ಲೋಕಸಮರ LIVE: ನಾಮಪತ್ರ ಸಲ್ಲಿಕೆಗೆ ಇಂದು ಕೊನೇ ದಿನ

ತುಮಕೂರು, ಮಾರ್ಚ್ 25: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರಮುಖ ಅಭ್ಯರ್ಥಿಗಳು ಇಂದು(ಮಾರ್ಚ್ 26) ನಾಮಪತ್ರ ಸಲ್ಲಿಸಲಿದ್ದಾರೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ಏಪ್ರಿಲ್ 18 ರಂದು ಕರ್ನಾಟಕದಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 26 ಕೊನೆಯ ದಿನವಾಗಿರುವ ಕಾರಣ ಹಲವು ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲಿದ್ದಾರೆ.

ಇಂದು ಮಂಗಳವಾರವಾಗಿರುವ ಕಾರಣ, ಹಲವರು ನಿನ್ನೆಯೇ ನಾಮಪತ್ರ ಸಲ್ಲಿಸಿದ್ದರು. ಆದರೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮತ್ತು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ತಡವಾಗಿ ಘೋಷಿಸಿದ್ದರಿಂದ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

Lok Sabha elections 2019: Key candidates to file nominations today: LIVE

ಏಪ್ರಿಲ್ 11 ರಿಂದ ಆರಂಭವಾಗಲಿರುವ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದ್ದು, ಮೇ 19 ರವರೆಗೆ ನಡೆಯಲಿದೆ.ಮೇ 23 ರಂದು ಫಲಿತಾಂಶ ಹೊರಬೀಳಲಿದೆ.

Mar 26, 2019, 3:34 pm IST

ನಾನು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರ ಪರ ಮತ್ತು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ಮಾಡುತ್ತೇನೆ: ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
Mar 26, 2019, 2:39 pm IST

ಬೆಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕೃಷ್ಣಭೈರೇ ಗೌಡ ಅವರು ನಾಮಪತ್ರ ಸಲ್ಲಿಸಿದರು.
Mar 26, 2019, 11:59 am IST

ತೇಜಸ್ವಿ ಸೂರ್ಯ ಅವರ ಪರ ಪ್ರಚಾರ ಮಾಡುತ್ತೇನೆ. ಪಕ್ಷದ ಸಿದ್ಧಾಂತಕ್ಕೆ, ನಿರ್ಧಾರಕ್ಕೆ ಬದ್ಧರಾಗಿದ್ದೇವೆ: ತೇಜಸ್ವಿನಿ ಅನಂತ್ ಕುಮಾರ್
Mar 26, 2019, 11:52 am IST

ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ ಕೃಷ್ಣ ಭೈರೇಗೌಡ ಅವರೂ ನಾಮಪತ್ರ ಸಲ್ಲಿಸಲಿದ್ದಾರೆ.
Mar 26, 2019, 11:51 am IST

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
Mar 26, 2019, 11:49 am IST

ಇಂದು ಮಂಗಳವಾರವಾಗಿರುವ ಕಾರಣ ಹಲವು ನಾಯಕರು ಸೋಮವಾರವೇ ನಾಮಪತ್ರ ಸಲ್ಲಿಸಿದ್ದರು.
Mar 26, 2019, 11:48 am IST

ಕರ್ನಾಟಕದಲ್ಲಿ ಏಪ್ರಿಲ್ 18ರಂದು ನಡೆಯಲಿರುವ ಮೊದಲ ಹಂತದ ಮತದಾನಕ್ಕೆ ಇದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಹಲವು ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
Mar 25, 2019, 3:39 pm IST

ಮಂಡ್ಯದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ, ನೂಕು ನುಗ್ಗಲಿನಲ್ಲಿ ಮೆರವಣಿಗೆ ಮೂಲಕ ಸಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
Mar 25, 2019, 3:20 pm IST

ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರೂ ಮೈಸೂರಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಅವರಿಗೆ ಶಾಸಕ ಆರ್.ಅಶೋಕ್, ಬಿಜೆಪಿ ನಾಯಕಿ ತಾರಾ ಸಾಥ್ ನೀಡಿದರು.
Mar 25, 2019, 3:18 pm IST

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿವಿ ಸದಾನಂದ ಗೌಡ ಅವರೂ ನಾಮಪತ್ರ ಸಲ್ಲಿಸಿದರು.
Mar 25, 2019, 3:12 pm IST

ಹಾಸನದಲ್ಲಿ ನಾಮಪತ್ರ ಸಲ್ಲಿಸಿದ ಎ ಮಂಜು. ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಜೊತೆಯಾಗಿದ್ದರು.
Mar 25, 2019, 3:09 pm IST

ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
Mar 25, 2019, 2:54 pm IST

ನಾಮಪತ್ರ ಸಲ್ಲಿಕೆ ವೇಳೆ ಜೊತೆಯಾಗಲಿರುವ ನಿಖಿಲ್ ತಾಯಿ ಅನಿತಾ ಕುಮಾರಸ್ವಾಮಿ
Mar 25, 2019, 2:53 pm IST

ನಿಖಿಲ್ ಶಾಲು ಹೊದೆಸಿ ಆಶೀರ್ವಾದ ಮಾಡಿದ ಎಚ್ ಡಿ ರೇವಣ್ಣ.
Mar 25, 2019, 2:46 pm IST

ತುಮಕೂರಿನಲ್ಲಿ ನಾಮಪತ್ರ ಸಲ್ಲಿಸಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ.
Mar 25, 2019, 2:45 pm IST

ಮಂಡ್ಯ ಡಿಸಿ ಕಚೇರಿಗೆ ಶಾಸಕ ಡಿಕೆ ಶಿವಕುಮಾರ್ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿರುವ ನಿಖಿಲ್ ಕುಮಾರಸ್ವಾಮಿ
Mar 25, 2019, 2:43 pm IST

ನಿಖಿಲ್ ಕುಮಾರಸ್ವಾಮಿ rally ಗೆ ಹರಿದುಬಂದ ಜನಸಾಗರ. ಕೆಲವೇ ಕ್ಷಣಗಳಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ
Mar 25, 2019, 12:09 pm IST

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ rally ಗಾಗಿ ಐವತ್ತಕ್ಕೂ ಹೆಚ್ಚು ಎತ್ತಿನ ಗಾಡಿಗಳ ಆಗಮನ. ಭರ್ಜರಿ rally ನಡೆಸಲು ಕುಮಾರಸ್ವಾಮಿ ಚಿಂತನೆ
Mar 25, 2019, 10:43 am IST

ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿರುವ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೌಡ. ಅವರಿಗೆ ಜೊತೆಯಾದ ಎಚ್ ಡಿ.ಮುಖ್ಯಮಂತ್ರಿ ಕುಮಾರಸ್ವಾಮಿ
Mar 25, 2019, 9:27 am IST

ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಅಭಿಮಾನಿಗಳು ಜೊತೆಯಾಗಲಿದ್ದಾರೆ.
Mar 25, 2019, 9:26 am IST

14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 18ರಂದು ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಸಲು ಮಾರ್ಚ್ 26ರ ಮಂಗಳವಾರ ಕೊನೆಯ ದಿನವಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಅಂದು ಕಾಂಗ್ರೆಸ್‌ನ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸುವರು.
Mar 25, 2019, 9:26 am IST

ಮಾ.25ರ ಸೋಮವಾರ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರೊಂದಿಗೆ ಎಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಜೊತೆಯಾಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+