ಲೋಕಸಭೆ ಚುನಾವಣೆ ಘೋಷಣೆ: ದೇವಾಲಯ, ಮಠಗಳಿಗೆ ನಿಯಮಗಳು
ಬೆಂಗಳೂರು, ಮಾರ್ಚ್ 17: ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಶನಿವಾರ ಘೋಷಣೆಯಾಗಿದೆ. ತಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಕರ್ನಾಟಕದ 28 ಎರಡು ಹಂತದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಚುನಾವಣಾ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ.
ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯ, ಮಠ, ಧಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಹೇರಿದೆ.

ಲೋಕಸಭಾ ಚುನಾವಣೆ-2024 ಅನ್ನು ಶಾಂತಿಯುತ ಹಾಗೂ ಮುಕ್ತವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆ ಹೇಳಿದೆ. ಯಾವ ಯಾವ ರಾಜಕೀಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಇಲಾಖೆ ಪಟ್ಟಿ ನೀಡಿದೆ.
ಚಟುವಟಿಕೆಗಳಿಗೆ ನಿರ್ಬಂಧದ; ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯ, ಮಠ, ಮಂದಿರ, ಜೈನ ಬಸದಿಗಳು ಹಾಗೂ ಇವುಗಳ ವ್ಯಾಪ್ತಿಗೆ ಒಳಪಡುವ ಭವನ, ಯಾತ್ರಿ ನಿವಾಸ ಪ್ರದೇಶ, ಕಲ್ಯಾಣ ಮಂಟಪಗಳಲ್ಲಿ ಸಭೆ, ಸಮಾರಂಭ ಅಥವಾ ಇನ್ನಿತರ ರಾಜಕೀಯ ಚಟುವಟಿಕೆಗಳ ಆಯೋಜನೆಗೆ ಅನುಮತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ರಾಜಕೀಯ ಚಟುವಟಿಕೆಗಳಿಗೆ ದೇವಾಲಯದ ಕೊಠಡಿಗಳು, ಕಲ್ಯಾಣ ಮಂಟಪ, ಸಮುದಾಯದ ಭವನ, ಖಾಲಿ ಜಾಗ, ದೇವಾಲಯದ ಆವರಣ, ಇತರೆ ಧಾರ್ಮಿಕ ಸ್ಥಳಗಳನ್ನು ನೀಡಲು ಅವಕಾಶ ಇರುವುದಿಲ್ಲ.
ದೇವಾಲಯಗಳಲ್ಲಿ ವ್ಯಕ್ತಿಗಳು ಯಾವುದೇ ಸಮಾರಂಭ, ಸಭೆ, ಇನ್ನಿತರ ರಾಜಕೀಯ ಚಟುವಟಿಕೆಗಳು ನಡೆಸುವಂತಿಲ್ಲ. ದೇವಾಲಯದ ಆವರಣದಲ್ಲಿ ರಾಜಕೀಯ ವ್ಯಕ್ತಿಗಳಿಂದ ಅನವಶ್ಯಕ ಕಾರ್ಯಕ್ರಮದ ಆಯೋಜನೆಯಲ್ಲಿ ಊಟದ ವ್ಯವಸ್ಥೆ ಮಾಡುವಂತಿಲ್ಲ. ದೇವಸ್ಥಾನದ ಧ್ವನಿವರ್ಧಕಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ.
ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, 24, 48 ಹಾಗೂ 72 ಗಂಟೆಗಳಲ್ಲಿ ಕಟ್ಟುನಿಟ್ಟಾಗಿ ನೀತಿ ಸಂಹಿತೆ ಜಾರಿಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ 24 ಗಂಟೆಯೊಳಗೆ ಸರ್ಕಾರದ ಜಾಹೀರಾತುಗಳು, ಎರಡನೇ ಹಂತದಲ್ಲಿ 48 ಗಂಟೆಯೊಳಗೆ ಸರ್ಕಾರಿ ಸ್ವಾಮ್ಯದ ನಿಗಮ ಮಂಡಳಿಗಳು ಹಾಗೂ ಮೂರನೇ ಹಂತದಲ್ಲಿ 72 ಗಂಟೆಯೊಳಗೆ ಖಾಸಗಿ ವಲಯದಲ್ಲಿ ನೀತಿ ಸಂಹಿತೆಗೆ ವಿರುದ್ದವಾದ ಜಾಹೀರಾತುಗಳನ್ನು ತೆಗೆಯಬೇಕಾಗುತ್ತದೆ.
ಈ ಕುರಿತು ಈಗಾಗಲೇ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ರಾಜಕೀಯ ಪಕ್ಷಗಳ ಬ್ಯಾನರ್, ಫ್ಲೆಕ್ಸ್, ಉದ್ಘಾಟನೆಗೊಂಡ ಕಾಮಗಾರಿಗಳ ಫಲಕಗಳು, ಗ್ರಾಮ, ನಗರಗಳ ಸ್ವಾಗತ ಕಮಾನುಗಳು ಹಾಗೂ ಕೊಡುಗೆ ನೀಡಿದ ವಸ್ತುಗಳ ಮೇಲೆ ರಾಜಕೀಯ ವ್ಯಕ್ತಿಗಳ ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
2 ಹಂತದಲ್ಲಿ ಮತದಾನ: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 26ರಂದು 14 ಕ್ಷೇತ್ರಗಳಲ್ಲಿ ನಡೆಯಲಿದೆ.
ಇವುಗಳಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳು ಸೇರಿವೆ.
2ನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿವೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications