05.2024ರಂದು ಸಾರ್ವತ್ರಿಕ ರಜೆಯನ್ನು Negotiable Instrument Act 1881ರ ಪ್ರಕಾರವು ಸಹ ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದರೆ, ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮೊದಲ ಹಂತದಲ್ಲಿ (26.04.2024) ಎಲ್ಲೇಲ್ಲಿ ಮತದಾನ?
26.04.2024 ರಂದು ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಎರಡನೇ ಹಂತದಲ್ಲಿ (26.04.2024) ಎಲ್ಲೇಲ್ಲಿ ಮತದಾನ?
ಎರಡನೇ ಹಂತದಲ್ಲಿ ದಿನಾಂಕ 07.05.2024ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಇನ್ನು, ಕಾಂಗ್ರೆಸ್‌ನ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ 07.05.2024ರಂದು ನಡೆಯಲಿದೆ. ಬಿಜೆಪಿ ಅಭ್ಯರ್ಥಿಯಾಗಿ ರಾಜುಗೌಡ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್‌ನಿಂದ ರಾಜಾ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ಅಭ್ಯರ್ಥಿಯಾಗಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications