ಕರ್ನಾಟಕದಲ್ಲಿ ಮೊದಲ ಹಂತದ ಮತದಾನ: ಯಾವ್ಯಾವ ಕ್ಷೇತ್ರ? ಯಾರ‍್ಯಾರು ಅಭ್ಯರ್ಥಿಗಳು?
ಬೆಂಗಳೂರು, ಏಪ್ರಿಲ್ 25: ಇಂದು ಏಪ್ರಿಲ್ 26 ಶುಕ್ರವಾರದಂದು 2024ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಕೆಲವು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದ ಒಟ್ಟು 14 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.
ಇಂದು ಕರ್ನಾಟಕ ಮಾತ್ರವಲ್ಲದೇ ಒಟ್ಟು 13 ರಾಜ್ಯದ 88 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕೇರಳ 20, ಮಧ್ಯಪ್ರದೇಶ 06, ಮಹಾರಾಷ್ಟ್ರ 08, ರಾಜಸ್ಥಾನ 13, ಉತ್ತರ ಪ್ರದೇಶದ 8 ಕ್ಷೇತ್ರ ಸೇರಿ ಒಟ್ಟು 88 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ.

ಕರ್ನಾಟಕದ ಯಾವ್ಯಾವ ಕ್ಷೇತ್ರಗಳಲ್ಲಿ ಇಂದು ಮತದಾನ..?
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ
ಹಾಸನ ಲೋಕಸಭಾ ಕ್ಷೇತ್ರ
ಚಿತ್ರದುರ್ಗ ಲೋಕಸಭಾ ಕ್ಷೇತ್ರ
ತುಮಕೂರು ಲೋಕಸಭಾ ಕ್ಷೇತ್ರ
ಮಂಡ್ಯ ಲೋಕಸಭಾ ಕ್ಷೇತ್ರ
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ
ಚಾಮರಾಜನಗರ ಲೋಕಸಭಾ ಕ್ಷೇತ್ರ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
ಕೋಲಾರ ಲೋಕಸಭಾ ಕ್ಷೇತ್ರ

ಇಂದಿನ ಚುನಾವಣೆಯಲ್ಲಿ ಕಣದಲ್ಲಿರುವ ಅಭ್ಯರ್ಥಿಗಳು ಯಾರ್ಯಾರು?
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣದಲ್ಲಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಹಾಗೂ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಸ್ಪರ್ಧೆಯಲ್ಲಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಶ್ರೇಯಸ್ ಪಟೇಲ್ ಸ್ಪರ್ಧಿಸಿದ್ದು, ಎದುರಾಳಿಯಾಗಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕಣದಲ್ಲಿದ್ದಾರೆ.
ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಎನ್.ಚಂದ್ರಪ್ಪ ಹಾಗೂ ಬಿಜೆಪಿಯಿಂದ ಗೋವಿಂದ ಕಾರಜೋಳ ಸ್ಪರ್ಧೆ ಮಾಡಿದ್ದಾರೆ.
ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಮುದ್ದಹನುಮೇಗೌಡ ಕಣದಲ್ಲಿದ್ದರೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ.ಸೋಮಣ್ಣ ಕಣದಲ್ಲಿದ್ದಾರೆ.
ಮಂಡ್ಯದಲ್ಲಿ ಕಾಂಗ್ರೆಸ್ನಿಂದ ಉದ್ಯಮಿ ವೆಂಕಟರಮಣೇಗೌಡ( ಸ್ಟಾರ್ ಚಂದ್ರು) ಕಣದಲ್ಲಿದ್ದರೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ.
ಎದುರಾಳಿಯಾಗಿ ಮೈಸೂರಿನಲ್ಲಿ ಕಾಂಗ್ರೆಸ್ನಿಂದ ಎಂ.ಲಕ್ಷ್ಮಣ್ ಸ್ಪರ್ಧೆ ಮಾಡಿದ್ದು ಮೈತ್ರಿ ಅಭ್ಯರ್ಥಿಯಾಗಿ ಯದುವೀರ್ ಒಡೆಯರ್ ಮೊದಲ ಬಾರಿಗೆ ಸ್ಪರ್ಧಿಸಿದ್ದಾರೆ.
ಚಾಮರಾಜನಗರದಲ್ಲಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಾಂಗ್ರೆಸ್ನ ಅಭ್ಯರ್ಥಿಯಾಗಿದ್ದರೆ, ಬಿಜೆಪಿಯಿಂದ ಎಸ್.ಬಾಲರಾಜು ಕಣದಲ್ಲಿದ್ದಾರೆ.
ಮತ್ತೊಂದು ಜಿದ್ದಾಜಿದ್ದಿನ ಕ್ಷೇತ್ರ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ನ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ಸ್ಪರ್ಧಿಸಿದ್ದರೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿ.ಎನ್.ಮಂಜುನಾಥ್ ಕಣದಲ್ಲಿದ್ದಾರೆ.
ಬೆಂಗಳೂರು ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೌಮ್ಯರೆಡ್ಡಿ ಸ್ಪರ್ಧಿಸಿದ್ದು, ಬಿಜೆಪಿಯಿಂದ ತೇಜಸ್ವಿ ಸೂರ್ಯ ಸ್ಪರ್ಧೆಯಲ್ಲಿದ್ದಾರೆ.
ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್ನ ಅಭ್ಯರ್ಥಿಯಾಗಿ ರಾಜೀವ್ ಗೌಡ ಕಣಕ್ಕಿಳಿದಿದ್ದರೆ, ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಸ್ಫರ್ಧೆಯಲ್ಲಿದ್ದಾರೆ.
ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ನಿಂದ ಮನ್ಸೂರ್ ಅಲಿಖಾನ್ ಸ್ಪರ್ಧಿಸಿದ್ದು ಬಿಜೆಪಿಯಿಂದ ಪಿ.ಸಿ.ಮೋಹನ್ ಕಣದಲ್ಲಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ರಕ್ಷಾರಾಮಯ್ಯ ಹಾಗೂ ಬಿಜೆಪಿಯಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಪರ್ಧಿಸಿದ್ದಾರೆ.
ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಸ್ಪರ್ಧೆಯಲ್ಲಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ಕಣದಲ್ಲಿದ್ದಾರೆ.












Click it and Unblock the Notifications