ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಿಂದ 22ರಿಂದ 28 ಸ್ಥಾನ ಗೆಲುತ್ತಾ ಬಿಜೆಪಿ?
ಪ್ರಧಾನಿ ಮೋದಿ ನೇತೃತ್ವದಲ್ಲಿ ಹ್ಯಾಟ್ರಿಕ್ ಬಾರಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಎನ್‌ಡಿಎ ಸಜ್ಜಾಗಿದೆ. ಅದರಲ್ಲೂ ಈ ಬಾರಿ ಕನಿಷ್ಠ 400 ಸ್ಥಾನ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲ್ಯಾನ್‌ನ ಮಾಡಿದೆ. ಹೀಗಾಗಿ ಕರ್ನಾಟಕ ಸೇರಿದಂತೆ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಬಿಜೆಪಿ ನಾಯಕರು ಫಿಕ್ಸ್ ಆಗಿದ್ದಾರೆ. ಹೀಗಿದ್ದಾಗ ಫೈಟಿಂಗ್ ಕೂಡ ಜೋರಾಗಿದ್ದು, ಇತ್ತೀಚೆಗೆ ಹೊರಬಿದ್ದಿರುವ ಸಮೀಕ್ಷೆಗಳು ಕೂಡ ಕರ್ನಾಟಕದಲ್ಲಿ ಬಿಜೆಪಿ ಭರ್ಜರಿ ಗೆಲುವನ್ನೇ ಪ್ರತಿಪಾದಿಸಿವೆ.
ಬಿಜೆಪಿ 2014ರಲ್ಲಿ ಮೊದಲ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿಯಿತು. ಅಲ್ಲಿಂದ ಈವರೆಗೆ ಒಟ್ಟಾರೆ 10 ವರ್ಷಗಳ ಆಡಳಿತದಲ್ಲಿ ಮತ್ತಷ್ಟು ಪ್ರಬಲವಾಗಿ ಬೆಳೆದಿದೆ. ಅದರಲ್ಲೂ ಈಗಿನ ಪರಿಸ್ಥಿತಿ ನೋಡುತ್ತಿದ್ದರೆ, ಬಿಜೆಪಿ ಭರ್ಜರಿ ಗೆಲುವುನ್ನು ದಾಖಲಿಸುತ್ತದೆ ಎನ್ನಲಾಗುತ್ತಿದೆ. ಈ ಮಧ್ಯೆ ಮತ್ತೊಂದು ಸಂಗತಿ ಕೂಡ ಗೊತ್ತಾಗುತ್ತಿದೆ, ಅದು ಏನೆಂದರೆ ಕರ್ನಾಟಕದಲ್ಲಿ ಈಗ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಭರ್ಜರಿ ದಿಗ್ವಿಜಯ ಸಿಗುವುದು ಗ್ಯಾರಂಟಿ ಅಂತಾ ಹೇಳಲಾಗುತ್ತಿದೆ. ಹಾಗಾದರೆ ಸಮೀಕ್ಷೆಗಳ ಪ್ರಕಾರ 2024 ರಲ್ಲಿ ಬಿಜೆಪಿ ಕರ್ನಾಟಕ ರಾಜ್ಯದಲ್ಲಿ ಎಷ್ಟು ಸ್ಥಾನ ಗೆಲ್ಲಬಹುದು? ಮುಂದೆ ಓದಿ.

ಸಮೀಕ್ಷೆಗಳ ಭವಿಷ್ಯ ನಿಜವಾಗುತ್ತಾ?
ಲೋಕಸಭೆ ಚುನಾವಣೆ ಅಖಾಡ ರಂಗು ರಂಗಾಗಿದೆ. ಗೆಲುವು ಒಂದೇ ಮಂತ್ರ ಎಂದು ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷ ಕೈಜೋಡಿಸಿ, ಎನ್‌ಡಿಎ ಒಕ್ಕೂಟಕ್ಕು ಸೇರಿದ ನಂತರ ವಾತಾವರಣ ಬಹುತೇಕ ಬದಲಾಗಿ ಹೋಗಿದೆ. ಇದೀಗ ಹೊರಬಿದ್ದಿರುವ ಕೆಲವು ಸಮೀಕ್ಷೆಗಳ ಪ್ರಕಾರವೇ, ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ 2024 ರ ಲೋಕಸಭೆ ಚುನಾವಣೆಯಲ್ಲಿ ಬರೋಬ್ಬರಿ 22ರಿಂದ 28 ಸ್ಥಾನ ಗೆಲ್ಲಬಹುದು ಎನ್ನಲಾಗುತ್ತಿದೆ. ಈ ಮೂಲಕ ಸಂಚಲನ ಸೃಷ್ಟಿಯಾಗಿದೆ. ಆದರೆ ಸಮೀಕ್ಷೆಗಳ ಮಾತು ನಿಜವಾಗುತ್ತಾ? ಅನ್ನೋ ಪ್ರಶ್ನೆಯನ್ನ ವಿಪಕ್ಷಗಳು ಕೇಳುತ್ತಿವೆ.
ಕರ್ನಾಟಕಕ್ಕೆ ಅಣ್ಣಾಮಲೈ ಎಂಟ್ರಿ?
ಅಣ್ಣಾಮಲೈ ಅವರ ಹೆಸರು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ದೊಡ್ಡ ಸದ್ದು ಮಾಡುತ್ತಿದೆ. ಹೀಗಾಗಿಯೇ ಈ ಬಾರಿ ಕೆ. ಅಣ್ಣಾಮಲೈ ಅವರನ್ನು ಕರಾವಳಿ ಭಾಗದ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ಸಾಗಿವೆ ಎಂಬ ಮಾತು ಹರಿದಾಡಿದೆ. ಇನ್ನೊಂದು ಕಡೆ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಇದೀಗ ದಕ್ಷಿಣ ಕನ್ನಡದಲ್ಲಿ ಅಸಮಾಧಾನ ಇದೆ ಎಂಬ ಆರೋಪಗಳು ಕೇಳಿಬರುತ್ತಿದೆ. ಹೀಗಾಗಿ ಕಟೀಲ್ ಬದಲು, ಈಗ ಅಣ್ಣಾಮಲೈ ಅವರನ್ನ ದಕ್ಷಿಣ ಕನ್ನಡದಿಂದ ಲೋಕಸಭೆಗೆ ಇಳಿಸಲು ಚರ್ಚೆ ನಡೆದಿಯಂತೆ. ಆದ್ರೆ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲ. ಇದೇ ರೀತಿ ಇನ್ನೂ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಒಟ್ನಲ್ಲಿ ಹೀಗೆ 2024ರ ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕದ ಪಾಲಿಟಿಕ್ಸ್ ಸಿಕ್ಕಾಪಟ್ಟೆ ಗಮನ ಸೆಳೆದಿದೆ. ಹೀಗಾಗಿ ಇದೆಲ್ಲ ಎಲ್ಲಿಗೆ ಬಂದು ನಿಲ್ಲುತ್ತೆ? ಅನ್ನೋದು ಇನ್ನು ಕೆಲವೇ ಕೆಲವು ದಿನದಲ್ಲಿ ಗೊತ್ತಾಗಲಿದೆ. ಬಿಜೆಪಿ ನಾಯಕರು ಅಭ್ಯರ್ಥಿಗಳ ಆಯ್ಕೆಯಲ್ಲಿ, ಯಾವ ರೀತಿಯ ರಣತಂತ್ರ ಅನುಸರಿಸುತ್ತಾರೆ? ಈ ಮೂಲಕ ವಿರೋಧ ಪಕ್ಷಗಳಿಗೆ ಹೇಗೆ ಆಘಾತ ನೀಡುತ್ತಾರೆ ಅನ್ನೋದು ಕೂಡ ಗೊತ್ತಾಗಲಿದೆ.












Click it and Unblock the Notifications