ಈ ಆಟಗಾರರು ಮೈದಾನದಲ್ಲಿ ಅಷ್ಟೇ ಸ್ಪೂರ್ತಿಯ ಸೆಲೆ ಅಲ್ಲಾ, ಈ ವಿಷಗಳಲ್ಲೂ ಮಾದರಿ
ಟೀಮ್ ಇಂಡಿಯಾ ಕ್ರಿಕೆಟ್ ಆಟಗಾರರು ತಮ್ಮ ನೈಜ ಆಟದಿಂದ ಅಭಿಮಾನಿಗಳ ಮನವನ್ನು ಗೆಲ್ಲುತ್ತಲೇ ಇರುತ್ತಾರೆ. ಅಲ್ಲದೆ ಸಮಯ ಸಿಕ್ಕಾಗಲೆಲ್ಲಾ, ಸಮಾಜಕ್ಕೆ ಪ್ರೇರಣೆ ಆಗುವ ಕೆಲಸಗಳನ್ನು ಮಾಡಿ, ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಲೇ ಇರುತ್ತಾರೆ. ಹೀಗಾಗಿಯೇ ಇವರನ್ನು ಜನ ತುಂಬ ಇಷ್ಟ ಪಟ್ಟಿದ್ದಾರೆ.
ಟೀಮ್ ಇಂಡಿಯಾದ ಮಾಜಿ ಕೋಚ್ ಅನಿಲ್ ಕುಂಬ್ಳೆ ಹಾಗೂ ಹಾಲಿ ಕೋಚ್ ರಾಹುಲ್ ದ್ರಾವಿಡ್, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದರು. ಬೆಳ್ಳಂ ಬೆಳಗ್ಗೆ ತಮ್ಮ ಅಮೂಲ್ಯ ಮತವನ್ನು ಚಲಾಯಿಸಲು ಇಬ್ಬರೂ ಆಟಗಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಮತವನ್ನು ಸಲಾಯಿಸಿದರು. ಈ ಮೂಲಕ ನಾವು ಮೈದಾನದಲ್ಲಿ ಅಷ್ಟೇ ರೋಲ್ ಮಾಡಲ್ ಗಳಲ್ಲಾ, ಮೈದಾನದ ಹೊರಗೂ ನಾವು ರೋಲ್ ಮಾಡಲ್‌ಗಳು ಎಂಬುದನ್ನು ಸಾಬೀತು ಪಡಿಸಿದರು.

ಬೆಂಗಳೂರಿನಲ್ಲಿ ನಿಯೋಜಿತ ಕೇಂದ್ರಕ್ಕೆ ಬಂದ ರಾಹುಲ್ ದ್ರಾವಿಡ್, ಅಮೂಲ್ಯ ಮತ ಚಲಾಯಿಸಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಎಲ್ಲರೂ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಬೇಕು. ಇದು ಪ್ರಜಾಪ್ರಭುತ್ವದಲ್ಲಿ ನಮಗೆ ಸಿಕ್ಕಿರುವ ದೊಡ್ಡ ಅವಕಾಶ. ಹೆಚ್ಚು ಮತದಾನವಾದರೆ ಒಳ್ಳೆಯದು. ಬೆಂಗಳೂರಿನಲ್ಲಿ ದಾಖಲೆಯ ಮತದಾನವಾಗಬೇಕಿದೆ ಎಂದು ಅವರು ಮತದಾರರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ.
Watch: Former Indian cricketer Rahul Dravid casts his vote in Bengaluru for the Second phase of Lok Sabha Elections 2024. pic.twitter.com/MvR7EbubDq
— IANS (@ians_india) April 26, 2024
ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ರಾಜಸ್ಥಾನ, ತ್ರಿಪುರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲೂ ಮತದಾನ ನಡೆಯುತ್ತಿದೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಈ ಬಾರಿ 15.88 ಕೋಟಿ ಮತದಾರರು ಎರಡನೇ ಹಂತದಲ್ಲಿ ಮತ ಚಲಾಯಿಸಲಿದ್ದಾರೆ. ಒಟ್ಟು 1.67 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
पूर्व भारतीय क्रिकेटर राहुल द्रविड़ ने किया अपने मत का प्रयोग...
— News24 (@news24tvchannel) April 26, 2024
◆ क्या आपने मतदान किया?#RahulDravid | #LokSabhaElections2024 | #ElectionOnNews24 | #Election2024 | pic.twitter.com/aDbHO0IYPe
ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ, ದೇಶದ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರಾಸರಿ ಶೇ.60.03 ಮತದಾನವಾಗಿತ್ತು.
ಟೀಮ್ ಇಂಡಿಯಾ ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬ್ಯೂಸಿಯಾಗಿದ್ದು, ರಾಹುಲ್ ದ್ರಾವಿಡ್ ಸದ್ಯ ರಜೆಯ ಮಜೆಯನ್ನು ಸವಿಯುತ್ತಿದ್ದಾರೆ. ಇದೇ ವೇಳೆ ಮತದಾನವನ್ನು ಮಾಡಿ ಎಲ್ಲರ ಚಿತ್ತ ಕದ್ದರು. ರಾಹುಲ್ ದ್ರಾವಿಡ್ ಈ ಹಿಂದೆಯೂ ಮತದಾನದಲ್ಲಿ ಭಾಗವಹಿಸಿದ್ದರು.
ಅನಿಲ್ ಕುಂಬ್ಳೆ ಮತದಾನ
ಟೀಮ್ ಇಂಡಿಯಾ ಮಾಜಿ ಕೋಚ್ ಅನಿಲ್ ಕುಂಬ್ಳೆ ಸಹ ಬೆಂಗಳೂರಿನಲ್ಲಿ ಮತದಾನವನ್ನು ಮಾಡಿದರು. ಅಲ್ಲದೆ ಮತಚಲಾಯಿಸಿ ಫೋಟೋ ಒಂದನ್ನು ಪಡೆದು ಸಾಮಾಜಿಕ ತಾಣಗಳಲ್ಲಿ ಹಾಕಿಕೊಂಡಿದ್ದಾರೆ.
ಮಾಜಿ ಕ್ರಿಕೆಟ್ ಆಟಗಾರರು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇಬ್ಬರೂ ಆಟಗಾರರು ಸದ್ಯ ರಜೆಯನ್ನು ಆನಂದಿಸುತ್ತಿದ್ದಾರೆ. ಈ ದಿನಗಳಲ್ಲಿ, ರಾಹುಲ್ ದ್ರಾವಿಡ್ ಐಪಿಎಲ್ ನಡೆಯುತ್ತಿರುವುದುರಿಂದ ರಜೆಯಲ್ಲಿದ್ದಾರೆ. ಅನಿಲ್ ಕುಂಬ್ಳೆ ಅವರು ಕ್ರಿಕೆಟ್‌ನಿಂದ ನಿವೃತ್ತಿ ಪಡೆದು, ಟೀಮ್ ಇಂಡಿಯಾದ ಕೋಚ್ ಆಗಿ ಈಗ ಕ್ರಿಕೆಟ್‌ಗೆ ಸಂಬಂಧಿಸಿದ ಕೆಲವು ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇಬ್ಬರೂ ಆಟಗಾರರು ಪ್ರಜಾಪ್ರಭುತ್ವದಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸುವ ಮೂಲಕ ಇತರ ಮತದಾರರನ್ನು ಪ್ರೇರೇಪಿಸುವ ಕೆಲಸ ಮಾಡಿದ್ದಾರೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications