ಉಪೇಂದ್ರರ ಪಕ್ಷದಿಂದ ಸುಮಲತಾ, ನಿಖಿಲ್ ಗೆ ಬೆಂಬಲವಿಲ್ಲ!

Recommended Video

      Lok Sabha Elections 2019 : ಉಪೇಂದ್ರರ ಪಕ್ಷದಿಂದ ಸುಮಲತಾ, ನಿಖಿಲ್ ಗೆ ಬೆಂಬಲವಿಲ್ಲ! | Oneindia Kannada

      ಬೆಂಗಳೂರು, ಮಾರ್ಚ್ 10: ಲೋಕಸಭಾ ಚುನಾವಣೆ ರಂಗು ದಿನೇ ದಿನೇ ರಂಗೇರುತ್ತಿದೆ. ಮಂಡ್ಯ ಕ್ಷೇತ್ರ ಸದ್ಯಕ್ಕೆ ಕರ್ನಾಟಕದ ಟ್ರೆಂಡಿಂಗ್ ಕ್ಷೇತ್ರವಾಗಿದೆ. ಸುಮಲತಾ ಅಂಬರೀಷ್ ಹಾಗೂ ನಿಖಿಲ್ ಕುಮಾರಸ್ವಾಮಿ ಪರ ಯಾರು ಯಾರು ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಈ ನಡುವೆ 'ಬುದ್ಧಿವಂತ' ನಟ ಉಪೇಂದ್ರ ಅವರು ತಮ್ಮ ಉತ್ತಮ ಪ್ರಜಾಕೀಯ ಪಕ್ಷದಿಂದ ಯಾವ ಸೆಲೆಬ್ರಿಟಿಗೂ ಬೆಂಬಲವಿಲ್ಲ ಎಂದಿದ್ದಾರೆ.

      ಉತ್ತಮ ಪ್ರಜಾಕೀಯ ಪಕ್ಷ ಈಗಾಗಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಉತ್ತಮ ಪ್ರಜಾಕೀಯ ಪಕ್ಷ ಸ್ಪರ್ಧೆಗಿಳಿಯಲಿದೆ ಎಂದು ನಟ ಉಪೇಂದ್ರ ಹೇಳಿದ್ದಾರೆ. ಈ ಬಾರಿ ತಾವು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಉಪೇಂದ್ರ ಮತ್ತೊಮ್ಮೆ ಹೇಳಿದರು.

      ಅಭ್ಯರ್ಥಿಗಳ ಆಯ್ಕೆಯಾಗಿ ಲಿಖಿತ ಪರೀಕ್ಷೆಯನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ಪಾಸಾದವರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಮಂಡ್ಯದಲ್ಲಿ ಜೆಡಿಎಸ್ -ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದ್ದು, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ. ಆದರೆ, ಪ್ರಮುಖ ಅಭ್ಯರ್ಥಿಗಳಾಗಿರುವ ಸುಮಲತಾ ಅಂಬರೀಷ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಗೆ ನಮ್ಮ ಪಕ್ಷದಿಂದ ಬೆಂಬಲವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

      Lok Sabha Elections 2019 : Upendras Party to contest in 28 Constituencies

      ರಾಜ್ಯಕ್ಕೆ ಒಂದು ಬಲಿಷ್ಠವಾದ ಪ್ರಾದೇಶಿಕ ಪಕ್ಷದ ಅಗತ್ಯವಿದೆ. ಇದೇ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಾನು ಮುಂದುವರೆಯುತ್ತೇನೆ. ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ವಿಧಾನಸಭೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇದೆ. ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದಲ್ಲಿ ಸಿನಿಮಾಗಳಲ್ಲಿ ನಟಿಸುವುದನ್ನು ಬಿಟ್ಟು ರಾಜಕೀಯದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಉಪೇಂದ್ರ ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+