Lok Sabha Election 2024: ನಾಮಪತ್ರ ಸಲ್ಲಿಕೆ ವೇಳೆ ಈ ಅಂಶಗಳು ಗಮನದಲ್ಲಿರಲಿ
ಬೆಂಗಳೂರು, ಏಪ್ರಿಲ್. 12: ಲೋಕಸಭಾ ಚುನಾವಣೆಗೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಗಿದು, ಅಂತಿಮ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದೇ ವೇಳೆ ಎರಡನೇ ಹಂತದ ಚುನಾವಣೆಗೆ ಪ್ರಕ್ರಿಯೆ ಆರಂಭವಾಗಿದೆ. ಮೇ 7 ರಂದು ಮತದಾನ ಜರುಗಲಿದ್ದು, ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದ್ದು, ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಇದಾದ ಬಳಿಕ ಎರಡನೇ ಹಂತದಲ್ಲಿ ಎಷ್ಟು ಮಂದಿ ಅಭ್ಯರ್ಥಿಗಳು ಇರಲಿದ್ದಾರೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ.

ನಾಮಪತ್ರ ಸಲ್ಲಿಕೆ ವೇಳೆ ಗಮನಿಸಬೇಕಾದ ಅಂಶಗಳು
ಚುನಾವಣಾಧಿಕಾರಿಗಳ ಕಚೇರಿ (ಜಿಲ್ಲಾಧಿಕಾರಿಗಳ ಕಚೇರಿ) ಸುತ್ತಮುತ್ತಲು 200 ಮೀ. ವ್ಯಾಪ್ತಿಯಲ್ಲಿ ಗಡಿ ಗುರುತಿಸಿ, 100 ಮೀ. ವ್ಯಾಪ್ತಿಯನ್ನು ನಿರ್ಭಂದಿತ ಪ್ರದೇಶವನ್ನಾಗಿ ಗುರುತಿಸಲಾಗಿದೆ. 100 ಮೀ ನಿರ್ಬಂದಿತ ಪ್ರದೇಶದ ವ್ಯಾಪ್ತಿಯೊಳಗಡೆ ನಾಮಪತ್ರ ಸಲ್ಲಿಸಲು ಕೇವಲ 3 ವಾಹನಗಳಿಗೆ ಮಾತ್ರ ಅವಕಾಶವಿದೆ. ಅಭ್ಯರ್ಥಿಯ ವಾಹನಗಳು ಕಡ್ಡಾಯವಾಗಿ ಅನುಮತಿ ಪಡೆದ ವಾಹನಗಳಾಗಿರಬೇಕು ಹಾಗೂ ವಾಹನಗಳ ಮೇಲೆ ಅನುಮತಿ ಪತ್ರವನ್ನು ಲಗತ್ತಿಸಿರಬೇಕು.
ಮೂರು ವಾಹನಗಳಿಗೆ ಚುನಾವಣಾಧಿಕಾರಿಗಳ ಕಚೇರಿಯ ಮುಖ್ಯ ದ್ವಾರದ ಗೇಟಿನ ವರೆಗೆ ಮಾತ್ರ ಪ್ರವೇಶಕ್ಕೆ ಅನುಮತಿಸಲಾಗಿದೆ. ಚುನಾವಣಾ ಅಧಿಕಾರಿಗಳ ಕಚೇರಿಯ ಒಳಗಡೆ ಪ್ರವೇಶಿಸಲು ಅಭ್ಯರ್ಥಿಯೊಂದಿಗೆ 4 ಜನರಿಗೆ ಮಾತ್ರ ಅವಕಾಶವಿದೆ.
ಏಪ್ರಿಲ್ 12 ರಿಂದ ಏಪ್ರಿಲ್ 19, 2024 ರವರೆಗೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯೊಳಗಾಗಿ (ರಜಾದಿನಗಳನ್ನು ಹೊರತುಪಡಿಸಿ) ಅಭ್ಯರ್ಥಿಗಳು ತಮ್ಮ ನಾಮ ಪತ್ರಗಳನ್ನು ಸಲ್ಲಿಸಬಹುದು. ನಾಮ ಪತ್ರದೊಂದಿಗೆ ಈಗಾಗಲೇ ತಿಳಿಸಿರುವಂತೆ ರಾಜಕೀಯ ಪಕ್ಷಗಳ ಸಭೆ ಜರುಗಿಸಿ, ನಾಮಪತ್ರ ಪ್ರಕ್ರಿಯೆ ಹಾಗೂ ನಮೂನೆ, ದಾಖಲೆ, ಪ್ರತಿಗಳ ಸಂಖ್ಯೆ ಕುರಿತು ಮಾಹಿತಿ ನೀಡಲಾಗಿದೆ.

ನಾಮಪತ್ರ ನಮೂನೆ-2ಎ ಎಲ್ಲ ಕಾಲಂಗಳನ್ನು ಭರ್ತಿ ಮಾಡಿ ಅಭ್ಯರ್ಥಿ ಹಾಗೂ ಸೂಚಕರು ಸಹಿ ಮಾಡಿರಬೇಕು. ಠೇವಣಿ ಮೊತ್ತವು ಸಾಮಾನ್ಯ ವರ್ಗಕ್ಕೆ ರೂ. 25,000 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗಕ್ಕೆ 12,500 ರೂಪಾಯಿಯಾಗಿದೆ. ತಹಶೀಲ್ದಾರರಿಂದ ಪಡೆದ ಇತ್ತೀಚಿನ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಒಂದಕ್ಕಿಂತ ಹೆಚ್ಚಿನ ನಾಮಪತ್ರ ಸಲ್ಲಿಸಿದಲ್ಲಿ 2ನೇ ಹಾಗೂ ನಂತರದ ನಾಮ ಪತ್ರಗಳಿಗೆ ಈಗಾಗಲೇ ಠೇವಣಿ ಮಾಡಿದ ರಶೀದಿಯ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು.
ಅಭ್ಯರ್ಥಿಯ ಮೊಬೈಲ್ ಸಂಖ್ಯೆ, ವ್ಯಾಟ್ಸಪ್ ಸಂಖ್ಯೆ, ಇ-ಮೇಲ್ ವಿಳಾಸ, ಫೇಸ್ ಬುಕ್, ಟ್ವೀಟರ್, ಇನ್‌ಸ್ಟಾಗ್ರಾಮ್, ಟೆಲಿಗ್ರಾಂ ಹಾಗೂ ಇತ್ಯಾದಿ ಸಾಮಾಜಿಕ ಜಾಲತಾಣಗಳ ವಿವರಗಳನ್ನು ನಿಗದಿತ ನಮೂನೆಗಳಲ್ಲಿ ಸಲ್ಲಿಸಬೇಕು. ಯಾವ ಅಭ್ಯರ್ಥಿಯು ತಮ್ಮ ವಿರುದ್ಧದ ಅಪರಾಧ ಪ್ರಕರಣವನ್ನು ಹೊಂದಿರುವವರೋ ಅವು ಬಾಕಿ ಪ್ರಕರಣಗಳಾಗಲಿ ಅಥವಾ ಅವರ ಅಭ್ಯರ್ಥಿಯನ್ನು ಅಪರಾಧಿಯೆಂದು ನಿರ್ಣಯಿಸಿದ ಪ್ರಕರಣಗಳಾಗಲಿ ಅಂಥ ಅಭ್ಯರ್ಥಿಗಳು ಮಾನ್ಯ ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ ಸಿ-1, ಸಿ-2, ಘೋಷಣೆಯನ್ನು ಪ್ರಕಟಿಸಬೇಕಾಗುತ್ತದೆ ಹಾಗೂ ಸಿ-4 ರಲ್ಲಿ ವರದಿಯನ್ನು ಸಲ್ಲಿಸಬೇಕು.
ಅಂತಹ ಅಪರಾಧಗಳ ಪ್ರಕಟಣೆಗಳನ್ನು, ನಾಮಪತ್ರವನ್ನು ಹಿಂತೆಗೆದುಕೊಳ್ಳುವ ಮೊದಲ 4 ದಿನಗಳೊಳಗೆ, ಮುಂದಿನ 5 ರಿಂದ 8 ದಿನಗಳೊಳಗೆ, 9ನೇ ದಿನದಿಂದ ಪ್ರಚಾರದ ಕೊನೆಯ ದಿನದವರೆಗೆ (ಮತದಾನದ ದಿನಕ್ಕೆ ಮುಂಚಿನ 2ನೇ ದಿನ) ಮೂರು ಹಂತಗಳಲ್ಲಿ ಪ್ರಕಟಿಸಿ ವರದಿ ಸಲ್ಲಿಸಬೇಕಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು











Click it and Unblock the Notifications