Grama Panchayat; ಲೋಕಸಭೆ ಚುನಾವಣೆ, ಪಿಡಿಒಗಳ ಮಹತ್ವದ ಬೇಡಿಕೆ
ಬೆಂಗಳೂರು, ಫೆಬ್ರವರಿ 18; ಲೋಕಸಭಾ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಸಿಬ್ಬಂದಿಗಳ ಪಟ್ಟಿ ಮಾಡಿ, ತರಬೇತಿಯನ್ನು ಆರಂಭಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದ ರಾಜ್ಯಮಟ್ಟದ ತನಕ ವಿವಿಧ ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ತೊಡಗಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಚುನಾವಣಾ ಅಧಿಕಾರಿ/ ಸಿಬ್ಬಂದಿಗಳು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕಿದೆ.

ಚುನಾವಣೆ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳು ಚುನಾವಣಾ ಆಯೋಗದ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಚುನಾವಣಾ ಹಿನ್ನೆಲೆಯಲ್ಲಿ ಸ್ಥಾಪನೆ ಮಾಡುವ ಚೆಕ್ ಪೋಸ್ಟ್‌ಗಳಿಗೆ ಪಿಡಿಒಗಳ ಬದಲು ಬೇರೆ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ಈ ಕುರಿತು ಪಂಚಾಯತ್ ರಾಜ್ ಇಲಾಖೆ ಸಹ ಆಯೋಗಕ್ಕೆ ಕೋರಿದೆ. ಪಿಡಿಒಗಳು ಚುನಾವಣೆ ಸಮಯದಲ್ಲಿ ಮತಗಟ್ಟೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ, ಸ್ವೀಪ್ ಕಾರ್ಯಕ್ರಮ ನೋಡಿಕೊಳ್ಳುತ್ತಾರೆ. ಗ್ರಾಮ ಪಂಚಾಯಿತಿಯ ಎಲ್ಲಾ ಜವಾಬ್ದಾರಿ ಹೊತ್ತಿರುತ್ತಾರೆ ಎಂದು ತಿಳಿಸಲಾಗಿದೆ.
ಯಾವ ಕಾರಣಕ್ಕೆ ನಿಯೋಜನೆ ಬೇಡ?: ಈಗ ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸಲು, ಗಣಕೀಕೃತ ಕೆಲಸ ಕಾರ್ಯಗಳಿಗೆ ಬೆರಳಚ್ಚು ನೀಡಲು ಪಿಡಿಒಗಳ ಅಗತ್ಯವಿದೆ. ನರೇಗಾ ಕಾಮಗಾರಿ ಅನುಷ್ಠಾನಗೊಳಿಸುವ ಹೊಣೆಯೂ ಅವರ ಮೇಲಿದೆ.
ಈ ಎಲ್ಲ ಅಂಶಗಳನ್ನು ಗಮನಿಸಿ ಪಿಡಿಒಗಳನ್ನು ಪೂರ್ಣಕಾಲಿಕವಾಗಿ ನಿಯೋಜಿಸುವುದರಿಂದ ವಿನಾಯಿತಿ ನೀಡಿ, ಸಾಂದರ್ಭಿಕ/ ಅಲ್ಪಾವಧಿಯ ಚುನಾವಣಾ ಜವಾಬ್ದಾರಿಗೆ ನಿಯೋಜಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಇಲಾಖೆಯು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ರಾಜ್ಯದಲ್ಲಿ ಈ ಬಾರಿ ಭೀಕರ ಬರ ಆವರಿಸಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ (Ground Truthing) ವರದಿಯನ್ವಯ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಕುಗಳೆಂದು ಸರ್ಕಾರವು ಘೋಷಿಸಿದ್ದು, ಇದು ತಕ್ಷಣದಿಂದ ಜಾರಿಗೆ ಬಂದಿದೆ.
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ತಕ್ಷಣ ಮಾದರಿ ಚುನಾವಣಾ ನೀತಿ ಸಂಹಿತೆ ಸಹ ಜಾರಿಗೆ ಬರುತ್ತದೆ. ಕೂಡಲೇ ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧೆಡೆ ಅಳವಡಿಸಲಾಗಿರುವ ಜಾಹೀರಾತು, ಪ್ರಕಟಣೆ, ಬ್ಯಾನರ್‌ಗಳನ್ನು ತೆರವುಗೊಳಿಸಬೇಕಿದೆ.
ಚುನಾವಣಾ ಆಯೋಗದ ನಿರ್ದೇಶನವನ್ನು ಅಧಿಕಾರಿಗಳು ಪಾಲಿಸಬೇಕು. ಮಾಹಿತಿ ತಿಳಿಯದಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ತಮಗೆ ನಿಯೋಜಿಸಿರುವ ಕ್ಷೇತ್ರ ವ್ಯಾಪ್ತಿಯಲ್ಲಿ ಅಧಿಕಾರಿ/ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು.
ಚೆಕ್‍ಪೋಸ್ಟ್‌ಗಳಲ್ಲಿ ತಪಾಸಣೆ ಮಾಡಬೇಕು. ಹಣ, ಮದ್ಯ ಸಿಕ್ಕಿಬಿದ್ದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ಜರುಗಿಸಬೇಕು. ಸಿ-ವಿಜಿಲ್ ಆ್ಯಪ್ ಮೂಲಕ ಮಾಹಿತಿ ದೊರೆಯಲಿದ್ದು, ಆಯಾಯ ಸಂದರ್ಭದಲ್ಲಿ ಜಿಲ್ಲಾ ಚುನಾವಣಾ ವಿಭಾಗಕ್ಕೆ ಮಾಹಿತಿ ನೀಡಬೇಕಿದೆ.
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. ಸುಮಾರು 3.5 ಲಕ್ಷ ಸಿಬ್ಬಂದಿಗಳನ್ನು ಈ ಬಾರಿಯ ಚುನಾವಣಾ ಕಾರ್ಯಕ್ಕೆ ನಿಯೋಜನೆ ಮಾಡಲು ತೀರ್ಮಾನಿಸಿ, ಪಟ್ಟಿ ಮಾಡಲಾಗಿದೆ. ಪರೀಕ್ಷೆಗಳು ಮುಗಿದ ಬಳಿಕ ಶಾಲೆ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಚುನಾವಣಾ ಕಾರ್ಯದ ತರಬೇತಿಗೆ ಸೇರ್ಪಡೆಯಾಗುತ್ತಾರೆ. ಈಗ ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು, ಸಿಬ್ಭಂದಿಗೆ ತರಬೇತಿ ನೀಡಲಾಗುತ್ತಿದೆ.
2019ರಲ್ಲಿ ಒಟ್ಟು 7 ಹಂತದಲ್ಲಿ ಲೋಕಸಭೆ ಚುನಾವಣೆ ನಡೆದಿತ್ತು. ಈ ಬಾರಿ ಎಷ್ಟು ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ?. ಕರ್ನಾಟಕದಲ್ಲಿ ಯಾವಾಗ ಚುನಾವಣೆ ನಡೆಯಲಿದೆ? ಎಂಬುದು ಇನ್ನೂ ಅಂತಿಮವಾಗಿಲ್ಲ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications