ಕರ್ನಾಟಕದ 2 ಕ್ಷೇತ್ರಕ್ಕೆ ಬಿಎಸ್ಪಿ ಅಭ್ಯರ್ಥಿಗಳು ಘೋಷಣೆ

ಬೆಂಗಳೂರು, ಮಾರ್ಚ್ 20 : ಬಹುಜನ ಸಮಾಜ ಪಾರ್ಟಿ ಲೋಕಸಭಾ ಚುನಾವಣೆ 2019ಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ 28 ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಮಂಗಳವಾರ ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯದ 28 ಕ್ಷೇತ್ರಗಳಲ್ಲಿಯೂ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೇ ಏಕಾಂಗಿಯಾಗಿ ಬಿಎಸ್ಪಿ ಸ್ಪರ್ಧೆ ಮಾಡಲಿದೆ.

ಬಹುಜನ ಸಮಾಜ ಪಾರ್ಟಿಯ ವರಿಷ್ಠೆ ಕುಮಾರಿ ಮಾಯಾವತಿ ಅವರ ಒಪ್ಪಿಗೆ ಬಳಿಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ಪಕ್ಷದ ಅಧ್ಯಕ್ಷ ಪ್ರೊ.ಹರಿರಾಮ್ ಎ. ಅವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

bsp

ಉತ್ತರ ಪ್ರದೇಶ ಹೊರತುಪಡಿಸಿದರೆ ಬಿಎಸ್ಪಿಯ ಶಾಸಕರು ಇರುವ ರಾಜ್ಯ ಕರ್ನಾಟಕ. 2018ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಎಸ್ಪಿಯ ಎನ್.ಮಹೇಶ್ ಅವರು ಗೆಲುವು ಸಾಧಿಸಿದ್ದಾರೆ.

ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎನ್.ಮಹೇಶ್ ಅವರು ಪ್ರಾಥಮಿಕ ಶಿಕ್ಷಣ ಸಚಿವರಾಗಿಯೂ ಕೆಲಸ ಮಾಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು.

ಅಭ್ಯರ್ಥಿಗಳು

* ಚಿಕ್ಕಬಳ್ಳಾಪುರ - ಡಾ.ಸಿ.ಎಸ್.ದ್ವಾರಕಾನಾಥ್
* ಚಾಮರಾಜನಗರ (ಎಸ್‌ಸಿ) - ಡಾ.ಶಿವಕುಮಾರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+