Rahul Gandhi: ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸುತ್ತಾರಾ ರಾಹುಲ್ ಗಾಂಧಿ?
ಬೆಂಗಳೂರು, ಫೆಬ್ರವರಿ.28: ಲೋಕ ಸಮರಕ್ಕೆ ದೇಶವೇ ಸಜ್ಜಾಗುತ್ತಿದೆ. ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನೇತೃತ್ವದ ಎನ್‌ಡಿಎ ಸಿದ್ಧತೆ ನಡೆಸಿದೆ. ಇದೇ ವೇಳೆಯಲ್ಲಿ ಕಾಂಗ್ರೆಸ್ ನೇತೃತ್ವ 'ಇಂಡಿಯಾ' ಒಕ್ಕೂಟ ಕೂಡ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿಯಲ್ಲಿದೆ.
ಇನ್ನು, ಅಧಿಕೃತವಾಗಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಕಾಂಗ್ರೆಸ್ ಹೇಳಿಕೊಂಡಿಲ್ಲವಾದರೂ ಕೂಡ ರಾಹುಲ್ ಗಾಂಧಿ ಮುಖವಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಕಳೆದ ಬಾರಿ ಉತ್ತರ ಪ್ರದೇಶದ ಅಮೇಥಿಯಿಂದ ಸೋಲು ಕಂಡು, ಕೇರಳದ ವಯನಾಡಿನಿಂದ ಗೆಲುವು ದಾಖಲಿಸಿರುವ ರಾಹುಲ್ ಗಾಂಧಿ ಈ ಬಾರಿ ಯಾವ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುವ ಕುತೂಹಲ ಕಾಡುತ್ತಿದೆ.

ಕರ್ನಾಟಕದಿಂದ ರಾಹುಲ್ ಕಣಕ್ಕೆ!?
ಸಂಸದ ರಾಹುಲ್ ಗಾಂಧಿ ಈ ಬಾರಿ ಬೇರೆ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯುವ ಬಗ್ಗೆ ಸುಳಿವು ಸಿಕ್ಕಿದೆ. ಕೇರಳದ ಸಿಪಿಐ 2019 ರಲ್ಲಿ ರಾಹುಲ್ ಗಾಂಧಿ ಗೆದ್ದಿರುವ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಕ್ಷೇತ್ರದಿಂದ ಹಿರಿಯ ನಾಯಕಿ, ಸಿಪಿಐ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಅನ್ನಿ ರಾಜಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಹೀಗಾಗಿಯೇ ಮಾಜಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಈ ಬಾರಿ ಸೋಲು ಕಾಣದ 'ಸುರಕ್ಷಿತ' ಕ್ಷೇತ್ರದಿಂದ ಕಣಕ್ಕೆ ಇಳಿಯಬಹುದು ಎಂಬ ಊಹಾಪೋಹವಿದೆ. ಉತ್ತರ ಪ್ರದೇಶದ ಅಮೇಥಿ ಹೊರತುಪಡಿಸಿ ತೆಲಂಗಾಣ ಅಥವಾ ಕರ್ನಾಟಕದಿಂದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಯಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಾಗಬೇಕಿದೆ.
ಕೇರಳದ ಎಲ್‌ಡಿಎಫ್ ಈ ಬಾರಿ ಕೇರಳದ ಒಂದು ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಬಾರದು ಎಂದು ಬಯಸಿರುವುದನ್ನು ಸ್ಪಷ್ಟಪಡಿಸಿದೆ. ಇದೇ ಕಾರಣಕ್ಕೆ ಲೋಕಸಭಾ ಚುನಾವಣಾ ದಿನಾಂಕಗಳು ಘೋಷಣೆಯಾಗುವ ಮುಂಚೆಯೇ ವಯನಾಡಿನಿಂದ ಪ್ರಬಲ ಅಭ್ಯರ್ಥಿಯನ್ನು ಹಾಕಿದೆ.
ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಪತ್ನಿ ಅನ್ನಿ ರಾಜಾ ಅವರು ಸಿಪಿಐ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಮತ್ತು ಭಾರತೀಯ ಮಹಿಳಾ ರಾಷ್ಟ್ರೀಯ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ರಾಹುಲ್ ಕೇರಳದಿಂದ ಸ್ಪರ್ಧಿಸುವುದನ್ನು ಎಡಪಕ್ಷಗಳು ಬಯಸದಿರಲು ಎರಡು ಪ್ರಮುಖ ಕಾರಣಗಳಿವೆ.
ಮೊದಲನೆಯದಾಗಿ, 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್‌ನಿಂದ ರಾಹುಲ್ ಗಾಂಧಿ ಅವರ ಉಮೇದುವಾರಿಕೆಯು ಕೇರಳದ ಚುನಾವಣಾ ಫಲಿತಾಂಶಗಳ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ರಾಜ್ಯದ 20 ಸ್ಥಾನಗಳಲ್ಲಿ ಒಂದನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ಯುಡಿಎಫ್ ಗೆದ್ದುಕೊಂಡಿತು. ಎರಡನೆಯದಾಗಿ, 2019ರಲ್ಲಿ ಉತ್ತರ ಭಾರತದಲ್ಲಿ ಸ್ಪರ್ಧಿಸದೆ ರಾಹುಲ್ ಗಾಂಧಿ ಓಡಿಹೋಗುತ್ತಿದ್ದಾರೆ ಎಂದು ಬಿಂಬಿಸಲು ಬಿಜೆಪಿ ಈ ಅವಕಾಶವನ್ನು ಬಳಸಿಕೊಂಡಿತ್ತು ಎಂಬುದು ಎಡಪಕ್ಷಗಳ ವಾದ.

ತೆಲಂಗಾಣ ಅಥವಾ ಕರ್ನಾಟಕ: ರಾಹುಲ್ ಸ್ಪರ್ಧೆ ಎಲ್ಲಿಂದ?
ತೆಲಂಗಾಣ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ವಿಧಾನಸಭಾ ಚುನಾವಣೆಗಳಲ್ಲಿ ಭರ್ಜರಿಯಾಗಿ ಗೆದ್ದು ಬೀಗಿದೆ. ಹೀಗಾಗಿಯೇ ಕಾಂಗ್ರೆಸ್ ನಾಯಕರು, ರಾಹುಲ್ ಗಾಂಧಿ ಅವರು ಈ ರಾಜ್ಯಗಳಲ್ಲಿನ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೇ ಸುಲಭವಾಗಿ ಗೆಲ್ಲುತ್ತಾರೆ ಎಂಬ ವಿಶ್ವಾಸ ಹೊಂದಿದ್ದಾರೆ.
ತೆಲಂಗಾಣದಲ್ಲಿ ರಾಹುಲ್ ಗಾಂಧಿ ಅವರಿಗೆ ಖಮ್ಮಂ ಮತ್ತು ಭುವನಗಿರಿ ಎರಡು ಕ್ಷೇತ್ರಗಳು ಆಯ್ಕೆಗಳಾಗಿವೆ. ಇವೆರಡೂ ಕಾಂಗ್ರೆಸ್ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿವೆ. ರಾಹುಲ್ ಗಾಂಧಿ ತೆಲಂಗಾಣದಲ್ಲಿ ಸ್ಪರ್ಧಿಸುವುದು ರಾಜ್ಯದ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ತೆಲಂಗಾಣದ ಕಾಂಗ್ರೆಸ್ ನಾಯಕರು ಹೇಳುತ್ತಾರೆ.
ತೆಲಂಗಾಣದಲ್ಲಿ ಒಟ್ಟು 17 ಸ್ಥಾನಗಳಲ್ಲಿ ಕಾಂಗ್ರೆಸ್ 2019 ರಲ್ಲಿ ಮೂರು ಸ್ಥಾನಗಳನ್ನು ಗೆದ್ದಿತ್ತು. ರಾಹುಲ್ ಗಾಂಧಿ ಸ್ಪರ್ಧೆಯಿಂದ ಪಕ್ಷವು ತನ್ನ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ತೆಲಂಗಾಣದ ಕಾಂಗ್ರೆಸ್ ನಾಯಕರು ವಿಶ್ವಾಸ ಹೊಂದಿದ್ದಾರೆ. ತೆಲಂಗಾಣದ ಕಾಂಗ್ರೆಸ್ ಘಟಕವು ನವದೆಹಲಿಯಲ್ಲಿರುವ ಪಕ್ಷದ ಕೇಂದ್ರ ನಾಯಕತ್ವಕ್ಕೆ ತಮ್ಮ ಪ್ರಸ್ತಾಪವನ್ನು ತಿಳಿಸಿದೆ ಎಂದು ಮೂಲಗಳು ಹೇಳುತ್ತವೆ.
ಇನ್ನು, ತಮ್ಮ ಅನಾರೋಗ್ಯದ ಕಾರಣ ಚುನಾವಣಾ ರಾಜಕೀಯದಿಂದ ದೂರವಿರಲು ನಿರ್ಧರಿಸಿರುವ ಸೋನಿಯಾ ಗಾಂಧಿ ಅವರಿಗೆ ತೆಲಂಗಾಣದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಈ ಹಿಂದೆ ರಾಜ್ಯದ ನಾಯಕರು ಮನವಿ ಮಾಡಿದ್ದರು. ಆದರೆ ಅವರು ರಾಜಸ್ಥಾನದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈಗ ರಾಹುಲ್ ಗಾಂಧಿ ಇಲ್ಲಿಂದ ಸ್ಪರ್ಧಿಸಲಿ ಎಂದು ಬಯಸಿದ್ದಾರೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications