ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

Recommended Video

      ಮೋದಿಗೆ ಸವಾಲೆಸೆದ ಸಿದ್ಧರಾಮಯ್ಯ..! | Oneindia Kannada

      ಬೆಂಗಳೂರು, ಫೆಬ್ರವರಿ 11: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಲು ಹುಬ್ಬಳ್ಳಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಣಕಿದ್ದಾರೆ.

      ಹುಬ್ಬಳ್ಳಿಗೆ ಬಂದಿದ್ದ 'ಚೌಕಿದಾರ' ಅವರು ರಫೇಲ್ ಡೀಲ್ ಬಗ್ಗೆ ಮಾತನಾಡಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ. ರಾಜ್ಯದ ಸಾಲಮನ್ನಾ ಬಗ್ಗೆ ಮಾತನಾಡಿದ್ದಾರೆ, ಆದರೆ, ಮೋದಿ ಸರ್ಕಾರ ಈ ಬಗ್ಗೆ ಯಾವ ಕ್ರಮ ಕೈಗೊಂಡಿದೆ ಎಂಬುದನ್ನು ಯಾಕೆ ಹೇಳಲಿಲ್ಲ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

      ಮೋದಿ ಸರ್ಕಾರವು ಏಕೆ ರೈತರ ಸಾಲಮನ್ನಾ ಮಾಡಿಲ್ಲ. ಸಾಲಮನ್ನಾ ಮಾಡುವಂತೆ ಎರಡು ಬಾರಿ ನಿಯೋಗ ತೆರಳಿದ್ದೆವು. ಆದರೆ, ಇದುವರೆಗೂ ಸಾಲಮನ್ನಾ ಮಾಡಿಲ್ಲ. ನಾವು ಈ ಬಾರಿಯ ಬಜೆಟ್‌ನಲ್ಲಿ ಸಾಲಮನ್ನಾಕ್ಕೆ ಹಣ ಮೀಸಲಿಟ್ಟಿದ್ದೇವೆ. ಮೋದಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

      ಸಿದ್ದರಾಮಯ್ಯ ಅವರು ಹಾಕಿದ ಸವಾಲು ಏನು?

      ಸಿದ್ದರಾಮಯ್ಯ ಅವರು ಹಾಕಿದ ಸವಾಲು ಏನು?

      ಈ ನಡುವೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಇಪ್ಪತ್ತೆರಡು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೋದಿಯವರು ಕರ್ನಾಟಕಕ್ಕೆ ಬಂದು ನಿಂತುಕೊಳ್ಳಲಿ, ಆಗ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು. ಸುಳ್ಳು ಭರವಸೆಯಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದರು.

      ಮೋದಿ ಅವರು ರೈತರ ಸಾಲ ಮನ್ನಾ ಮಾಡಿಲ್ಲವೇಕೆ?

      ಮೋದಿ ಅವರು ರೈತರ ಸಾಲ ಮನ್ನಾ ಮಾಡಿಲ್ಲವೇಕೆ?

      ರೈತರ ಸಾಲ ಮನ್ನಾ ಮಾಡುವಂತೆ ಎರಡು ಬಾರಿ ನಿಯೋಗವನ್ನು ಕರೆದುಕೊಂಡು ಮೋದಿ ಅವರ ಬಲಿಗೆ ಹೋಗಿದ್ದೆವು. ಅವರು ಇದುವರೆಗೆ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ. ನಾವು ಈ ವರ್ಷದ ಬಜೆಟ್‌ನಲ್ಲಿ ಸಾಲ ಮನ್ನಾಕ್ಕೆ ಹಣ ಇಟ್ಟಿದ್ದೇವೆ. ಮೋದಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

      ಮೋದಿಯವರು ಬರೀ ಸುಳ್ಳು ಹೇಳುತ್ತಾರೆ

      ಮೋದಿಯವರು ಬರೀ ಸುಳ್ಳು ಹೇಳುತ್ತಾರೆ

      ಪ್ರಧಾನಿ ಮೋದಿಯವರು ಬರೀ ಸುಳ್ಳು ಹೇಳುತ್ತಾರೆ. ಹುಬ್ಬಳ್ಳಿಗೆ ಬಂದಿದ್ದ 'ಚೌಕಿದಾರ' ಅವರು ರಫೇಲ್ ಡೀಲ್ ಬಗ್ಗೆ ಮಾತನಾಡಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ.ಕರ್ನಾಟಕದ ಮೈತ್ರಿ ಸರ್ಕಾರವನ್ನು ದೂಷಿಸುವ ಹಕ್ಕು ಮೋದಿಗಿಲ್ಲ ಎಂದಿದ್ದಾರೆ.

      ಯಡಿಯೂರಪ್ಪ ಕೂಡಲೇ ರಾಜೀನಾಮೆ ಕೊಡಬೇಕು

      ಯಡಿಯೂರಪ್ಪ ಕೂಡಲೇ ರಾಜೀನಾಮೆ ಕೊಡಬೇಕು

      ಯಡಿಯೂರಪ್ಪ ಕೂಡಲೇ ರಾಜೀನಾಮೆ ಕೊಡಬೇಕು. ಅವರಿಗೆ ಸಾರ್ವಜನಿಕ ಜೀವನದಲ್ಲಿರಲು ನೈತಿಕತೆಯಿಲ್ಲ. ಮೊದಲು ಮಿಮಿಕ್ರಿ ಮಾಡಲಾಗಿದೆ. ಸಾಬೀತು ಪಡಿಸಿದ್ರೆ ರಾಜೀನಾಮೆ ಕೊಡ್ತೀನಿ ಅಂದಿದ್ರು. ಈಗ ಆ ಧ್ವನಿ ತಮ್ಮದೇ ಅಂದಿದ್ದಾರೆ. ಹೀಗಾಗಿ‌ ರಾಜೀನಾಮೆ ಕೊಡ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+