• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಂಗಳವಾರ 2ನೇ ಹಂತದ ಮತದಾನ : ಒಂದಷ್ಟು ಮಾಹಿತಿ

|

ಬೆಂಗಳೂರು, ಏಪ್ರಿಲ್ 22 : ಕರ್ನಾಟಕದಲ್ಲಿ ಮಂಗಳವಾರ 2ನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. 237 ಅಭ್ಯರ್ಥಿಗಳು ಕಣದಲ್ಲಿದ್ದು, ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಚುನಾವಣಾ ಆಯೋಗ 28,022 ಮತಗಟ್ಟೆಗಳನ್ನು ನಿರ್ಮಾಣ ಮಾಡಿದೆ. 2,43,03,279 ಮತದಾರರು ಮತದಾನ ಮಾಡುವ ಹಕ್ಕು ಪಡೆದಿದ್ದಾರೆ. 14 ಲೋಕಸಭಾ ಕ್ಷೇತ್ರಗಳ ಪೈಕಿ ಶಿವಮೊಗ್ಗ ಮತ್ತು ಕಲಬುರಗಿ ಕ್ಷೇತ್ರದ ಕಣಕುತೂಹಲಕ್ಕೆ ಕಾರಣವಾಗಿದೆ.

ನಿಮ್ಮ ರಾಜಕೀಯ ಜ್ಞಾನವನ್ನು ಒರೆಗೆ ಹಚ್ಚುವ ರಸಪ್ರಶ್ನೆ

ಎರಡನೇ ಹಂತದ 14 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇವರಲ್ಲಿ 9 ಜನರು ಹಾಲಿ ಸಂಸದರು. ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೀದರ್, ಗುಲ್ಬರ್ಗ, ದಾವಣಗೆರೆ, ಬೆಳಗಾವಿ, ಚಿಕ್ಕೋಡಿ, ಧಾರವಾಡ, ಹಾವೇರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿದ್ದಾರೆ.

2ನೇ ಹಂತದ ಲೋಕಸಭಾ ಚುನಾವಣೆ : ಅಂಕಿ-ಸಂಖ್ಯೆಗಳ ಲೆಕ್ಕ

ಶಿವಮೊಗ್ಗ, ವಿಜಯಪುರ ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ, ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಕಣದಲ್ಲಿದ್ದಾರೆ.

2ನೇ ಹಂತದ ಚುನಾವಣೆ : ಬಿಜೆಪಿ ಕ್ಷೇತ್ರಗಳ ಮೇಲೆ ಮೈತ್ರಿಕೂಟದ ಕಣ್ಣು

ಪ್ರಮುಖ ವಿಚಾರಗಳು : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ, ಮಹದಾಯಿ ನದಿ ನೀರಿನ ವಿವಾದ, ರಾಯಚೂರಿನ ಕೈ ತಪ್ಪಿದ ಐಐಟಿ, ಹುಬ್ಬಳ್ಳಿ ವಿಮಾನ ನಿಲ್ದಾಣದ ಅಭಿವೃದ್ಧಿ, ಕಲಬುರಗಿ ವಿಮಾನ ನಿಲ್ದಾಣ ಕಾರ್ಯಾರಂಭ ಮುಂತಾದವು ಪ್ರಮುಖ ವಿಚಾರಗಳಾಗಿವೆ.

2ನೇ ಹಂತದ ಲೋಕಸಭಾ ಚುನಾವಣೆ : ಜಿದ್ದಾಜಿದ್ದಿನ 6 ಕ್ಷೇತ್ರಗಳು

ಯಡಿಯೂರಪ್ಪ, ಸಿದ್ದರಾಮಯ್ಯ ಪ್ರತಿಷ್ಠೆ : 2ನೇ ಹಂತದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಬಿ.ಎಸ್.ಯಡಿಯೂರಪ್ಪ ಅವರ ಪ್ರತಿಷ್ಠೆ ಅಡಗಿದೆ. ಶಿವಮೊಗ್ಗದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಯಡಿಯೂರಪ್ಪ ಗೆಲ್ಲಿಸಬೇಕಿದೆ.

ಬಾದಾಮಿ ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ ಅವರು ಕೊಪ್ಪಳದಲ್ಲಿ ರಾಘವೇಂದ್ರ ಹಿಟ್ನಾಳ್ ಅವರನ್ನು, ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ್ ಅವರನ್ನು ಬಹುಮತದಿಂದ ಗೆಲ್ಲಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ.

ಬಳ್ಳಾರಿಯಲ್ಲಿ ಯಾರಿಗೆ ಜಯ? : 2018ರಲ್ಲಿ ನಡೆದ ಲೋಕಸಭಾ ಉಪ ಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಕಾಂಗ್ರೆಸ್‌ನ ವಿ.ಎಸ್.ಉಗ್ರಪ್ಪ ಅವರು 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಚುನಾವಣೆಯಲ್ಲಿ ಯಾರಿಗೆ ಗೆಲುವು?.

ಮೈತ್ರಿಕೂಟಕ್ಕೆ ದೊಡ್ಡ ಸವಾಲು : 14 ಲೋಕಸಭಾ ಕ್ಷೇತ್ರಗಳ ಪೈಕಿ 9 ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಸಂಸದರಿದ್ದಾರೆ. ಆದ್ದರಿಂದ, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ದೊಡ್ಡ ಸವಾಲು ಇದೆ. ಬಿಜೆಪಿ ಪ್ರಾಬಲ್ಯವನ್ನು ಮುರಿದು ಹೆಚ್ಚಿನ ಸೀಟುಗಳನ್ನು ಗೆಲ್ಲಬೇಕಿದೆ.

ಕಣದಲ್ಲಿರುವ ಪ್ರಮುಖರು : ಲೋಕಸಭಾ ಕಾಂಗ್ರೆಸ್ ನಾಯಕ, ಇಬ್ಬರು ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳ ಇಬ್ಬರು ಪುತ್ರರು. ಮಾಜಿ ಕೇಂದ್ರ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿದ್ದಾರೆ.

* ಶಿವಮೊಗ್ಗ : ಬಿ.ವೈ.ರಾಘವೇಂದ್ರ (ಬಿಜೆಪಿ), ಮಧು ಬಂಗಾರಪ್ಪ (ಕಾಂಗ್ರೆಸ್‌-ಜೆಡಿಎಸ್)

* ಗುಲ್ಬರ್ಗ : ಡಾ.ಉಮೇಶ್ ಜಾಧವ್ (ಬಿಜೆಪಿ), ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್‌-ಜೆಡಿಎಸ್)

* ಬೀದರ್ : ಭಗವಂತ ಖೂಬಾ (ಬಿಜೆಪಿ), ಈಶ್ವರ ಖಂಡ್ರೆ (ಕಾಂಗ್ರೆಸ್‌-ಜೆಡಿಎಸ್)

* ಉತ್ತರ ಕನ್ನಡ : ಅನಂತ್ ಕುಮಾರ ಹೆಗಡೆ (ಬಿಜೆಪಿ), ಆನಂದ ಅಸ್ನೋಟಿಕರ (ಕಾಂಗ್ರೆಸ್‌-ಜೆಡಿಎಸ್)

* ಬಾಗಲಕೋಟೆ : ಪಿ.ಸಿ.ಗದ್ದಿಗೌಡರ್ (ಬಿಜೆಪಿ), ವೀಣಾ ಕಾಶಪ್ಪನವರ್ (ಕಾಂಗ್ರೆಸ್-ಜೆಡಿಎಸ್).

ಕುತೂಹಲದ ಕ್ಷೇತ್ರಗಳು : 2ನೇ ಹಂತದ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ (ಬಿಜೆಪಿ) ಮತ್ತು ಮಧು ಬಂಗಾರಪ್ಪ (ಕಾಂಗ್ರೆಸ್‌-ಜೆಡಿಎಸ್) ಎದುರಾಳಿಗಳು. ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಕಣದಲ್ಲಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗುಲ್ಬರ್ಗ ಕ್ಷೇತ್ರದಲ್ಲಿ ಡಾ.ಉಮೇಶ್ ಜಾಧವ್ (ಬಿಜೆಪಿ), ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್‌-ಜೆಡಿಎಸ್) ಎದುರಾಳಿಗಳು. ಚಿಂಚೋಳಿ ಶಾಸಕರಾಗಿದ್ದ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಮಲ್ಲಿಕಾರ್ಜುನ ಖರ್ಗೆ ಎದುರಾಳಿಯಾಗಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್ : 2ನೇ ಹಂತದ ಲೋಕಸಭಾ ಚುನಾವಣೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 28022 ಮತಗಟ್ಟೆಗಳಲ್ಲಿ 216 ಸಖಿ ಮತಗಟ್ಟೆ, 37 ವಿಶೇಷ ಚೇತನರು ನಿರ್ವಹಣೆ ಮಾಡುವ ಮತಗಟ್ಟೆಗಳಿವೆ.

1026 ಮತಗಟ್ಟೆಗಳಿಗೆ ಸಿಆರ್‌ಪಿಎಫ್ ಭದ್ರತೆ ಒದಗಿಸಲಾಗಿದೆ. 1479 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯವಿದೆ. 1952 ಮತಗಟ್ಟೆಗಳಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
All set for 2nd phase of lok sabha elections in Karnataka. On April 23 voting will be held from morning 7 to evening 6. 237 candidates are in fray in 14 seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more