Get Updates
Get notified of breaking news, exclusive insights, and must-see stories!

ಅನಂತ್ ಕುಮಾರ್ ಹೆಗಡೆ, ಮಂಗಳಾ ಅಂಗಡಿಗೆ ಕೈ ತಪ್ಪಿದ ಟಿಕೆಟ್‌: ಬಿಜೆಪಿ 2ನೇ ಪಟ್ಟಿಯಲ್ಲಿ ಯಾರಿಗೆ ಅವಕಾಶ?

ಬೆಂಗಳೂರು, ಮಾರ್ಚ್ 23: 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಹುತೇಕ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ ಕರ್ನಾಟಕದ ಅಭ್ಯರ್ಥಿಗಳ ಬಿಜೆಪಿ ಎರಡನೇ ಪಟ್ಟಿಯನ್ನು ಇಂದು ಶನಿವಾರ ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ಉಳಿದ ಕ್ಷೇತ್ರದ ಆಕಾಂಕ್ಷಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಬಿಜೆಪಿ ಎರಡನೇ ಪಟ್ಟಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದರ ಅರ್ಥ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಈ ಬಾರಿ ಟಿಕೆಟ್‌ ಕೈ ತಪ್ಪಿರುವುದು ಬಹುತೇಕ ಖಚಿವಾಗಿದೆ.

Lok Sabha Election 2024 Who Are The Candidates In BJP 2nd List

ಇನ್ನು ಉಳಿದ ಲೋಕಸಭಾ ಕ್ಷೇತ್ರಗಳ ಪಟ್ಟಿಯನ್ನು ಬಿಜೆಪಿ ಅಂತಿಮಗೊಳಿಸಿದ್ದು, ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಡಾ.ಕೆ.ಸುಧಾಕರ್, ಚಿತ್ರದುರ್ಗದಿಂದ ಮಾಜಿ ಸಚಿವ ಗೋವಿಂದ್ ಕಾರಜೋಳ ಮತ್ತು ರಾಯಚೂರಿನಿಂದ ಬಿ.ವಿ.ನಾಯಕ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ಬಿಜೆಪಿ ಭರ್ಜರಿ ಪ್ರಚಾರ ಆರಂಭಿಸಿದೆ. ಈಗಾಗಲೇ ಘೋಷಣೆಯಾಗಿರುವ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದರೆ, ಇತ್ತ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ರಾಜ್ಯದ ನಾಯಕರು, ಟಿಕೆಟ್‌ ಘೋಷಣೆ ಬಳಿಕ ಅಸಮಾಧಾಗೊಂಡಿರುವ ನಾಯಕರ ಜೊತೆ ಸಂಧಾನ ನಡೆಸುತ್ತಿದ್ದಾರೆ.

Lok Sabha Election 2024 Who Are The Candidates In BJP 2nd List

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದಿರುವ ಬಗ್ಗೆ ಹಲವು ಬಿಜೆಪಿ ನಾಯಕರು ನೇರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ನಾಯಕರ ತಂಡವು ಕೂಡ ಅತೃಪ್ತ ಆಕಾಂಕ್ಷಿಗಳನ್ನು ಭೇಟಿ ಮಾಡಿ ಸಮಾಧಾನಪಡಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿ ಅಸಮಾಧಾನಗೊಂಡಿರುವ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಭೇಟಿ ಮಾಡಿದರು.

ಯಡಿಯೂರಪ್ಪ ಭೇಟಿ ನಂತರ ಮಾಧುಸ್ವಾಮಿ ಪಕ್ಷ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಆದೆರೆ ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರಕ್ಕಿಳಿಯುವ ಬಗ್ಗೆ ತಮ್ಮ ನಿರ್ಧಾರ ತಿಳಿಸಿಲ್ಲ.

Lok Sabha Election 2024 Who Are The Candidates In BJP 2nd List

ಇನ್ನು ಪಕ್ಷದ ಪರ ಅಸಮಾಧಾನಿತರಾದ ಕೊಪ್ಪಳ ಸಂಸದ ಕರಡಿ ಸಂಗಣ್ಣ, ಬಿಜೆಪಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಮಾಜಿ ಸಿಎಂ ಡಿ.ವಿ ಸದಾನಂದಗೌಡರಂತಹ ನಾಯಕರನ್ನು ರಾಜ್ಯ ಬಿಜೆಪಿ ನಾಯಕರು ಸಮಾಧಾನ ಪಡಿಸಿದ್ದಾರೆ. ಆದರೆ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪನವರೆ ನಡೆ ಬಿಜೆಪಿ ನಾಯಕರಿಗೆ ದೊಡ್ಡ ಸವಾಲಾಗಿದೆ. ಮಗನಿಗೆ ಟಿಕೆಟ್‌ ಕೈ ತಪ್ಪಿದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ ಶತಾಯಗತಾಯ ಶಿವಮೊಗ್ಗಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿಯೇ ಸಿದ್ಧ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಸಂದರ್ಭವನ್ನು ಬಿಜೆಪಿ ನಾಯಕರು ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+