ಉಳಿದ ಐದು ಬಿಜೆಪಿ ಕ್ಷೇತ್ರಗಳಲ್ಲಿ ಟಿಕೆಟ್ ಫೈಟ್- ಯಾವ ಕ್ಷೇತ್ರದಲ್ಲಿ ಯಾರಿಗೆ ಸಿಗಲಿದೆ ಚಾನ್ಸ್‌?

ಬೆಂಗಳೂರು, ಮಾರ್ಚ್‌ 14: ಲೋಕಸಭಾ ಚುನಾವಣೆ ಹಿನ್ನೆಲೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಎರಡನೇ ಪಟ್ಟಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಘೋಷಿಸಿದೆ. ಮೊದಲ ಪಟ್ಟಿಯಲ್ಲಿ 195 ಅಭ್ಯರ್ಥಿಗಳನ್ನ ಘೋಷಿಸಿದ್ದ ಬಿಜೆಪಿ ಎರಡನೇ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದೆ.

ಲೋಕಸಭಾ ಚುಣಾವಣೆ ಹಿನ್ನೆಲೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್‌ ಘೋಷಣೆ ಮಾಡಿದೆ. ಕರ್ನಾಟಕದ ಹಲವು ಹಾಲಿ ಸಂಸದರಿಗೆ ಬಿಜೆಪಿ ಹೈಕಮಾಂಡ್‌ ಶಾಕ್‌ ನೀಡಿದೆ. ಅಲ್ಲದೇ ಕೆಲವು ಕ್ಷೇತ್ರದಲ್ಲಿ ಬಿಜೆಪಿ ವರಿಷ್ಠರು ಅಚ್ಚರಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದಾರೆ.

Lok Sabha Election 2024 Ticket fight in remaining five BJP constituencies

ಇನ್ನೂ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನ ಬಿಜೆಪಿ ಘೋಷಿಸಿದೆ. ಇನ್ನೂ ಜೆಡಿಎಸ್‌ ಗೆ ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರವನ್ನ ಬಿಜೆಪಿ ಹೈಕಮಾಂಡ್‌ ಬಿಟ್ಟು ಕೊಡಲು ನಿರ್ಧರಿಸಿದ್ದು, ಚಿತ್ರದುರ್ಗ, ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ರಾಯಚೂರು ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯೇ ಬಿಜೆಪಿಗೆ ದೊಡ್ಡ ಸವಾಲ್‌ ಆಗಿದೆ.

ಉಳಿದ ಐದು ಕ್ಷೇತ್ರಗಳಲ್ಲಿ ಟಿಕೆಟ್ ಫೈಟ್

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವರು ಹಾಗೂ ಹಾಲಿ ಸಂಸದರಾದ ಎ. ನಾರಾಯಣಸ್ವಾಮಿ ಅವರಿಗೆ ಈ ಬಾರಿ ಟಿಕೆಟ್‌ ಕೈ ತಪ್ಪಲಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಅಲ್ಲದೇ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್‌ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಎ. ನಾರಾಯಣಸ್ವಾಮಿ ಮತ್ತು ಮಾಜಿ ಸಂಸದ ಜನಾರ್ದನ ಸ್ವಾಮಿ ನಡುವೆ ಫೈಟ್ ಏರ್ಪಡಿಲಿದೆ. ಇನ್ನೂ ಕುಂದನಗರ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಂಗಳಾ ಅಂಗಡಿ, ಮಹಾಂತೇಶ್ ಕವಟಗಿಮಠ, ರಮೇಶ್ ಕತ್ತಿ ನಡುವೆ ತೀವ್ರ ಫೈಪೋಟಿ ಏರ್ಪಟ್ಟಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಗೆ ಟಿಕೆಟ್‌ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

Lok Sabha Election 2024 Ticket fight in remaining five BJP constituencies

ಇನ್ನೂ ಹಿಂದುತ್ವದ ಭದ್ರಕೋಟೆಯಾದ ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರು ಈ ಹಿಂದೆ ಪಕ್ಷದ ಕಾರ್ಯಕ್ರಮಗಳಿಂದಲೂ ದೂರ ಉಳಿದಿದ್ದು, ಈ ಬಾರಿಯ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ಸಿಗುವುದು ಅನುಮಾನ ಎನ್ನುವ ಮಾತುಗಳು ಕೇಳಿ ಬಂದಿದ್ದು, ಈ ಕ್ಷೇತ್ರದಿಂದ ವಿಶ್ಚೇಶ್ವರ ಹೆಗಡೆ ಕಾಗೇರಿ, ಗೋಪಾಲ್ ಹೆಸರು ಚರ್ಚೆಯಲ್ಲಿದೆ. ಇತ್ತ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ಮತ್ತು ಅಲೋಕ್ ವಿಶ್ವನಾಥ್ ನಡುವೆ ಫೈಟ್ ಏರ್ಪಟ್ಟಿದ್ರೆ, ರಾಯಚೂರು ಕ್ಷೇತ್ರದಲ್ಲಿ ಹಾಲಿ ಸಂಸದ ರಾಜಾ ಅಮರೇಶ ನಾಯಕ್ ಮತ್ತು ಬಿ.ವಿ‌‌. ನಾಯಕ್ ನಡುವೆ ಟಿಕೆಟ್‌ ಗಾಗಿ ತೀವ್ರ ಜಟಾಪಟಿ ಏರ್ಪಟ್ಟಿದ್ದು, ಬಿಜೆಪಿ ಹೈಕಮಾಂಡ್‌ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ.

ಯಾರ್ಯಾರಿಗೆ ಟಿಕೆಟ್?

ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ

ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ

ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ

ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್

ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ

ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು

ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ

ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು

ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್

ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು

ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್

ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ

ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ

ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ

ಯಾರ ಬದಲಿಗೆ ಯಾರಿಗೆ ಟಿಕೆಟ್​?

ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ಬದಲಿಗೆ ಬ್ರಿಜೇಶ್​ ಚೌಟಾಗೆ ಟಿಕೆಟ್

ಮೈಸೂರು- ಪ್ರತಾಪ್​ ಸಿಂಹ ಬದಲು ಯದುವೀರ ಒಡೆಯರ್​ಗೆ ಟಿಕೆಟ್

ಬಳ್ಳಾರಿಯಲ್ಲಿ ದೇವೇಂದ್ರಪ್ಪ ಬದಲು ಶ್ರೀರಾಮುಲುಗೆ ಟಿಕೆಟ್

ಹಾವೇರಿಯಲ್ಲಿ ಶಿವಕುಮಾರ್ ಬದಲು ಬೊಮ್ಮಾಯಿಗೆ ಟಿಕೆಟ್

ತುಮಕೂರಿನಲ್ಲಿ G.S​.ಬಸವರಾಜು ಬದಲು ಸೋಮಣ್ಣ ಟಿಕೆಟ್

ಕೊಪ್ಪಳದಲ್ಲಿ ಸಂಗಣ್ಣ ಕರಡಿ ಬದಲು ಡಾ.ಬಸವರಾಜ​ ಕ್ಯಾವಟರ್ ಟಿಕೆಟ್

ಹಾಲಿ ಸಂಸದ ಸದಾನಂದಗೌಡರಿಗೆ ಕೈತಪ್ಪಿದ ಬಿಜೆಪಿ ಟಿಕೆಟ್

ಬೆಂಗಳೂರು ಉತ್ತರ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಟಿಕೆಟ್

ಚಾಮರಾಜನಗರದಿಂದ ವಿ.ಶ್ರೀನಿವಾಸ​ ಪ್ರಸಾದ್​ ಬದಲಿಗೆ ಎಸ್​.ಬಾಲರಾಜುಗೆ ಟಿಕೆಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+