ಲೋಕಸಭೆ ಚುನಾವಣೆ : 28 ಕ್ಷೇತ್ರಕ್ಕೆ ಬಿಜೆಪಿಯಿಂದ ಕಾರ್ಯದರ್ಶಿಗಳ ನೇಮಕ

ಬೆಂಗಳೂರು, ಜುಲೈ 26 : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಯುತ್ತಿದೆ. ಈ ಮೈತ್ರಿಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದೆ. ಆದ್ದರಿಂದ, ಪಕ್ಷ ಚುನಾವಣೆ ಸಿದ್ಧತೆ ಆರಂಭಿಸಿದೆ.

ಕರ್ನಾಟಕ ಬಿಜೆಪಿ ರಾಜ್ಯದ ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಿದೆ. ಈ ಕಾರ್ಯದರ್ಶಿಗಳು ಕ್ಷೇತ್ರದ ಸಂಪೂರ್ಣ ಉಸ್ತುವಾರಿಯನ್ನು ನೋಡಿಕೊಳ್ಳಲಿದ್ದಾರೆ. ಕಾರ್ಯಕರ್ತರು, ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿರುತ್ತಾರೆ.

Lok Sabha elections 2019 : BJP to appoint secretaries

ಜುಲೈ 30ರೊಳಗೆ ಉಸ್ತುವಾರಿ ಕಾರ್ಯದರ್ಶಿಗಳ ನೇಮಕವಾಗಲಿದ್ದು, ಅವರು ತಕ್ಷಣವೇ ಕಾರ್ಯವನ್ನು ಆರಂಭಿಸಲಿದ್ದಾರೆ. ಪಕ್ಷದ ಹೈಕಮಾಂಡ್ ನೀಡುವ ಸೂಚನೆಯನ್ನು ಈ ಕಾರ್ಯದರ್ಶಿಗಳು ಸ್ಥಳೀಯ ನಾಯಕರಿಗೆ ತಲುಪಿಸಲಿದ್ದಾರೆ.

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. 2014ರ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್‌ 9 ಮತ್ತು ಜೆಡಿಎಸ್‌ 2 ಸ್ಥಾನಗಳಲ್ಲಿ ಜಯಗಳಿಸಿದ್ದವು. 2018ರ ವಿಧಾನಸಭೆ ಚುನಾವಣೆ ಬಳಿಕ ಬಿ.ಎಸ್.ಯಡಿಯೂರಪ್ಪ (ಶಿವಮೊಗ್ಗ), ಬಿ.ಶ್ರೀರಾಮುಲು (ಬಳ್ಳಾರಿ) ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸದ್ಯ, ಬಿಜೆಪಿ 15 ಸೀಟುಗಳನ್ನು ಹೊಂದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ 20+ ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬುದು ಬಿಜೆಪಿಯ ಗುರಿ. ಅದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+