Lok Sabha Election Phase 2: ಕಣದಲ್ಲಿರುವ ಐವರು ಶ್ರೀಮಂತ ಅಭ್ಯರ್ಥಿಗಳು
ಭಾರತದಲ್ಲಿ ಲೋಕಸಭಾ ಚುನಾವಣೆಗಳು ನಡೆಯುತ್ತಿವೆ. ಶುಕ್ರವಾರ ಎರಡನೇ ಹಂತದ ಮತದಾನ ನಡೆಯುತ್ತಿದೆ. ಇನ್ನು ಐದು ಹಂತದ ಮತದಾನ ಬಾಕಿ ಇದ್ದು, ಜೂನ್ 4 ರಂದು ಫಲಿತಾಂಶ ಹೊರ ಬೀಳಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಸಹ ನಡೆದಿದ್ದು, ಭರದಿಂದ ಮತದಾನ ನಡೆಯುತ್ತಿದೆ. ಈ ನಡುವೆ ಎರಡನೇ ಹಂತದಲ್ಲಿ ಕಣದಲ್ಲಿರುವ ಐದು ಶ್ರೀಮಂತ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.
12 ರಾಜ್ಯಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಒಂದು ಕೇಂದ್ರಾಡಳಿತ ಪ್ರದೇಶದ 88 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಒಟ್ಟು 1206 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ನಿರ್ಧಾರಿಸಲಿದ್ದಾನೆ. ಈ ಬಾರಿಯ ಚುನಾವಣೆಯಲ್ಲಿ ಶ್ರೀಮಂತ ಮತ್ತು ಬಡ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ ಒಬ್ಬ ಅಭ್ಯರ್ಥಿ ಹೆಸರು ಇದೆ.

ಮಂಡ್ಯದ ಅಖಾಡದಲ್ಲಿ ಕೋಟ್ಯಾಧೀಶರು
ಚುನಾವಣಾ ಆಯೋಗಕ್ಕೆ ಘೋಷಿಸಿದ ಆಸ್ತಿಯ ಪ್ರಕಾರ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರ್‌ಸ್ವಾಮಿ ಇದ್ದಾರೆ. ಇವರು ಆಯೋಗಕ್ಕೆ ನೀಡಿದ ಮಾಹಿತಿಯಂತೆ 217 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಇವರು ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅಖಾಡದಲ್ಲಿದ್ದಾರೆ. ಇನ್ನು ಈ ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಮಧ್ಯಪ್ರದೇಶದ ಹೋಶಂಗಾಬಾದ್ ಲೋಕಸಭಾ ಕ್ಷೇತ್ರದ ಸಂಜಯ್ ಶರ್ಮಾ ಪಡೆದುಕೊಂಡಿದ್ದಾರೆ. ಚುನಾವಣಾ ಆಯೋಗದ ಪ್ರಕಾರ ಅವರ ಆಸ್ತಿ 232 ಕೋಟಿ ರೂ. ಆಗಿದೆ. ಇವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಇವರ ವಿರುದ್ಧ ಬಿಜೆಪಿ ಅಭ್ಯರ್ಥಿ ದರ್ಶನ್ ಸಿಂಗ್ ಚೌಧರಿ ಕಣದಲ್ಲಿದ್ದಾರೆ.

ಶ್ರೀಮಂಕ ಅಭ್ಯರ್ಥಿಯ ಪಟ್ಟಿಯಲ್ಲಿ ಹೇಮಾ ಮಾಲಿನಿ
ಬೆಳ್ಳಿ ತೆರೆಯಲ್ಲಿ ತನ್ನ ಛಾಪನ್ನು ಹೊಂದಿರುವ ನಟಿ ಹೇಮಾ ಮಾಲಿನಿ ಸಹ ಮಥುರಾ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಇವರು ಬಿಜೆಪಿಯಿಂದ ಅಖಾಡದಲ್ಲಿದ್ದಾರೆ. ಇವರ ಘೋಷಿತ ಆಸ್ತಿ 278 ಕೋಟಿ ಆಗಿದೆ. ಹೇಮಾ ಮಾಲಿನಿ 2014 ಮತ್ತು 2019 ರ ಚುನಾವಣೆಯಲ್ಲಿ ಗೆದ್ದು ಮೂರನೇ ಬಾರಿಗೆ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುಖೇಶ್ ಧಂಗರ್ ಅವರಿಗೆ ಅವಕಾಶ ನೀಡಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿಕೆ ಸುರೇಶ್ ಅವರಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನ. ಹಾಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ್ ಚುನಾವಣಾ ಆಯೋಗಕ್ಕೆ ನೀಡಿದ ಅಫಿಡವಿಟ್‌ನಲ್ಲಿ 593 ಕೋಟಿ ರೂ. ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಡಿಕೆ ಸುರೇಶ್ ಅವರ ವಿರುದ್ಧ ಬಿಜೆಪಿ, ಜೆಡಿಎಸ್ ಅಭ್ಯರ್ಥಿಯಾಗಿ ಡಾ.ಎನ್ ಮಂಜುನಾಥ್ ಕಣದಲ್ಲಿದ್ದಾರೆ.
ಸ್ಟಾರ್ ಚಂದ್ರು ಮಿನಿ ಕುಬೇರಾ
ಮಂಡ್ಯದ ಲೋಕಸಭಾ ಕ್ಷೇತ್ರದಿಂದ ಅಖಾಡಕ್ಕೆ ಇಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಚುನಾವಣಾ ಅಫಿಡವಿಟ್ ನಲ್ಲಿ ತಮ್ಮ ಒಟ್ಟು ಆಸ್ತಿ 622 ಕೋಟಿ ರೂ.ಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ಎಚ್‌ಡಿಕೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.












Click it and Unblock the Notifications