ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಗೆ ಬಿಜೆಪಿಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್! ಯಾರಿದ್ದಾರೆ ರೇಸ್ ನಲ್ಲಿ?
ಬೆಂಗಳೂರು,ಸೆಪ್ಟೆಂಬರ್ 11: 2024 ರ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಫಿಕ್ಸ ಎನ್ನಲಾಗಿದ್ದು, ಕೆಲ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈ ತಪ್ಪಲಿದೆ ಎನ್ನುವ ಚರ್ಚೆ ಜೋರಾಗಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಭಾರೀ ಲಾಭಿ ನಡೆಯುತ್ತಿದೆ.
ಹೌದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ವಿ.ಸದಾನಂದಗೌಡ ಅವರಿಗೂ ಸಹ ಟಿಕೆಟ್ ಇಲ್ಲ ಎಂಬ ವರದಿ ಇದೆ. ಹೀಗಾಗಿ ಲೋಕಸಭಾ ಚುನಾವಣೆಗೆ ಇನ್ನೂ ಕೆಲ ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಪಾಳಯದಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಗಾಗಿ ಬೇಡಿಕೆ ಹೆಚ್ಚಾಗಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಕ್ಷೇತ್ರದ ಸಂಸದರುಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡಗೆ ಮುಂದಿನ ಬಾರಿ ಟಿಕೆಟ್ ನೀಡುವುದಿಲ್ಲ ಎಂಬ ವದಂತಿ ದಟ್ಟವಾಗಿ ಹಬ್ಬಿರುವ ಬೆನ್ನಲ್ಲೇ ಪಕ್ಷದ ಹಲವು ಜನ ನಾಯಕರು ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಮಾಜಿ ಸಚಿವರುಗಳು ಹಾಗೂ ಕೆಲ ನಾಯಕರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ತೆರೆಮರೆಯಲ್ಲಿ ಸಿದ್ದತೆ ಆರಂಭಿಸಿದ್ದು, ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.
ಒಟ್ಟು 8 ವಿಧಾನಸಭಾ ಕ್ಷೇತ್ರ ಹೊಂದಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳ ಹೆಚ್ಚಾಗಿರುವ ಹಿನ್ನೆಲೆ ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಬಿಜೆಪಿ ನಾಯಕರ ಕಣ್ಣೀಟ್ಟಿದ್ದಾರೆ. 2004,2009,2014,2019 ಕಳೆದ ನಾಲ್ಕು ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿರುವ ಕ್ಷೇತ್ರವಾಗಿದ್ದು, ಈ ಹಿನ್ನೆಲೆ ಮೋದಿ ಅಲೆಯಲ್ಲಿ ಬಿಜೆಪಿ ಭದ್ರಕೋಟೆಯಲ್ಲಿ ಗೆಲುವು ಸುಲಭ ಎಂಬ ಲೆಕ್ಕಾಚಾರದಲ್ಲಿರುವ ಕಮಲ ನಾಯಕರದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಹಲವು ಬಾರೀ ಬಿಜೆಪಿ ಅಭ್ಯರ್ಥಿ ಸುಲಭವಾಗಿ ಗೆಲುವು ಅನುಭವಿಸಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿಗೆ ಅನುಕೂಲಕರ ವಾತಾವರಣವಿದೆ ಎಂಬುದಕ್ಕೆ ಹಲವು ನಾಯಕರು ಕಣ್ಣೀಟ್ಟಿದ್ದಾರೆ. ಅಲ್ಲದೇ ಹಲವು ಜನ ಒಕ್ಕಲಿಗ ನಾಯಕರು ಸಹ ಈ ಕ್ಷೇತ್ರದ ಟಿಕೆಟ್ ಗಾಗಿ ಕಣ್ಣೀಟಿದ್ದಾರೆ.

ಈ ಕ್ಷೇತ್ರದ ಮೇಲೆ 2023 ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಿಜೆಪಿ ನಾಯಕ ಸಿ ಟಿ ರವಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣೀಟ್ಟಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಸಿಟಿ ರವಿ ಅವರಿಗೆ ಕ್ಷೇತ್ರದಲ್ಲಿನ ಸ್ವಪಕ್ಷದ ಶಾಸಕರಿಂದಲೇ ಸೋಲು ಅನುಭವಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಇನ್ನೂ ಚಿಕ್ಕಮಗಳೂರು - ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಒಳರಾಜಕೀಯ ಎಂಬ ಭಯ ಉಂಟಾಗಿದೆ. ಹೀಗಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಡೆ ಸಿ ಟಿ ರವಿ ಕಣ್ಣು ಹಾಕಿದ್ದಾರೆ ಎನ್ನಲಾಗಿದೆ.
ಇನ್ನೂ ಹಾಲಿ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಹಾಕಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಹ ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಕಣ್ಣೀಟ್ಟಿದ್ದಾರೆ ಎನ್ನಲಾಗಿದೆ. ಹಾಲಿ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ವಿರುದ್ದ ಸ್ಥಳೀಯ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಅಲ್ಲದೇ ನೀರಿಕ್ಷಿತ ಅಭಿವೃದ್ಧಿ ಕಂಡಿಲ್ಲ ಎಂಬ ಅಸಮಾಧಾನ ಕೇಳಿಬರುತ್ತಿದ್ದು, ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದು, ಮಾಜಿ ಸಚಿವ ಡಾ. ಕೆ ಸುಧಾಕರ್ ಸಹ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವ ಕುರಿತು ತೆರೆಮರೆಯಲ್ಲಿ ಕಸರತ್ತು ಮುಂದುವರೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಬ್ಯಾಟರಾಯನಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್ ಸಿ ತಮೇಶ್ ಗೌಡ ಅವರು ಸಹ ಈ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಸಿದ್ದತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇನ್ನೂ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಶಾಸಕ ಎ ಟಿ ರಾಮಸ್ವಾಮಿ ಅವರು ಸಹ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಈಗಾಗಲೇ ಬಿಜೆಪಿ ಹಿರಿಯ ನಾಯಕರ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾದ್ರೆ ಹಾಸಕ ಕ್ಷೇತ್ರ ಜೆಡಿಎಸ್ ಪಕ್ಷದ ಪಾಲಾಗುತ್ತದೆ. ಹೀಗಾಗಿ ಒಕ್ಕಲಿಗರ ಪ್ರಾಬಲ್ಯ ಹೆಚ್ಚಾಗಿರುವ ಭದ್ರಕೋಟೆಯಾಗಿರುವ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇತ್ತ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಈ ಬಾರೀ ಮಂಡ್ಯ ಕ್ಷೇತ್ರದಲ್ಲಿ ಗೆಲ್ಲುವುದು ಕಷ್ಟ ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಈ ಹಿಂದೆ 2019 ರ ಲೋಕಸಭಾ ಚುನಾವಣೆಯಲ್ಲಿ ಅನುಕಂಪದ ಅಲೆಯ ಗೆಲುವು ಈ ಬಾರಿ ಕಷ್ಟ ಸಾಧ್ಯ ಎನ್ನಲಾಗಿದೆ. ಅಲ್ಲದೇ ಬಿಜೆಪಿಗೆ ಬೆಂಬಲ ಕೊಟ್ಟ ಹಿನ್ನೆಲೆ ಈ ಬಾರಿ ಮಂಡ್ಯದಲ್ಲಿ ಗೆಲುವು ಕಷ್ಟ ಸಾಧ್ಯ ಎನ್ನಲಾಗಿದ್ದು, ಈ ಬಾರೀ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ.
ಈ ಬಾರಿ ಬೆಂಗಳೂರಿನವರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದು, ತನ್ನ ಮಗನಿಗೆ ಈ ಬಾರೀ ಟಿಕೆಟ್ ಕೊಡಿ ಎಂದು ಆರ್ ಅಶೋಕ್ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಒಟ್ನಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಸಿದ್ದತೆ ನಡೆಸಿದ್ದು, ಬೆಂಗಳೂರು ಉತ್ತರ ಕ್ಷೇತ್ರದಿಂದ ಅಂತಿಮವಾಗಿ ಹೈಕಮಾಂಡ್ ಈ ಬಾರಿ ಯಾರಿಗೆ ಟಿಕೆಟ್ ನೀಡಲಿದೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ.












Click it and Unblock the Notifications