ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ ಪ್ರಚಾರ : ಕರ್ನಾಟಕದಲ್ಲಿ ಬಿಜೆಪಿಯಿಂದ 40 ಸಮಾವೇಶ

|
Google Oneindia Kannada News

ಬೆಂಗಳೂರು, ಮಾರ್ಚ್ 13 : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20+ ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬುದು ಕರ್ನಾಟಕ ಬಿಜೆಪಿಯ ಗುರಿಯಾಗಿದೆ. ಇದಕ್ಕಾಗಿ 40ಕ್ಕೂ ಹೆಚ್ಚು ಸಮಾವೇಶಗಳನ್ನು ನಡೆಸಲು ರಾಜ್ಯ ಘಟಕ ತೀರ್ಮಾನಿಸಿದೆ.

ಕರ್ನಾಟಕದಲ್ಲಿ ಪ್ರಚಾರ ನಡೆಸುವ ಕುರಿತು ಕೇಂದ್ರ ಘಟಕಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಚಿಕ್ಕ ಸಮಾವೇಶ, ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಜೊತೆಗೆ 40ಕ್ಕೂ ಹೆಚ್ಚು ಸಮಾವೇಶಗಳನ್ನು ಆಯೋಜನೆ ಮಾಡಲಾಗುತ್ತದೆ.

ಲೋಕಸಭಾ ಚುನಾವಣೆ : ಹಲವು ಕಾರ್ಯಕ್ರಮ ಘೋಷಿಸಿದ ಕರ್ನಾಟಕ ಬಿಜೆಪಿಲೋಕಸಭಾ ಚುನಾವಣೆ : ಹಲವು ಕಾರ್ಯಕ್ರಮ ಘೋಷಿಸಿದ ಕರ್ನಾಟಕ ಬಿಜೆಪಿ

ಕರ್ನಾಟಕ ಘಟಕ ಸಲ್ಲಿಸಿರುವ ಪ್ರಸ್ತಾವನೆಗೆ ಕೇಂದ್ರ ಘಟಕದ ಒಪ್ಪಿಗೆ ಸಿಕ್ಕಿದರೆ ಸಮಾವೇಶದ ದಿನಾಂಕ ಮತ್ತು ಸ್ಥಳ ನಿಗದಿ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ರಾಜ್ಯದಲ್ಲಿ 2 ಸಮಾವೇಶ ಮಾಡಿದ್ದಾರೆ. ಇನ್ನೂ 6 ಸಮಾವೇಶ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಿಸದಂತೆ ತಡೆಯಲು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿ ಇರುವುದರಿಂದ ಬಿಜೆಪಿ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಲಿದೆ....

ಮಾ.18ರಂದು ಖರ್ಗೆ ತವರು ಕಲಬುರಗಿಯಲ್ಲಿ ರಾಹುಲ್ ಸಮಾವೇಶಮಾ.18ರಂದು ಖರ್ಗೆ ತವರು ಕಲಬುರಗಿಯಲ್ಲಿ ರಾಹುಲ್ ಸಮಾವೇಶ

ನರೇಂದ್ರ ಮೋದಿ ಸಮಾವೇಶ

ನರೇಂದ್ರ ಮೋದಿ ಸಮಾವೇಶ

ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಇನ್ನೂ 6 ರಿಂದ 7 ಮೋದಿ ಸಮಾವೇಶ ಆಯೋಜನೆ ಮಾಡುತ್ತೇವೆ ಎಂದು ಕೇಂದ್ರ ಬಿಜೆಪಿಗೆ ಪ್ರಸ್ತಾವನೆ ಕಳಿಸಲಾಗಿದೆ. ಇದಕ್ಕೆ ಒಪ್ಪಿಗೆ ಸಿಕ್ಕಿದರೆ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ.

ಕೇಂದ್ರ ಸಚಿವರು, ಮುಖ್ಯಮಂತ್ರಿಗಳು

ಕೇಂದ್ರ ಸಚಿವರು, ಮುಖ್ಯಮಂತ್ರಿಗಳು

ನರೇಂದ್ರ ಮೋದಿ ಹೊರತುಪಡಿಸಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗ ಆದಿತ್ಯನಾಥ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.

ಯೋಗಿ ಆದಿತ್ಯನಾಥ್‌ಗೆ ಬೇಡಿಕೆ

ಯೋಗಿ ಆದಿತ್ಯನಾಥ್‌ಗೆ ಬೇಡಿಕೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರಕ್ಕೆ ಬರಲಿ ಎಂದು ಹಲವು ಜಿಲ್ಲಾ ಘಟಕಗಳು ಬೇಡಿಕೆ ಇಟ್ಟಿವೆ. 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೂ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಹಲವಾರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ದೇವೇಂದ್ರ ಫಡ್ನವೀಸ್

ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಅದರಲ್ಲೂ ಕಲಬುರಗಿ ಕ್ಷೇತ್ರದಲ್ಲಿ ಅವರು ಹೆಚ್ಚಿನ ಪ್ರಚಾರ ನಡೆಸುವ ನಿರೀಕ್ಷೆ ಇದೆ.

English summary
Bharatiya Janata Party Karnataka unit is planning for 40 election campaign rally for the Lok Sabha elections 2019. Prime Minister Narendra Modi to address 6 to 7 rally's. Election will held on April 18 and 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X