Lok Sabha election 2024 Survey: ಕರ್ನಾಟಕ ಲೋಕಸಭಾ ಚುನಾವಣಾ ಭವಿಷ್ಯ ನುಡಿದ ಮತ್ತೊಂದು ಸಮೀಕ್ಷೆ

ಬೆಂಗಳೂರು, ಏಪ್ರಿಲ್.03: ಕರ್ನಾಟಕ ಲೋಕಸಭಾ ಚುನಾವಣೆಗೆ ಭರ್ಜರಿಯಾಗಿ ಸಿದ್ಧವಾಗುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಹಲವೆಡೆ ಬಂಡಾಯ, ಅಸಮಾಧಾನದ ಹೊಗೆಯಾಡುತ್ತಿದೆ. ಇದನ್ನು ತಣ್ಣಗಾಗಿಸಲು ಕಾಂಗ್ರೆಸ್, ಬಿಜೆಪಿ ಪ್ರಯತ್ನ ನಡೆಸುತ್ತಲೆ ಇವೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಕಳೆದ ಚುನಾವಣೆಯಲ್ಲಿ 25 ಸ್ಥಾನಗಳನ್ನು ಪಡೆದುಕೊಂಡಿದೆ, ಈಗ ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ 2024ರ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿರುವ ಬಿಜೆಪಿ, ಈ ಚುನಾವಣೆಯಲ್ಲಿ ತನ್ನ ಸ್ಥಾನಗಳನ್ನು ಉಳಿಸಿಕೊಳ್ಳಲು ಪ್ರಯತ್ನ ಪಡೆಯುತ್ತಿದೆ. ಈ ಬೆನ್ನಲ್ಲೇ ಹಲವು ಸಮೀಕ್ಷೆಗಳು ಹೊರಬಹುತ್ತಿದ್ದು, ಸದ್ಯ ಜನ್ಮತ್ ಸಮೀಕ್ಷೆ (Janmat poll) ಹೊರಬಿದ್ದಿದೆ.

Lok Sabha election Pre Poll Survey How Many Seats Will BJP Win

ಜನ್ಮತ್ ಸಮೀಕ್ಷೆ ಗ್ರೌಂಡ್ ರಿಪೋರ್ಟ್

ಈಗಾಗಲೇ ಹಲವು ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ ತನ್ನ ಎಲ್ಲಾ ಸ್ಥಾನಗಳನ್ನು ಉಳಿಸಿಕೊಳ್ಳುವುದಿಲ್ಲ ಎಂದಿದೆ. ಆದರೆ, ಕಾಂಗ್ರೆಸ್‌ಗಿಂತ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್ ಈ ಬಾರಿ ಹೆಚ್ಚು ಕ್ಷೇತ್ರಗಳನ್ನು ತನ್ನ ವಶ ಮಾಡಿಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ವರದಿ ಮಾಡಿವೆ. ಕಾಂಗ್ರೆಸ್ ಅನ್ನು ಕಟ್ಟಿ ಹಾಕಲು ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೈ ಜೋಡಿಸಿವೆ.

ಜನ್ಮತ್ ಸಮೀಕ್ಷೆ ಪ್ರಕಾರ ಈ ಬಾರಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ 17 ರಿಂದ 19 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಕಾಂಗ್ರೆಸ್ 09 ರಿಂದ 11 ಸ್ಥಾನಗಳನ್ನು ಗೆಲ್ಲಬಹುದು ಎಂದು ಭವಿಷ್ಯ ನುಡಿದಿದೆ.

Lok Sabha election Pre Poll Survey How Many Seats Will BJP Win

ಗ್ರೌಂಡ್ ರಿಪೋರ್ಟ್ ವರದಿ: ಕರ್ನಾಟಕ (28 ಲೋಕಸಭಾ ಕ್ಷೇತ್ರಗಳು)

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ = 17 ರಿಂದ 19

ಕಾಂಗ್ರೆಸ್ = 09 ರಿಂದ 11

ಇನ್ನು, ಜನ್ಮತ್ ಸಮೀಕ್ಷೆಯ ಜೊತೆಗೆ ಇಂಟಿಯಾ ಟಿವಿ - ಸಿಎನ್‌ಎಕ್ಸ್‌ ಸಮೀಕ್ಷೆ ಬಿಡುಗಡೆಯಾಗಿದೆ. ಈ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಬಿಜೆಪಿ 22 ಕ್ಷೇತ್ರಗಳನ್ನು ಗೆಲ್ಲಲಿದೆ. ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಜೆಡಿಎಸ್‌ 2 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಕಾಂಗ್ರೆಸ್ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ 22 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆ ವೇಳೆ ಕೂಡ ಸಮೀಕ್ಷೆಗಳು ಬಿಜೆಪಿ ಪರವಾಗಿಯೇ ಇದ್ದವು ಆದರೆ, ಗೆದ್ದಿದ್ದು ಕಾಂಗ್ರೆಸ್. ನಮಗೆ ನಮ್ಮ ಆಡಳಿತದ ಮೇಲೆ ನಂಬಿಕೆಯಿದೆ ಎಂಬ ಮಾತುಗಳನ್ನಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+