‘ಬಿಜೆಪಿಯ ಮತ್ತೊಂದು ಫೇಕ್ ವಾಟ್ಸಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ’ ಹಿಂಗೆ ಹೇಳಿದ್ದು ಯಾರು?
ಬಿಜೆಪಿ ಪಕ್ಷವು ಲೋಕಸಭೆ ಚುನಾವಣೆ ಸಮಯದಲ್ಲೇ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಕರ್ನಾಟಕದ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಅದರಲ್ಲೂ ಸೋಷಿಯಲ್ ಮೀಡಿಯಾ ಮೂಲಕ ಈ ರೀತಿಯ ಸುಳ್ಳು ಸುದ್ದಿಗಳನ್ನು ಹೆಚ್ಚಾಗಿ ಹಬ್ಬಿಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪವನ್ನ ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸ್ಫೋಟಕ ಆರೋಪ ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳು ಬಂದ ನಂತರ ಸುಳ್ಳು ಸುದ್ದಿಗಳು ಜೋರಾಗಿ ಹಬ್ಬುತ್ತಿವೆ ಎಂಬ ಆರೋಪ ಈ ಮೊದಲಿನಿಂದ ಕೂಡ ಕೇಳಿಬರುತ್ತಿದೆ. ಅದ್ರಲ್ಲೂ ಸೋಷಿಯಲ್ ಮೀಡಿಯಾ ಮೂಲಕ ಬಿಜೆಪಿ ಸುಳ್ಳು ಸುದ್ದಿ ಹಬ್ಬಿಸಿ, ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಿಸೋದಕ್ಕೆ ಯತ್ನಿಸುತ್ತಿದೆ ಎಂಬುದು ಕಾಂಗ್ರೆಸ್ ನಾಯಕರ ಆರೋಪ. ಅದೇ ರೀತಿಯಾಗಿ ಈಗ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಿಚಾರವಾಗಿ ಕೂಡ ಬಿಜೆಪಿ ಸೋಷಿಯಲ್ ಮೀಡಿಯಾ ಮೂಲಕ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು, ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಈಗ ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೆ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದೇನು? ಆ ಬಗ್ಗೆ ಮಾಹಿತಿಗೆ ಮುಂದೆ ಓದಿ.

ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು...
ಈ ಕುರಿತು ಟ್ವೀಟ್ ಮಾಡಿರುವ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು, 'ಬಿಜೆಪಿಯ ಮತ್ತೊಂದು ಫೇಕ್ ವಾಟ್ಸಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ. 🚨 ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು @BJP4Karnataka ದ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್ ಯುನಿವರ್ಸಿಟಿ ಆಟವಾಗಿದೆ. ಅವರು ಹಿಂದುಳಿದ ಜಾತಿಗೆ ಸೇರಿದವರಾಗಿದ್ದು ದಾಖಲೆಗಳು ಇಲ್ಲಿವೆ. ರಾಜ್ಯದಲ್ಲಿ ಇನ್ನೊಂದು ಹಂತದ ಚುನಾವಣೆ ಹತ್ತಿರ ಇರೋದರಿಂದ ಜನರನ್ನು ದಾರಿ ತಪ್ಪಿಸಿ ಅವರ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಭಯ ಶುರುವಾಗಿರುವುದು ಸ್ಪಷ್ಟ.' ಎಂದು ಗಂಭೀರ ಆರೋಪ ಮಾಡಿದ್ದಾರೆ ಸಾರಿಗೆ ಸಚಿವರು.
ಬಿಜೆಪಿಯ ಮತ್ತೊಂದು ಫೇಕ್ ವಾಟ್ಸಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ. 🚨
— Ramalinga Reddy (@RLR_BTM) May 2, 2024
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ.
ಇದು @BJP4Karnatakaದ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್… pic.twitter.com/OJTmYm3ZsD
ಚುನಾವಣೆ ಮೇಲೆ ಏನು ಪ್ರಭಾವ?
ಒಟ್ನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಲವಾರು ಸುಳ್ಳು ಸುದ್ದಿಗಳು ಹರಡುತ್ತಿವೆ ಎಂಬ ಬಗ್ಗೆ ಪದೇ ಪದೇ ಗಂಭೀರ ಆರೋಪ ಕೇಳಿಬರುತ್ತಿದೆ. ಹೀಗಾಗಿ, ಕಾಂಗ್ರೆಸ್ ನಾಯಕರು ಈ ಬಗ್ಗೆ ಬಿಜೆಪಿ ವಿರುದ್ಧ ಹರಿಹಾಯುತ್ತಿದ್ದಾರೆ. ಈ ಆರೋಪಕ್ಕೆ ಬಿಜೆಪಿ ಯಾವ ರೀತಿ ರಿಯಾಕ್ಷನ್ ಕೊಡುತ್ತೆ? ಲೋಕಸಭೆ ಚುನಾವಣೆಯ, 2ನೇ ಹಂತದ ಮತದಾನದ ಮೇಲೆ ಈ ಬೆಳವಣಿಗೆ ಯಾವ ರೀತಿ ಪ್ರಭಾವ ಬೀರಬಹುದು? ಅನ್ನೋದನ್ನ ಕಾದು ನೋಡಬೇಕಿದೆ.












Click it and Unblock the Notifications