Lok Sabha Election 2024 In Karnataka: ಈ ದಿನಗಳಲ್ಲಿ ಶಾಲಾ, ಕಾಲೇಜುಗಳು ಮುಚ್ಚಲ್ಪಡುತ್ತವೆ, ಯಾವ್ಯಾವಾಗ & ಎಲ್ಲಿ? ಮಾಹಿತಿ
ಕರ್ನಾಟಕ, ಏಪ್ರಿಲ್, 15: ಈಗಾಗಲೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ಮತ್ತು ಮೇ 7ರಂದು ಚುನಾವಣೆ ನಡೆಯಲಿದೆ ಎಂದು ಮಾರ್ಚ್ 16ರಂದು ಚುನಾವಣಾ ಆಯೋಗವು ಘೋಷಣೆ ಮಾಡಿದೆ. ಇನ್ನು ಚುನಾವಣೆ ದಿನಗಳಂದು ಶಾಲಾ-ಕಾಲೇಜುಗಳು ಮುಚ್ಚಲ್ಪಡುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯವು 28 ಲೋಕಸಭಾ ಸ್ಥಾನಗಳನ್ನು ಹೊಂದಿದ್ದು, ಇಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇನ್ನು ಮತದಾನದ ನಡೆಯುವ ದಿನಗಳಲ್ಲಿ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಗುತ್ತದೆ. ಮತದಾನ ಬೂತ್‌ಗಳನ್ನು ಸ್ಥಾಪಿಸಲು ಅನುಕೂಲವಾಗುವಂತೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಭದ್ರತೆಯ ಅಗತ್ಯ ಹೆಚ್ಚಿರುವ ಪ್ರದೇಶಗಳಲ್ಲಿ, ಸುರಕ್ಷಿತ ಮತ್ತು ಶಾಂತಿಯುತ ಚುನಾವಣೆಗಾಗಿ ಹಲವೆಡೆ ಹಲವು ದಿನಗಳ ಮುಂಚಿತವಾಗಿ ಮುಚ್ಚಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಏಪ್ರಿಲ್ 26ರಂದು ಎಲ್ಲೆಲ್ಲಿ ಮತದಾನ?: ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
ಮೇ 7ರಂದು ಎಲ್ಲೆಲ್ಲಿ ಮತದಾನ?: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
2019ರ ಲೋಕಸಭೆ ಚುನಾವಣೆಯಲ್ಲಿ, ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ, ಸ್ವತಂತ್ರ, ಕಾಂಗ್ರೆಸ್ ಮತ್ತು ಜನತಾ ದಳ ತಲಾ ಒಂದು ಸ್ಥಾನವನ್ನಷ್ಟೇ ಗೆದ್ದಿದ್ದವು.












Click it and Unblock the Notifications