‘ಯಾಕೆ ನಮ್ಮ ಕೈಯಲ್ಲಿ ಬಡಿಗೆ ಕೊಟ್ಟು ಬಡಿಸಿಕೊಳ್ಳುತ್ತೀರಿ?’

2024ರ ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದ ರಾಜಕೀಯ ರಂಗಾಗಿದ್ದು, ಬಿಜೆಪಿ & ಕಾಂಗ್ರೆಸ್ ನಾಯಕರ ನಡುವೆ ನೇರ ಯುದ್ಧ ನಡೆಯುತ್ತಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನಡುವೆ ಮಾತಿನ ಯುದ್ಧ ಶುರುವಾಗಿದೆ. ಆರ್. ಅಶೋಕ್ ಮಾಡಿದ್ದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ ನೀಡಿದ್ದಾರೆ.

ಹೌದು, ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ 'ಸನ್ಮಾನ್ಯ @RAshokaBJP ಅವರೇ, ಯಾಕೆ ನಮ್ಮ ಕೈಯಲ್ಲಿ ಬಡಿಗೆ ಕೊಟ್ಟು ಬಡಿಸಿಕೊಳ್ಳುತ್ತೀರಿ? ರಾಜ್ಯ ಸರ್ಕಾರದ ಸಾಲದ ಲೆಕ್ಕ ಹೇಳಿದ್ದೀರಿ, ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ನಿಮ್ಮದೇ ಪಕ್ಷದ ಸರ್ಕಾರದ ಸಾಲದ ಕತೆಯನ್ನು ಸ್ವಲ್ಪ ಹೇಳಿ ಬಿಡಿ. ನೀವು ಮರೆತಿದ್ದರೆ ನಾನು ಹೇಳುತ್ತೇನೆ ಕೇಳಿ. 2014ರಲ್ಲಿ ಕೇವಲ ರೂ.55 ಲಕ್ಷ ಕೋಟಿಯಷ್ಟು ಇದ್ದ ಭಾರತದ ಸಾಲ ಈ ಹಣಕಾಸಿನ ವರ್ಷದಲ್ಲಿ ರೂ.183.67 ಲಕ್ಷ ಕೋಟಿಗೆ ತಲುಪಿದೆ.'

Lok Sabha Election 2024 This Is How CM Siddaramaiah Reacts To R Ashok

'ಹತ್ತು ವರ್ಷಗಳಲ್ಲಿ @narendramodi ಅವರು ಮಾಡಿರುವ ಸಾಲ ರೂ. 123 ಲಕ್ಷ ಕೋಟಿ. ಅಂದರೆ ಪ್ರತಿಯೊಬ್ಬ ಭಾರತೀಯನ ತಲೆಮೇಲೆ 92 ಸಾವಿರ ರೂಪಾಯಿಗಳ ಸಾಲದ ಹೊರೆ ಇದೆ. "ಸಬ್ ಕಾ ಸಾಥ್ ಸಬ್ ಕೋ ಸಾಲ".' ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

'ಸ್ವಲ್ಪ ಕೇಳಿಸಿಕೊಳ್ಳಿ...'

ಹಾಗೇ ತಮ್ಮ ಪ್ರತಿಕ್ರಿಯೆ ಸರಣಿ ಟ್ವೀಟ್‌ನಲ್ಲಿ ಮುಂದುವರಿಸಿರುವ ಸಿಎಂ ಸಿದ್ದರಾಮಯ್ಯ, 'ಸನ್ಮಾನ್ಯ @RAshokaBJP ಅವರೇ, ನಿಮಗೆ ಈ ಆರ್ಥಿಕ ವ್ಯವಹಾರಗಳು ಅರ್ಥವಾಗುವುದಿದ್ದರೆ ಸ್ವಲ್ಪ ಕೇಳಿಸಿಕೊಳ್ಳಿ. ನಮ್ಮ ರಾಜ್ಯ ಸರ್ಕಾರದ ಸಾಲ ''ಹಣಕಾಸು ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ (ಎಫ್ ಆರ್ ಬಿ)ಯ ವ್ಯಾಪ್ತಿಯಲ್ಲಿಯೇ ಇದೆ. ನಮ್ಮ ಸಾಲ ಒಟ್ಟು ಸಾಲ ಒಂದು ಲಕ್ಷ ಕೋಟಿಯನ್ನು ಮೀರಿದ್ದರೂ ಅದು ನಮ್ಮ ಜಿಎಸ್‌ಡಿಪಿಯ ಶೇಕಡ 25ರ ಮಿತಿಯೊಳಗೆಯೇ ಇದೆ. ನಮ್ಮ ಹಣಕಾಸು ಕೊರತೆ ಕೂಡಾ ಜಿಎಸ್‌ಡಿಪಿಯ ಶೇಕಡಾ ಮೂರನ್ನು ಮೀರಿಲ್ಲ.'

'ಕೇಂದ್ರದ @BJP4India ಆಡಳಿತದಲ್ಲಿ ಸರ್ಕಾರದ ಸಾಲ ಮಾತ್ರ ಹೆಚ್ಚಾಗುತ್ತಿಲ್ಲ, ಅವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ವೈಯಕ್ತಿಕ ಸಾಲ ಕೂಡಾ ಹೆಚ್ಚಾಗುತ್ತಿದ್ದರೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿಯತ್ತಿದೆ. ಹಾಗಿದ್ದರೆ @narendramodi ಸರ್ಕಾರದ ಸಾಲದ ಹಣ ಎಲ್ಲಿ ಸೋರಿಹೋಗುತ್ತಿದೆ?' ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

'ಬೆಲೆ ಏರಿಕೆ, ನಿರುದ್ಯೋಗ...'

ಹಾಗೇ ಸಿಎಂ ಸಿದ್ದರಾಮಯ್ಯ, 'ಬೆಲೆ ಏರಿಕೆ, ನಿರುದ್ಯೋಗಗಳಿಂದಾಗಿ ತತ್ತರಿಸಿ ಹೋಗಿರುವ ರಾಜ್ಯದ ಜನತೆ ನಮ್ಮ ಗ್ಯಾರಂಟಿ ಮತ್ತು ಇತರ ಜನ ಕಲ್ಯಾಣ ಯೋಜನೆಗಳಿಂದಾಗಿ ಉಸಿರಾಡುವಂತಾಗಿದೆ. ಗ್ಯಾರಂಟಿ ಯೋಜನಗೆಳು ರಾಜ್ಯದ ಒಂದೂವರೆ ಕೋಟಿ ಕುಟುಂಬಗಳನ್ನು ನೇರವಾಗಿ ತಲುಪಿದೆ. 1.22 ಕೋಟಿ ಮಹಿಳೆಯರು ನಮ್ಮ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ನಮ್ಮ ಗ್ಯಾರಂಟಿ ಮತ್ತಿತರ ಕಲ್ಯಾಣ ಯೋಜನೆಗಳಿಂದಾಗಿ ಪ್ರತಿ ಕುಟುಂಬದ ಮಾಸಿಕ ಆದಾಯ ಏಳರಿಂದ ಹತ್ತು ಸಾವಿರ ರೂಪಾಯಿಗಳಷ್ಟು ಹೆಚ್ಚಾಗಿದೆ.'

'ಮಾನ್ಯ @RAshokaBJP ಅವರೇ, ಬೆಂಗಳೂರು ನಗರದಲ್ಲಿ ಕೂತು ಆಧಾರವಿಲ್ಲದ ರಾಜಕೀಯ ಹೇಳಿಕೆಗಳನ್ನು ನೀಡುತ್ತಾ ಕಾಲ ಹರಣ ಮಾಡಬೇಡಿ. ಹಳ್ಳಿಗಳಿಗೆ ಹೋಗಿ ನಿಮ್ಮ @BJP4Karnataka ಪಕ್ಷದ ಬೆಂಬಲಿಗರ ಜೊತೆಯಲ್ಲಿಯೇ ಮಾತನಾಡಿ. ನಮ್ಮ ಸರ್ಕಾರದ ಯೋಜನೆಗಳಿಂದ ಅವರು ಏನನ್ನು ಪಡೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೆ ಕೇಳಿ ನೋಡಿ. ಇಡೀ ಕರ್ನಾಟಕ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡುತ್ತಿದೆ.' ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸವಾಲು ಎಸೆದಿದ್ದಾರೆ.

ಒಟ್ನಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಹತ್ತಿರ ಆಗುತ್ತಿದ್ದಂತೆ ಬಿಜೆಪಿ & ಕಾಂಗ್ರೆಸ್ ಮಧ್ಯೆ ಭರ್ಜರಿ ಟಾಕ್ ಫೈಟ್ ನಡೆಯುತ್ತಿದೆ. ಹೀಗೆ ಇವರ ನಡುವೆ ಶುರುವಾಗಿರುವ ಮಾತಿನ ಫೈಟ್ ನಿಲ್ಲಲು ಲೋಕಸಭೆ ಚುನಾವಣೆ ಮುಗಿಯಬೇಕು ಅಷ್ಟೇ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+