Lok Sabha Election: 'ವ್ಯಂಗ್ಯಚಿತ್ರ ಪ್ರದರ್ಶನ-ಕಾರ್ಯಾಗಾರ', ಆಸಕ್ತರು ದಿನಾಂಕ, ಷರತ್ತು ಗಮನಿಸಿ
ಬೆಂಗಳೂರು, ಜನವರಿ 18: ಲೋಕಸಭಾ ಚುಣಾವಣೆ 2024 ಕ್ಕೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿವೆ. ಇದರ ಪ್ರಕ್ರಿಯೆಯಲ್ಲಿ ತೊಡಗಿರುವ ಚುನಾವಣೆ ಆಯೋಗವು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿವೆ. ಇದರ ಭಾಗವಾಗಿ ಬೆಂಗಳೂರಿನ ವಿಧಾನಸೌಧದ ಮುಂದೆ 'ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ' ಹಮ್ಮಿಕೊಂಡಿದೆ.
ಹೌದು, ಲೋಕಸಭಾ ಚುನಾವಣೆ ಸಂಬಂಧ ಇತ್ತೀಚೆಗೆ ವ್ಯಂಗ್ಯ ಚಿತ್ರರಚನೆಗೆ ಅವಕಾಶ ನೀಡಿದೆ. ಈ ಕಾರ್ಯಕ್ರಮದಲ್ಲಿ ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.

'ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ'ವು ಇದೇ ಜನವರಿ 21ರಂದು ಬೆಂಗಳೂರಿನಲ್ಲಿ ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ. ಮುಂಬರುವ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.
ಪ್ರಚಾರಕ್ಕೆ 25 ಚಿತ್ರ ಬಳಕೆ: ಆಯೋಗ
ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.
ಷರತ್ತು ಹಾಗು ನಿಬಂಧನೆಗಳು
* ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು
* ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.
* ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800X2400 ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.
* ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.
* ಚಿತ್ರಗಳನ್ನು [email protected] ವಿಳಾಸಕ್ಕೆ ಕಳುಹಿಸ ಬೇಕು ಹಾಗೂ ಇಮೇಲ್ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೋಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.
* ಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ 19-01-2024 ಸಂಜೆ 5:00 ಗಂಟೆಯ ಒಳಗಾಗಿ
* ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ.
* ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ದಿನಾಂಕ 21-01-2024 ರಂದು ಬೆಳಗ್ಗೆ 9:00 ಗಂಟೆಗೆ ಹಾಜರಿರಬೇಕು.
ಪಾಲ್ಗೊಳ್ಳಲು ಬಯಸುವವರು ಹೆಚ್ಚಿನ ಮಾಹಿತಿಗೆ 'ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇಷಾದ್ರಿ ರಸ್ತೆ, ಬೆಂಗಳೂರು' ಇಲ್ಲಿಗೆ ಭೇಟಿ ನೀಡಬೇಕು. ಇಲ್ಲವೇ ದೂರವಾಣಿ 9480841211 ಸಂಖ್ಯೆ ಕರೆ ಮಾಡಬಹುದು ಎಂದು ಕರ್ನಾಟಕ ರಾಜ್ಯ ಚುನಾವಣೆ ಆಯೋಗ ತಿಳಿಸಿದೆ.












Click it and Unblock the Notifications