ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ, ಮೈತ್ರಿಕೂಟದ ತಂತ್ರ ಫಲಿಸಲಿಲ್ಲ!

|
Google Oneindia Kannada News

ಬೆಂಗಳೂರು, ಮೇ 23 : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. 22 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯನ್ನು ಪಕ್ಷ ಹಾಕಿಕೊಂಡಿತ್ತು. ಮೈತ್ರಿಕೂಟಕ್ಕೆ ಹಿನ್ನಡೆ ಉಂಟಾಗಿದೆ.

ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ 27 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದೆ. ಮಂಡ್ಯದಲ್ಲಿ ಅಭ್ಯರ್ಥಿಯನ್ನು ಹಾಕದೇ ಪಕ್ಷೇತರರಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡಿತ್ತು.

ಬೆಂಗಳೂರು ಸೆಂಟ್ರಲ್ : ಪ್ರಕಾಶ್ ರಾಜ್‌ಗೆ ಭಾರಿ ಹಿನ್ನಡೆಬೆಂಗಳೂರು ಸೆಂಟ್ರಲ್ : ಪ್ರಕಾಶ್ ರಾಜ್‌ಗೆ ಭಾರಿ ಹಿನ್ನಡೆ

Lok Sabha Election Result 2019 : BJP leading in 22 seats in Karnataka

ಲೋಕಸಭಾ ಚುನಾವಣಾ ಮತ ಎಣಿಕೆ ಇಂದು ನಡೆಯುತ್ತಿದ್ದು ಬಿಜೆಪಿ 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 2014ರ ಚುನಾವಣೆಯಲ್ಲಿ ಪಕ್ಷ 17 ಸ್ಥಾನಗಳಲ್ಲಿ ಜಯಗಳಿಸಿತ್ತು. ಚುನಾವಣೋತ್ತರ ಸಮೀಕ್ಷೆಗಳು ಸಹ ಬಿಜೆಪಿ ದೊಡ್ಡ ಪಕ್ಷವಾಗಲಿದೆ ಎಂದು ಹೇಳಿತ್ತು.

ಧಾರವಾಡ : ಪ್ರಹ್ಲಾದ್ ಜೋಶಿ 10 ಸಾವಿರ ಮತಗಳ ಮುನ್ನಡೆಧಾರವಾಡ : ಪ್ರಹ್ಲಾದ್ ಜೋಶಿ 10 ಸಾವಿರ ಮತಗಳ ಮುನ್ನಡೆ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಿದ್ದವು. ಕಾಂಗ್ರೆಸ್‌ 21 ಮತ್ತು ಜೆಡಿಎಸ್ 7 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದವು. ಆದರೆ, ಮೈತ್ರಿಕೂಟಕ್ಕೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಹಾಸನ, ಮಂಡ್ಯದಲ್ಲಿ ಮಾತ್ರ ಮೈತ್ರಿಕೂಟ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಸದ್ಯ ಬಿಜೆಪಿ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಕೇವಲ 4 ಸ್ಥಾನ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯ್ಲಿ ಸೇರಿದಂತೆ ಹಿರಿಯ ನಾಯಕರು ಹಿನ್ನಡೆ ಅನುಭವಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಆದ್ದರಿಂದ, ರಾಜ್ಯದಲ್ಲಿ ಯಾವ ಪಕ್ಷ ಎಷ್ಟು ಸೀಟುಗಳಿಸಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಮಂಡ್ಯದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ತುಮಕೂರು ಕ್ಷೇತ್ರದಲ್ಲಿ ಎಚ್.ಡಿ.ದೇವೇಗೌಡರಿಗೆ ಪ್ರಬಲ ಪೈಪೋಟಿ ಎದುರಾಗಿದೆ.

English summary
Lok Sabha Election Result 2019 : BJP leading in 22 seats in Karnataka. Party candidates in fary 27 seats out of 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X