ಮೂರು ಕ್ಷೇತ್ರಗಳ ಉಪ ಚುನಾವಣೆ: ಕಾಂಗ್ರೆಸ್ v/s ಮೈತ್ರಿಕೂಟ!
ಬೆಂಗಳೂರು, ಜೂನ್ 16: ಲೋಕಸಭಾ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸೀಟುಗಳಲ್ಲಿ ಜಯಗಳಿಸಿವೆ.
ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಮೂವರು ಶಾಸಕರು, ಒಬ್ಬರು ವಿಧಾನ ಪರಿಷತ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಮೂರು ವಿಧಾನಸಭಾ ಕ್ಷೇತ್ರ, ಒಂದು ವಿಧಾನ ಪರಿಷತ್ ಸ್ಥಾನಕ್ಕೆ ರಾಜ್ಯದಲ್ಲಿ ಉಪ ಚುನಾವಣೆ ನಡೆಯಬೇಕಿದೆ.

ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ (ಶಿಗ್ಗಾವಿ), ಜೆಡಿಎಸ್ ನಾಯಕ, ಮಂಡ್ಯ ಸಂಸದ ಎಚ್. ಡಿ. ಕುಮಾರಸ್ವಾಮಿ (ಚನ್ನಪಟ್ಟಣ), ಬಿಜೆಪಿ ವಿಧಾನ ಪರಿಷತ್ ಸದಸ್ಯ ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಮ್ಮ ಶಾಸಕ, ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳ್ಳಾರಿ ಸಂಸದ, ಕಾಂಗ್ರೆಸ್ ನಾಯಕ ಇ. ತುಕಾರಾಮ್ ಸಂಡೂರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದರು.
ಉಪ ಚುನಾವಣೆ ನಡೆಯಬೇಕಿದೆ: ಈಗ ಶಾಸಕರ ರಾಜೀನಾಮೆ ಕಾರಣದಿಂದ ಶಿಗ್ಗಾವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮತ್ತು ವಿಧಾನ ಪರಿಷತ್‌ನ ಸ್ಥಾನಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಶಾಸಕರು ರಾಜೀನಾಮೆ ನೀಡಿದ 6 ತಿಂಗಳಿನಲ್ಲಿ ಉಪ ಚುನಾವಣೆ ನಡೆಸಬೇಕು. ಆದ್ದರಿಂದ ಚುನಾವಣಾ ಆಯೋಗ ಯಾವಾಗ ಬೇಕಾದರೂ ಉಪ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಿದೆ.
ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಕ್ಷೇತ್ರದಲ್ಲಿ 7,05,538 ಮತಗಳನ್ನು ಪಡೆದು ಕಾಂಗ್ರೆಸ್‌ನ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು 43,513 ಮತಗಳ ಅಂತರದಿಂದ ಸೋಲಿಸಿದ್ದಾರೆ. ಶಿಗ್ಗಾವಿ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎಚ್. ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ 8,51,881 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು 2,84,620 ಮತಗಳ ಅಂತರದಿಂದ ಸೋಲಿಸಿದ್ದಾರೆ. ಚನ್ನಪಟ್ಟಣದ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇ. ತುಕಾರಾಮ್ ಬಳ್ಳಾರಿಯಲ್ಲಿ 7,30,845 ಮತಗಳನ್ನು ಪಡೆದು ಬಿಜೆಪಿಯ ಬಿ. ಶ್ರೀರಾಮುಲು ಅವರನ್ನು 98,992 ಮತಗಳ ಅಂತರದಿಂದ ಸೋಲಿಸಿದ್ದಾರೆ. ಸಂಡೂರು ಕ್ಷೇತ್ರ ಹಾಲಿ ಶಾಸಕರಾಗಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪ ಚುನಾವಣೆ ನಡೆಯಬೇಕಿದೆ.
2023ರ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿದೆ. ಆದ್ದರಿಂದ ಎಲ್ಲಾ ಚುನಾವಣೆಗಳಲ್ಲಿಯೂ ಸೀಟು ಹಂಚಿಕೆ ಮಾಡಿಕೊಳ್ಳಲಾಗುತ್ತಿದೆ. ಈಗ ರಾಜ್ಯದಲ್ಲಿ ಉಪ ಚುನಾವಣೆ ನಡೆದರೆ ಅದು ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವಿನ ಪೈಪೋಟಿಯಾಗಿರಲಿದೆ.
ಶಿಗ್ಗಾವಿ, ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರದ ಪೈಕಿ ಮೂರು ಕ್ಷೇತ್ರಗಳು ಮೂರು ಪಕ್ಷದ ಹಿಡಿತದಲ್ಲಿದ್ದವು. ಆದರೆ ಉಪ ಚುನಾವಣೆಯಲ್ಲಿ ಲೆಕ್ಕಾಚಾರ ಬೇರೆಯಾಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟದಲ್ಲಿ ಶಿಗ್ಗಾವಿ, ಚನ್ನಪಟ್ಟಣ ಮತ್ತು ಸಂಡೂರಿನಲ್ಲಿ ಯಾವ ಪಕ್ಷಕ್ಕೆ, ಯಾವ ಕ್ಷೇತ್ರ? ಎಂಬುದು ಕುತೂಹಲ ಮೂಡಿಸಿದೆ.
ಚನ್ನಪಟ್ಟಣವನ್ನು ಜೆಡಿಎಸ್ ಬಿಟ್ಟುಕೊಡದಿರಲೂಬಹುದು. ಆದರೆ ಪಕ್ಷದ ಅಭ್ಯರ್ಥಿ ಯಾರು?. ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲು ದೇವೇಗೌಡರು ಒಪ್ಪಿಗೆ ನೀಡಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ. ಶಿಗ್ಗಾವಿ, ಸಂಡೂರಿನಲ್ಲಿ ಜೆಡಿಎಸ್ ಪ್ರಭಾವವಿಲ್ಲ. ಆದ್ದರಿಂದ ಬಿಜೆಪಿಗೆ ಈ ಎರಡೂ ಕ್ಷೇತ್ರಗಳು ಹಂಚಿಕೆಯಾಗುವುದರಲ್ಲಿ ಅನುಮಾನ ಉಳಿದಿಲ್ಲ.
ಚನ್ನಪಟ್ಟಣದಲ್ಲಿ ಗೆದ್ದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿಗೆ ಹಿನ್ನಡೆ ಉಂಟು ಮಾಡಬೇಕು ಎಂದು ಕಾಂಗ್ರೆಸ್ ಈಗಾಗಲೇ ತಂತ್ರ ರೂಪಿಸುತ್ತಿದೆ. ಉಪ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ ಎಂದು ಮಾಜಿ ಸಂಸದ ಡಿ. ಕೆ. ಸುರೇಶ್ ಹೇಳುವ ಮೂಲಕ ಉಪ ಚುನಾವಣೆ ಕಾವು ಹೆಚ್ಚಿಸಿದ್ದಾರೆ.
ಸಂಡೂರಿನಲ್ಲಿ ಬಳ್ಳಾರಿ ಸಂಸದ ಇ. ತುಕಾರಾಮ್ ತಮ್ಮ ಪುತ್ರಿಗೆ ಟಿಕೆಟ್ ಕೇಳಿದ್ದಾರೆ ಎಂಬ ಮಾಹಿತಿ ಇದೆ. ಅಭ್ಯರ್ಥಿ ಯಾರು? ಎಂಬುದು ಅಂತಿಮವಾಗಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಕ್ಷೇತ್ರವನ್ನು ಕಾಂಗ್ರೆಸ್‌ನಿಂದ ಕಸಿದುಕೊಳ್ಳಲು ಯಾರಿಗೆ ಟಿಕೆಟ್ ನೀಡಲಿದೆ? ಎಂಬುದು ಕುತೂಹಲ.
ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಕ್ಷೇತ್ರವನ್ನು ಉಳಿಸಿಕೊಳ್ಳಲು ತಾವು ಸೂಚಿಸಿದ ಅಭ್ಯರ್ಥಿಗೆ ಟಿಕೆಟ್ ನೀಡಿ ಎಂದು ಬೇಡಿಕೆ ಇಡಬಹುದು. ಬಿಜೆಪಿ-ಜೆಡಿಎಸ್ ಸೇರಿ ಶಿಗ್ಗಾವಿಯನ್ನು ಬಿಜೆಪಿ ವಶದಲ್ಲಿಯೇ ಉಳಿಸಿಕೊಳ್ಳಲಿವೆಯೇ? ಕಾದು ನೋಡಬೇಕಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications