ಲೋಕಸಭೆ ಚುನಾವಣೆ ತಯಾರಿ, ಬಿಜೆಪಿಯಿಂದ ಹಲವು ಕಾರ್ಯಕ್ರಮ
ಬೆಂಗಳೂರು, ಸೆಪ್ಟೆಂಬರ್ 20 : 2019ರ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕರ್ನಾಟಕ ಬಿಜೆಪಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ತಾಲೂಕು, ಜಿಲ್ಲಾ ಮಟ್ಟದ ಕಾರ್ಯಕ್ರಮದ ಮೂಲಕ ಜನರನ್ನು ತಲುಪಲಿದೆ.
ಬೆಂಗಳೂರಿನಲ್ಲಿ ಬುಧವಾರ ನಡೆದ ಬಿಜೆಪಿ ವಿಶೇಷ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗಿದೆ. ಸಭೆಯ ವಿವರಗಳನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅವರು ಮಾಧ್ಯಮಗಳಿಗೆ ನೀಡಿದ್ದಾರೆ.
ಅಕ್ಟೋಬರ್ 2ರ ಗಾಂಧಿ ಜಯಂತಿ ದಿನದಿಂದು ರಾಜ್ಯದ ವಿವಿಧ ಭಾಗಗಳಲ್ಲಿ ಪಕ್ಷ ಸ್ವಚ್ಛತಾ ಅಭಿಯಾನವನ್ನು ನಡೆಸಲಿದೆ. ಸೆ.25ರ ತನಕ ವಿವಿಧ ಸ್ಲಂಗಳಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಲಿದ್ದು, ಆಗ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆಯೂ ಜನರಿಗೆ ಮಾಹಿತಿ ನೀಡಲಾಗುತ್ತದೆ.

ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟು ಹಬ್ಬದ ಪ್ರಯುಕ್ತ ಕಾರ್ಯಕರ್ತರಿಂದ ಪಾದಯಾತ್ರೆ ನಡೆಸಲಾಗುತ್ತದೆ. ಅಕ್ಟೋಬರ್ 2 ರಿಂದ 15 ದಿನಗಳ ಕಾಲ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಪಾದಯಾತ್ರೆ ನಡೆಯಲಿದೆ.
ಅಕ್ಟೋಬರ್ 31ರಂದು ಸರ್ದಾರ್ ವಲ್ಲಭವಾಯಿ ಪಟೇಲ್ ಅವರ ಜನ್ಮದಿನ ಅಂದು 'ರನ್ ಫಾರ್ ಯೂನಿಟ್' ಮ್ಯಾರಾಥಾನ್ ಆಯೋಜಿಸಲಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ 'ಕಾವ್ಯಾಂಜಲಿ' ಎಂಬ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ಆಯೋಜಿಸಲಿದೆ.











Click it and Unblock the Notifications