Heart attack: ಲೋಕಸಭಾ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಸಾವು

ಬಾಗಲಕೋಟೆ, ಮೇ 06: ನಾಳೆ (ಮೇ 7) ಮಂಗಳವಾರ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ಹೊರಟಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಮೃತ ದುರ್ದೈವಿ.

ಜಮಖಂಡಿ ತಾಲೂಕಿನ ಬಿದರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಗೋವಿಂದಪ್ಪ ಸಿದ್ದಾಪುರ , ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದರು. ಇಂದು ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದರು. ಈ ವೇಳೆ ಗೋವಿಂದಪ್ಪ ಸಿದ್ದಾಪುರ ಅವರಿಗೆ ಹೃದಯಾಘಾತವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Lok Sabha Election Duty Officers Died Due To Heart Attack At Karnataka

ಬೀದರ್: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವು

ಬೀದರ್: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವನ್ನಪ್ಪಿರುವಂತಹ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ. ಆನಂದ್ (31) ಮೃತ ದುರ್ದೈವಿ.

ಆನಂದ್ ಸಹಾಯಕ ಕೃಷಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆನಂದ್ ಕೋಡಂಬಲ್ ಚೆಕ್​ಪೋಸ್ಟ್​ನಲ್ಲಿ ಕರ್ತವ್ಯ ನಿರ್ವಹಿಸುವಾಗ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಸ್ಥಳದಲ್ಲಿದ್ದವರು ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ದುರಾದೃಷ್ಟವಶಾತ್‌ ಆನಂದ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಚಿಟಗುಪ್ಪಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+