• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚೌಕಿದಾರ್ ಅಲ್ಲ, 'ಮೈ ಪಾಗಲ್' ಎಂದು ಘೋಷಿಸಿಕೊಳ್ಳಿ: ಬಿಜೆಪಿಗೆ ಸಿದ್ದರಾಮಯ್ಯ ಗುದ್ದು

|
   ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತಾಯಿತು ಇದು

   ಬೆಂಗಳೂರು, ಮೇ 6: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕುರಿತು ಆಡಿರುವ ಮಾತು ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ವಿರೋಧಿಗಳು ಮೋದಿ ಅವರ ಹೇಳಿಕೆಯನ್ನು ಕಟುವಾಗಿ ಖಂಡಿಸಿದ್ದಾರೆ.

   ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಟ್ವಿಟ್ಟರ್‌ನಲ್ಲಿ ಮೋದಿ ಮತ್ತು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಅಲ್ಲದೆ, ಹೇಗೂ ಚುನಾವಣೆಯಲ್ಲಿ ಸೋಲುತ್ತೀರಿ. ಬಳಿಕ ವಿಶ್ರಾಂತಿ ಸಿಗುತ್ತದೆ. ಅದರಲ್ಲಿ ಚಿಕಿತ್ಸೆ ಪಡೆದುಕೊಂಡು ಬೇಗನೆ ಗುಣಮುಖರಾಗಿ ಎಂದಿದ್ದಾರೆ.

   ಭ್ರಷ್ಟಾಚಾರಿ ನಂಬರ್ 1 ಪಟ್ಟಿಯೊಂದಿಗೆ ರಾಜೀವ್ ಗಾಂಧಿ ಬದುಕು ಅಂತ್ಯ : ಮೋದಿ

   ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಮೋದಿ ಅವರಿಂದ ಹಿಡಿದು ಈಶ್ವರಪ್ಪ ಅವರವರೆಗೂ ಎಲ್ಲರಲ್ಲಿಯೂ ಈ ಹತಾಶೆ ಕಾಣಿಸುತ್ತಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

   'ನಿಮ್ಮ ತಂದೆ ಮಿಸ್ಟರ್ ಕ್ಲೀನ್ ಎಂದು ನಿಮ್ಮ ಕುಟುಂಬಕ್ಕೆ ಆಪ್ತರಾಗಿರುವವರು ಹೇಳುತ್ತಾರೆ. ಆದರೆ, ನಿಮ್ಮ ತಂದೆಯ ಬದುಕು ಭ್ರಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೆ ಅಂತ್ಯವಾಯಿತು' ಎಂದು ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಲಕ್ನೋನದಲ್ಲಿ ಭಾನುವಾರ ಚುನಾವಣಾ ಪ್ರಚಾರದ ವೇಳೆ ಟೀಕಿಸಿದ್ದರು.

   ರಾಜೀವ್ ಗಾಂಧಿ 1980ರಲ್ಲಿ ಪ್ರಧಾನಿಯಾಗಿದ್ದಾಗ ನಡೆದ ಬೋಫೋರ್ಸ್ ಹಗರಣ ಬಗ್ಗೆ ಪ್ರಸ್ತಾಪಿಸಿದ್ದ ನರೇಂದ್ರ ಮೋದಿ, 'ಸ್ವೀಡನ್ ಮೂಲದ ಬೋಫೋರ್ಸ್ ಕಂಪನಿಯಿಂದ ದೊಡ್ಡ ಮೊತ್ತದ ಹಣವನ್ನು ಕಿಕ್ ಬ್ಯಾಕ್ ರೂಪದಲ್ಲಿ ಪಡೆಯಲಾಗಿತ್ತು' ಎಂದು ಆರೋಪಿಸಿದ್ದರು.

   ವಿನಾಶಕಾಲೇ ವಿಪರೀತ ಬುದ್ದಿ

   ವಿನಾಶಕಾಲೇ ವಿಪರೀತ ಬುದ್ದಿ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್‌ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

   ಹಿರಿಯಣ್ಣ ಚಾಳಿ ಮನೆಮಂದಿಗೆಲ್ಲ

   ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ. ಸೋಲಿನ ಭೀತಿಯಲ್ಲಿರುವ ನರೇಂದ್ರ ಮೋದಿ ಅವರಿಂದ ಈಶ್ವರಪ್ಪನವರ ವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಬಿಜೆಪಿ ನಾಯಕರೆಲ್ಲರೂ 'ಮೈ ಚೌಕಿದಾರ್' ಅಲ್ಲ, 'ಮೈ ಪಾಗಲ್' ಎಂದು ಘೋಷಿಸಿಕೊಳ್ಳುವುದು ಒಳ್ಳೆಯದು ಎಂದು ಮತ್ತೊಂದು ಟ್ವೀಟ್‌ನಲ್ಲಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

   ಅಪ್ಪನ ಸಾವಿನ ಕುರಿತ ಮೋದಿ ಹೇಳಿಕೆಗೆ ರಾಹುಲ್ ಅಪ್ಪುಗೆಯ ಉತ್ತರ

   ದಡ್ಡ-ಜಾಣನ ಮಾತು

   'ಚೌಕಿದಾರ್ ಚೋರ್ ಹೈ' ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿರಂತರವಾಗಿ 'ಕಳ್ಳ' ಎನ್ನುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಅವರನ್ನು ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅಣಕಿಸಿದ್ದಾರೆ. ಜತೆಗೆ ರಾಜೀವ್ ಗಾಂಧಿ ಅವರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ.

   ದಡ್ಡ (ಹಲವು ಬಾರಿ) : ನೀನು ಕಳ್ಳ.

   ಜಾಣ (ಒಂದೇ ಬಾರಿ) : ನಿಮ್ಮಪ್ಪ ಕಳ್ಳ.

   ಕಥೆ ಮುಗಿತು... ಎಂದು ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.

   ನರೇಂದ್ರ ಮೋದಿ ಹೇಳಿದ್ದೇನು?

   ನರೇಂದ್ರ ಮೋದಿ ಹೇಳಿದ್ದೇನು?

   'ನಿಮ್ಮ ತಂದೆ ಮಿಸ್ಟರ್ ಕ್ಲೀನ್ ಎಂದು ನಿಮ್ಮ ಕುಟುಂಬಕ್ಕೆ ಆಪ್ತರಾಗಿರುವವರು ಹೇಳುತ್ತಾರೆ. ಆದರೆ, ನಿಮ್ಮ ತಂದೆಯ ಬದುಕು ಭ್ರಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೆ ಅಂತ್ಯವಾಯಿತು. ಸ್ವೀಡಿಶ್ ಮೂಲದ ಬೋಫೋರ್ಸ್ ಕಂಪನಿಯಿಂದ ದೊಡ್ಡ ಮೊತ್ತದ ಹಣವನ್ನು ಕಿಕ್ ಬ್ಯಾಕ್ ರೂಪದಲ್ಲಿ ಪಡೆಯಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸಿ ರಾಹುಲ್ ಗಾಂಧಿಗೆ ಹೇಳಿದ್ದರು. 'ನನ್ನ ವರ್ಚಸ್ಸನ್ನು ಹಾಳು ಮಾಡುವ ಮೂಲಕ ಈ ಜನರು ದೇಶದಲ್ಲಿ ಅಸ್ಥಿರ, ಸದೃಢವಲ್ಲದ ಸರ್ಕಾರವನ್ನು ರಚನೆ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ' ಎಂದೂ ಆರೋಪಿಸಿದ್ದರು.

   ಆತಂಕಕಾರಿ, ವಿನಾಶಕಾರಿ ಮೋದಿ ಸರಕಾರವನ್ನು ತೊಲಗಿಸಬೇಕು: ಮ.ಮೋ.ಸಿಂಗ್

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   Lok Sabha elections 2019: Former Chief Minister of Karnataka Siddaramaiah mocked PM Narendra Modi and asked to take mental treatment for making controversial statement on former Prime Minister Rajiv Gandhi. He asked BJP leaders to say 'Main Pagal' than 'Main Bhi Chowkidar'.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more