Get Updates
Get notified of breaking news, exclusive insights, and must-see stories!

Lok Sabha Election 2024; ಕಾಂಗ್ರೆಸ್ ನಾಯಕರ ನಿದ್ದೆ ಕದ್ದ ಸಮೀಕ್ಷೆ

ಬೆಂಗಳೂರು, ಫೆಬ್ರವರಿ 08: ಲೋಕಸಭೆ ಚುನಾವಣೆ ಎದುರಾಗಿದೆ. ರಾಜಕೀಯ ಪಕ್ಷಗಳು, ಚುನಾವಣಾ ಆಯೋಗದ ತಯಾರಿ ನಡೆಯುತ್ತಿದೆ. ಮಾರ್ಚ್‌ನಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಇಂತಹ ಸಮಯದಲ್ಲಿ ವಿವಿಧ ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತಿವೆ.

2024ರ ಲೋಕಸಭೆ ಚುನಾವಣೆ ಕುರಿತು Times Now ಮತ್ತು Matrize News ನಡೆಸಿದ ಸಮೀಕ್ಷೆಯ ವರದಿ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿಯೂ ಸಮೀಕ್ಷೆ ನಡೆದಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿವೆ.

Lok Sabha Election 2024 Times Now Matrize News Survey 21 Seat For BJP In Karnataka

ಸಮೀಕ್ಷೆಯ ವರದಿಯ ಪ್ರಕಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 366 ಸ್ಥಾನಗಳಲ್ಲಿ ಜಯಗಳಿಸಲಿದೆ. ಇಂಡಿಯಾ ಮೈತ್ರಿಕೂಟ 104 ಮತ್ತು ಇತರರು 73 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸೀಟು?; Times Now ಮತ್ತು Matrize News ನಡೆಸಿದ ಸಮೀಕ್ಷೆಯ ವರದಿ ಕರ್ನಾಟಕದ ಕಾಂಗ್ರೆಸ್ ನಾಯಕರ ನಿದ್ದೆ ಕದ್ದಿದೆ. ಕಾರಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದರೆ ಪಕ್ಷ ಲೋಕಸಭೆ ಚುನಾವಣೆಯಲ್ಲಿ 5 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷೆಯ ವರದಿ ಹೇಳಿದೆ.

ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 21, ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಯ ವರದಿ ಹೇಳಿದೆ. ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದೆ. ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಜೆಡಿಎಸ್‌ಗೆ 5 ಕ್ಷೇತ್ರವನ್ನು ಬಿಜೆಪಿ ನೀಡಬಹುದು ಎಂದು ಅಂದಾಜಿಸಲಾಗಿದೆ. ಆದರೆ ಇನ್ನೂ ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ಮಾತುಕತೆ ಅಂತಿಮಗೊಂಡಿಲ್ಲ.

ಸಮೀಕ್ಷೆಯ ವರದಿ ಪ್ರಕಾರ ರಾಜ್ಯದಲ್ಲಿ ಬಿಜೆಪಿ ಶೇ 46.2ರಷ್ಟು ಮತಗಳನ್ನು ಗಳಿಸಲಿದೆ. ಕಾಂಗ್ರೆಸ್ ಪಕ್ಷ 42.3ರಷ್ಟು ಮತಗಳು. ಎಚ್. ಡಿ. ದೇವೇಗೌಡ ನೇತೃತ್ವದ ಜೆಡಿಎಸ್ ಪಕ್ಷ 8.4ರಷ್ಟು ಮತಗಳನ್ನು ಗಳಿಸಲಿದೆ. ಇತರರು ಶೇ 3.1ರಷ್ಟು ಮತಗಳನ್ನು ಪಡೆಯಬಹುದು ಎಂದು ಅಂದಾಜಿಸಲಾಗಿದೆ.

ವರದಿಯಂತೆ ದಕ್ಷಿಣದಲ್ಲಿ ಬಿಜೆಪಿ 27 ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ. ಇವುಗಳಲ್ಲಿ ಕರ್ನಾಟಕದಲ್ಲಿಯೇ 21 ಸೀಟುಗಳು ಪಕ್ಷಕ್ಕೆ ಸಿಗಲಿವೆ. ಬಿಜೆಪಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲೂ ಖಾತೆ ತೆರೆಯಲಿದೆ ಎಂದು ಸಮೀಕ್ಷೆ ಹೇಳಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಒಂದೇ ಸ್ಥಾನ (ಬೆಂಗಳೂರು ಗ್ರಾಮಾಂತರ)ದಲ್ಲಿ ಜಯಗಳಿಸಿತ್ತು. ಜೆಡಿಎಸ್ ಪಕ್ಷ ಒಂದು (ಹಾಸನ)ದಲ್ಲಿ ಗೆಲುವು ಕಂಡಿತ್ತು. ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆದ್ದಿದ್ದರು. 25 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಕಂಡಿತ್ತು.

ಆದರೆ ಈ ಬಾರಿಯ ರಾಜ್ಯದ ರಾಜಕೀಯ ಚಿತ್ರಣ ಬೇರೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿದೆ. 20+ ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಹೈಕಮಾಂಡ್ ನಾಯಕರು ಪಕ್ಷಕ್ಕೆ ಟಾರ್ಗೆಟ್ ನೀಡಿದ್ದಾರೆ. ಇದಕ್ಕಾಗಿ ತಯಾರಿಯನ್ನು ಕಾಂಗ್ರೆಸ್ ನಡೆಸುತ್ತಿದೆ. ಕಳೆದ ಬಾರಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಪಕ್ಷ ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಹೋಗುತ್ತಿದೆ.

ದಕ್ಷಿಣದ ರಾಜ್ಯಗಳು ಸೀಟು ಲೆಕ್ಕಾಚಾರ; ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 400 ಸೀಟುಗಳಲ್ಲಿ ಗೆಲ್ಲಬೇಕು ಎಂಬುದು ಎನ್‌ಡಿಎ ಗುರಿಯಾಗಿದೆ. ಇದಕ್ಕೆ ಕರ್ನಾಟಕ ರಾಜ್ಯ ದೊಡ್ಡ ಮಟ್ಟದಲ್ಲಿ ಸಹಾಯ ಮಾಡಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್-ಡಿಎಂಕೆ ಮೈತ್ರಿಯು ತಮಿಳುನಾಡಿನಲ್ಲಿ 39 ಸ್ಥಾನಗಳ ಪೈಕಿ 36ರಲ್ಲಿ ಗೆಲುವು ಪಡೆಯಲಿದೆ. ಬಿಜೆಪಿಗೆ ಒಂದು ಸೀಟು ಸಿಗಲಿದೆ ಎಂದು ಸಮೀಕ್ಷೆ ಹೇಳಿದೆ.

ತೆಲಂಗಾಣದಲ್ಲಿಯೂ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಚುನಾವಣೆಯಲ್ಲಿ ಬಿಜೆಪಿ 5 ಸೀಟು ಗೆಲ್ಲಲಿದೆ. ಕಾಂಗ್ರೆಸ್ 9, ಬಿಆರ್‌ಎಸ್ ಪಕ್ಷ 2, ಎಐಎಂಐಎಂ 1 ಸೀಟನ್ನು ಗೆಲ್ಲಲಿದೆ. ಆಂಧ್ರ ಪ್ರದೇಶ ಮತ್ತು ಕೇರಳದಲ್ಲಿ ಬಿಜೆಪಿ ನಿರೀಕ್ಷಿತ ಪ್ರತಿಸ್ಪರ್ಧೆ ನೀಡುವುದಿಲ್ಲ ಎಂದು ಸಮೀಕ್ಷೆಯ ವರದಿ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+