KSRTC: ಮತದಾನದ ದಿನ ರಜೆ ಘೋಷಿಸಿದ ಕೆಎಸ್‌ಆರ್‌ಟಿಸಿ, ಹಾಗಾದ್ರೆ ಬಸ್ ಇರಲ್ವಾ?
ಬೆಂಗಳೂರು, ಏಪ್ರಿಲ್. 10: ಮುಂಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ಸರ್ಕಾರ ಸಾರ್ವಜನಿಕ ರಕೆ ಃಓಷಿಸಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ಮತ್ತು ಮೇ 07 ರಂದು ಎರಡು ದಿನ ಮತದಾನ ನಡೆಯಲಿದೆ. ಆ ದಿನಗಳಲ್ಲಿ ಆಯಾ ಲೋಕಸಭಾ ವ್ಯಾಪ್ತಿಯಲ್ಲಿ ರಜೆ ಘೋಷಿಸಲಾಗಿದೆ.
ಇದೇ ವೇಳೆ ಕೆಸ್‌ಆರ್‌ಟಿಸಿ ಕೂಡ ತನ್ನ ನಿಗಮದ ಕೇಂದ್ರ ಕಚೇರಿ, ವಿಭಾಗೀಯ ಕಚೇರಿಗಳು, ತರಬೇತಿ ಕೇಂದ್ರಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದೆ. ವೇತನ ಸಹಿತ ರಜೆ ಘೋಷಿಸಿದೆ. ಹೀಗಾಗಿ ಈ ದಿನಗಳಂದು ಬಸ್‌ಗಳು ಓಡಾಡುವುದಿಲ್ಲವೆ ಎಂಬ ಪ್ರಶ್ನೆ ಸಾಮಾನ್ಯವಾಗಿ ಬರುತ್ತದೆ. ಹೀಗಾಗಿ, ನಿಗಮ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

'ದಿನಾಂಕ:26-04-2024 ಮತ್ತು 07-05-2024 ರಂದು ಕರ್ನಾಟಕ ರಾಜ್ಯದಲ್ಲಿ ನಡೆಯುವ ಲೋಕಸಭಾ ಚುನಾವಣೆ-2024 ರ ನಿಮಿತ್ತ ರಾಜ್ಯ ಸರ್ಕಾರವು ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಲ್ಲಿ ಸೂಚಿಸಿರುವ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ ನೆಗೋಷಿಯೇಬಲ್ ಇಸ್ಟ್ರುಮೆಂಟ್ಸ್ ಆಕ್ಟ್ 1981 ರ ಪ್ರಕಾರ ಸಾರ್ವತ್ರಿಕ ರಜೆಯನ್ನು ಸರ್ಕಾರವು ಘೋಷಿಸಿದೆ. 1951 ರ ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ 135 (ಬಿ) ರಡಿಯಲ್ಲಿ ವೇತನ ಸಹಿತ ರಜೆ ನೀಡಲು ಆದೇಶಿಸಿದೆ".
ಕ.ರಾ.ರ.ಸಾ.ನಿಗಮವು ಅಗತ್ಯ ಸೇವೆಯಡಿಯಲ್ಲಿ ಬರುವುದರಿಂದ ದಿನಾಂಕ: 26/04/2024 ಹಾಗೂ ದಿನಾಂಕ: 07/05/2024 ರಂದು ನಡೆಯುವ ಲೋಕಸಭಾ ಚುನಾವಣೆ ದಿನದಂದು ಆಯಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ನಿಗಮದ ಕೇಂದ್ರ ಕಚೇರಿ, ವಿಭಾಗೀಯ ಕಚೇರಿಗಳು, ತರಬೇತಿ ಕೇಂದ್ರಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದೆ.

ಘಟಕ, ವಿಭಾಗೀಯ ಕಾರ್ಯಾಗಾರ, ಪ್ರಾದೇಶಿಕ ಕಾರ್ಯಾಗಾರ, ಕರಾಸಾ ಮುದ್ರಣಾಲಯ ಹಾಗೂ ಕರಾಸಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಮತದಾನದ ದಿನಾಂಕದಂದು ವೇತನ ಸಹಿತ ರಜೆಯನ್ನು ನೀಡುವುದು. ಈ ಹಿನ್ನೆಲೆಯಲ್ಲಿ ಚುನಾವಣಾ ದಿನದಂದು ಅವಶ್ಯಕತೆಗೆ ಅನುಗುಣವಾಗಿ ಕನಿಷ್ಠ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ಬಳಸಿಕೊಳ್ಳುವುದು ಎಂದು ಹೇಳಿದೆ.
ಮುಂದುವರೆದು. ಚುನಾವಣಾ ದಿನದಂದು ಕರ್ತವ್ಯದ ಮೇಲಿರುವ ಸಿಬ್ಬಂದಿಗೆ ಅವರ ಅನುಕೂಲಕ್ಕನುಗುಣವಾಗಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಅಥವಾ ಕರ್ತವ್ಯದ ಅವಧಿಯ ಮಧ್ಯೆ ಮತ ಚಲಾಯಿಸಲು ಅವಕಾಶವನ್ನು ಮಾಡಿಕೊಡುವಂತೆ / ಅನುಮತಿ ನೀಡುವಂತೆ ಸೂಕ್ತಾಧಿಕಾರಿಗಳು ಆದೇಶಿಸಿರುತ್ತಾರೆ. ಅದರಂತೆ, ಕ್ರಮ ಕೈಗೊಳ್ಳಬೇಕು ಎಂದು ಕೆಎಸ್‌ಆರ್‌ಟಿಸಿ ಆದೇಶಿಸಿದೆ. ಹೀಗಾಗಿ ಮತದಾನದ ದಿನದಂದು ಕನಿಷ್ಟ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ. ಬಸ್ಸುಗಳ ಸಂಖ್ಯೆ ಕಡಿಮೆಯಿರಲಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications