ಕರ್ನಾಟಕದ 14 ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಸೂಚನೆ ಇಂದು ಪ್ರಕಟ

ಬೆಂಗಳೂರು, ಮಾರ್ಚ್ 19 : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 18ರಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಮಂಗಳವಾರ ಚುನಾವಣಾಧಿಕಾರಿಗಳು ಆಗಿರುವ ಆಯಾ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಮಾರ್ಚ್ 26ರ ತನಕ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಲು ಅವಕಾಶವಿದೆ. ಒಟ್ಟು 2 ಹಂತದಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದೆ.

ಚುನಾವಣಾ ಅಧಿಸೂಚನೆ ಪ್ರಕಟವಾದ ಬಳಿಕ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಯಾವ ಪಕ್ಷವೂ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ. ಏಪ್ರಿಲ್ 18 ಮತ್ತು 23ರಂದು ರಾಜ್ಯದಲ್ಲಿ ಮತದಾನ ನಡೆಯಲಿದೆ.

ಮೂರು ಮೀಸಲು ಕ್ಷೇತ್ರಗಳು ಸೇರಿದಂತೆ ಒಟ್ಟು 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದೆ. ಎಲ್ಲಾ ಕ್ಷೇತ್ರಗಳು ಬೆಂಗಳೂರು ಮತ್ತು ಸುತ್ತಮತ್ತಲ ಜಿಲ್ಲೆಗಳಾಗಿವೆ. ಉತ್ತರ ಕರ್ನಾಟಕ ಭಾಗದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಚುನಾವಣಾ ವೇಳಾಪಟ್ಟಿ

ಚುನಾವಣಾ ವೇಳಾಪಟ್ಟಿ

ಏಪ್ರಿಲ್ 18ರಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ಅಧಿಸೂಚನೆ ಮಂಗಳವಾರ ಪ್ರಕಟವಾಗಲಿದೆ. ವೇಳಾಪಟ್ಟಿ ಇಲ್ಲಿದೆ

* ಮಾ. 19 ಅಧಿಸೂಚನೆ ಪ್ರಕಟ
* ಮಾ. 26 ನಾಮಪತ್ರ ಸಲ್ಲಿಸಲು ಕೊನೆ ದಿನ
* ಮಾ. 27 ನಾಮಪತ್ರಗಳ ಪರಿಶೀಲನೆ
* ಮಾ.29 ನಾಪತ್ರ ವಾಪಸ್ ಪಡೆಯಲು ಕೊನೆ ದಿನ
* ಏಪ್ರಿಲ್ 18 ಮತದಾನ
* ಮೇ 23 ಫಲಿತಾಂಶ ಘೋಷಣೆ

ಯಾವ-ಯಾವ ಕ್ಷೇತ್ರ

ಯಾವ-ಯಾವ ಕ್ಷೇತ್ರ

1.ಉಡುಪಿ-ಚಿಕ್ಕಮಗಳೂರು, 2.ಹಾಸನ, 3.ದಕ್ಷಿಣ ಕನ್ನಡ, 4.ಚಿತ್ರದುರ್ಗ, 5.ತುಮಕೂರು, 6.ಮಂಡ್ಯ, 7.ಮೈಸೂರು-ಕೊಡಗು, 8.ಚಾಮರಾಜನಗರ, 9.ಬೆಂಗಳೂರು ಗ್ರಾಮಾಂತರ, 10.ಬೆಂಗಳೂರು ದಕ್ಷಿಣ, 11.ಬೆಂಗಳೂರು ಉತ್ತರ, 12.ಬೆಂಗಳೂರು ಕೇಂದ್ರ, 13.ಚಿಕ್ಕಬಳ್ಳಾಪುರ, 14.ಕೋಲಾರ ಕ್ಷೇತ್ರಗಳಿಗೆ ಅಧಿಸೂಚನೆ ಪ್ರಕಟವಾಗಲಿದೆ.

ಒಟ್ಟು 2 ಹಂತದಲ್ಲಿ ಮತದಾನ

ಒಟ್ಟು 2 ಹಂತದಲ್ಲಿ ಮತದಾನ

ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿವೆ. 14 ಕ್ಷೇತ್ರಗಳಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಲಿದ್ದು ಮಾ.19ರ ಮಂಗಳವಾರ ಅಧಿಸೂಚನೆ ಪ್ರಕಟವಾಗುತ್ತಿದೆ. ಉಳಿದ 14 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಮತದಾನ ನಡೆಯಲಿದೆ.

ಕುತೂಹಲ ಹುಟ್ಟಿಸಿರುವ ಕ್ಷೇತ್ರಗಳು

ಕುತೂಹಲ ಹುಟ್ಟಿಸಿರುವ ಕ್ಷೇತ್ರಗಳು

ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳ ಪೈಕಿ
ಹಾಸನ, ಮಂಡ್ಯ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಕ್ಷೇತ್ರಗಳು ವಿವಿಧ ಕಾರಣಗಳಿಗಾಗಿ ಕುತೂಹಲಕ್ಕೆ ಕಾರಣವಾಗಿದೆ. ಈ ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ ಎಂದು ತಿಳಿಯಲು ಮೇ 23ರ ತನಕ ಕಾಯಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+