Get Updates
Get notified of breaking news, exclusive insights, and must-see stories!

Final Voters list: ರಾಜ್ಯದ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು ಮತದಾರರು, ಅಂಕಿ ಸಂಖ್ಯೆಗಳು

ಬೆಂಗಳೂರು, ಜನವರಿ 22: ಲೋಕಸಭಾ ಚುನಾವಣೆ ಅಂಗವಾಗಿ ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ 2024 ಅನ್ನು ರಾಜ್ಯ ಚುನಾವಣೆ ಆಯೋಗ ಬಿಡುಗಡೆ ಮಾಡಿದೆ. ಪ್ರಕಟಗೊಂಡ ಬಳಿಕ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ರಾಜಕೀಯ ಪಕ್ಷಗಳ ಜತೆ ಸಭೆ ನಡೆಸಿದರು. ಹಾಗಾದರೆ ಎಷ್ಟು ಮತದಾರರು ಇದ್ದಾರೆ?, ಯಾವ ಮತದಾರರು ಇದ್ದಾರೆ, ಅಂಕಿ ಸಂಖ್ಯೆಯಲ್ಲಿ ಮಾಹಿತಿ ಇಲ್ಲಿದೆ.

ಕರ್ನಾಟಕ ರಾಜ್ಯದಲ್ಲಿ ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ 5,37,85,815 ಇದೆ. ಇದರಲ್ಲಿ 2,69,33,750 ಪುರುಷ ಮತದಾರರು, 2,68,47,145 ಮಹಿಳಾ ಮತದಾರರು ಮತ್ತು 4,920 ಇತರೆ ಮತದಾರರು ಇದ್ದಾರೆ. ಇದರಲ್ಲಿ ಮಹಿಳಾ ಮತದಾರರಿಗೂ ಹಾಗೂ ಪುರುಷ ಮತದಾರರಿಗೂ ಸ್ವಲ್ಪ ಮಾತ್ರ ವ್ಯತ್ಯಾಸವಿರುವುದು ಸಂತಸದ ವಿಷಯವಾಗಿದೆ. ಮಹಿಳೆಯರು ಸಹ ದೊಡ್ಡ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ವಿವರಿಸಿದರು.

Lok Sabha Election 2024:Voter final List Released by KEC, How many Voter are in Karnataka, check

ವಿವಿಧ ವಯಸ್ಸಿನ ಮತದಾರರ ಮಾಹಿತಿ

ರಾಜ್ಯದಲ್ಲಿ ಒಟ್ಟು 17,937 ಶತಾಯುಷಿ ಮತದಾರರಿದ್ದಾರೆ, 46,501 ಸೇವಾ ಮತದಾರರು, 3,164 ಸಾಗರೋತ್ತರ ಮತದಾರರು, 80+ ವಯಸ್ಸಿನ 12,71,862 ಮತದಾರರು ಸೇರಿದಂತೆ 5,62,890 ದಿವ್ಯಾಂಗ ಮತದಾರರು ಇದ್ದಾರೆ ಎಂದು ಅವರು ವಿವರಿಸಿದರು.

224 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವು ಅತಿ ಹೆಚ್ಚು ಅಂದರೆ 7,17,201 ಮತದಾರರನ್ನು ಹೊಂದಿದೆ. ವ್ಯತಿರಿಕ್ತವಾಗಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 1,67,556 ಮತದಾರರಿದ್ದಾರೆ ಎಂದು ಅವರು ಉಲ್ಲೇಖಿಸಿದರು.

ಅಂತಿಮ ಮತದಾರರ ಪಟ್ಟಿ 2024 ರ ಪ್ರಕಾರ ಒಟ್ಟು ಮತಗಟ್ಟೆಗಳ ಸಂಖ್ಯೆ 58,834 ಆಗಿದೆ. ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಸಮಯದಲ್ಲಿ 845 ಮತಗಟ್ಟೆಗಳನ್ನು ಸೇರ್ಪಡೆಗೊಳಿಸಿದ್ದು, 293 ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದೆ. ಅದರಂತೆ 552 ಮತಗಟ್ಟೆಗಳ ನಿವ್ವಳ ಹೆಚ್ಚಳವಾಗಿದೆ ಎಂದರು.

Lok Sabha Election 2024:Voter final List Released by KEC, How many Voter are in Karnataka, check

ಹೆಸರು ನೋಂದಾವಣೆಗೆ ಅವಕಾಶ

ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಅವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ತಕ್ಷಣವೇ ನೋಂದಾಯಿಸಲು ಪ್ರೋತ್ಸಾಹಿಸಲಾಗುತ್ತದೆ. ಮತದಾನದ ದಿನದಂದು ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ ಎಂಬುದು ಗಮನದಲ್ಲಿರಲಿ.

ಮತದಾರರು ತುರ್ತಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಲು ಮತ್ತು ದೃಢೀಕರಿಸಲು ಮನವಿ ಮಾಡಲಾಗಿದೆ. ಅರ್ಹ ಮತದಾರರು ಅರ್ಜಿಗಳನ್ನು ಸಲ್ಲಿಸಲು ತಮ್ಮ ಮೊಬೈಲ್ ನಲ್ಲಿ ವೋಟರ್ ಹೆಲ್ಪಲೈನ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ತಾವೇ ಅರ್ಜಿ ಸಲ್ಲಿಸಬಹುದು ಅಥವಾ https://voterportal.eci.gov.in/ ಪೋರ್ಟಲ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿದರು.

ಭಾವಚಿತ್ರ ಅಳವಡಿಕೆ ಹಾಗೂ ಮತದಾರರ ಗುರುತಿನ ಚೀಟಿಗಳ ಹಂಚಿಕೆಯನ್ನು ಶೇಕಡಾ ನೂರಕ್ಕೆ ನೂರರಷ್ಟು ಸಾಧಿಸಲಾಗಿದೆ. ಮತದಾರರ ಗುರುತಿನ ಚೀಟಿಗಳನ್ನು ಮತದಾರರಿಗೆ ತ್ವರಿತ ಅಂಚೆ ಸೇವೆಯ ಮೂಲಕ ಆಯಾ ವಿಳಾಸಗಳಿಗೆ ರವಾನಿಸಲಾಗುತ್ತಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ

ಘೋಷಿತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮುಖ್ಯ ಚುನಾವಣಾಧಿಕಾರಿಗಳು ಉತ್ತರಿಸಿದರು. ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಚುನಾವಣೆ ಸಂದರ್ಭದಲ್ಲಿ ಪಾಲಿಸಬೇಕಾದ ನೀತಿ-ನಿಯಮಗಳ ಕುರಿತು ಆಯೋಗ ಪ್ರಕಟಿಸಿರುವ ಚುನಾವಣಾ ನೀತಿ ಸಂಹಿತೆಯನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮ ರಾವ್, ರಾಷ್ಟ್ರೀಯ ಪಕ್ಷಗಳಾದ ಎಎಪಿ, ಬಹುಜನ ಸಮಾಜ ಪಕ್ಷ, ಬಿಜೆಪಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್), ಇಂಡಿಯನ್ ನ್ಯಾಷನಲ್ ಕಾಂಗ್ರೇಸ್, ನ್ಯಾಷನಲ್ ಪೀಪಲ್ಸ್ ಪಾರ್ಟಿ ಹಾಗೂ ರಾಜ್ಯಮಟ್ಟದ ಪಕ್ಷ ಜನತಾದಳ (ಸೆಲ್ಯುಲರ್) ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+