Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
ಬೆಂಗಳೂರು ಏಪ್ರಿಲ್ 19: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮತದಾನದ ದಿನಾಂಕ ಹತ್ತಿರವಾಗುತ್ತಿದೆ. ಈ ನಡುವೆ ಬೆಂಗಳೂರಿನ ಮತದಾರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಮತದಾರರನ್ನು ಮತದಾನಕ್ಕಾಗಿ ಪ್ರೋತ್ಸಾಹಿಸಲು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು ನಿರ್ಧರಿಸಿದೆ. ಇದಕ್ಕಾಗಿ ಮತದಾನ ಮಾಡಿದವರಿಗೆ ರಿಯಾಯಿತಿ ದರದಲ್ಲಿ ತಿಂಡಿ ತಿನಿಸು ನೀಡಲು ತೀರ್ಮಾನಿಸಲಾಗಿದೆ
ನಗರದಲ್ಲಿ ಯಾವಾಗಲೂ ಮತದಾನ ಪ್ರಮಾಣ ಕಡಿಮೆ ಆಗುತ್ತಿರುತ್ತದೆ. ಪ್ರಜಾಪ್ರಭುತ್ವದಲ್ಲಿ ನಾಗರಿಕರಿಗಿರುವ ಬಹುಮುಖ್ಯ ವಾದ ಹಕ್ಕು ಮತದಾನ. ಹೀಗಾಗಿ ಏಪ್ರಿಲ್ 26ರಂದು ನಡೆಯಲಿರುವ ಮೊದಲ ಹಂತದ ಮತದಾನ ಪ್ರೋತ್ಸಾಹಿಸಲು ಸಂಘದಿಂದ ನಿರ್ಧರಿಸಲಾಗಿದೆ ಎಂದು ಅಧ್ಯಕ್ಷ ಪಿಸಿ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ನಗರದಲ್ಲಿ ಕೇವಲ ಶೇ.54ರಷ್ಟು ಮಾತ್ರ ಮತದಾನವಾಗಿದೆ. ಹೆಚ್ಚು ಯುವಕರು, ವಿದ್ಯಾವಂತರನ್ನು ಹೊಂದಿರುವ ಬೆಂಗಳೂರು ನಗರದಲ್ಲಿ ಇಷ್ಟೊಂದು ಕಡಿಮೆ ಪ್ರಮಾಣದಲ್ಲಿ ಮತದಾನ ಆಗಿರುವುದು ಸಮಂಜಸವಲ್ಲ. ಈ ಬಾರಿ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಯುವಕರು ಸೇರಿದಂತೆ ಎಲ್ಲ ನಗಾರಿಕರೂ ಕೂಡ ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಜಾಗೃತಿ ಮೂಡಸಬೇಕು. ಈ ಸಂಬಂಧ ಹೋಟೆಲ್ ಮಾಲೀಕರು ಹೋಟೆಲ್‌ಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ಪೋಸ್ಟರ್ ಹಾಕುವುದು ಸೇರಿ ಇತರೆ ಜಾಗೃತಿ ಕಾರ್ಯಗಳನ್ನು ಮಾಡಲಿದ್ದೇವೆ. ರಿಯಾಯಿತಿ ದರದಲ್ಲಿ ತಿಂಡಿ-ತಿನಿಸು, ಪಾನೀಯ ನೀಡಿ ಪ್ರೋತ್ಸಾಹಿಸಲಿದ್ದೇವೆ ಎಂದಿದ್ದಾರೆ.
ಅಂದಹಾಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಅಂದರೆ ಏಪ್ರಿಲ್ 26ಕ್ಕೆ ಮತದಾನ ನಡೆಯಲಿದೆ. ಹೀಗಾಗಿ ಈ ದಿನ ಮತ ಚಲಾಯಿಸುವ ಮತದಾರರಿಗೆ ರಿಯಾಯಿತಿ ದರದಲ್ಲಿ ತಿಂಡಿ ತಿನಿಸು ಸಿಗಲಿದೆ. ಮತದಾನ ಮಾಡಿ ಬಂದವರಿಗೆ ಅಂದರೆ ಕೈ ಬೆರಳಿಗೆ ಶಾಹಿ ಹಚ್ಚಿಸಿಕೊಂಡು ಬಂದವರಿಗೆ ಕೆಲ ಹೋಟೆಲ್ಗಗಳಲ್ಲಿ ಉಚಿತ, ರಿಯಾಯಿತಿ ದರದಲ್ಲಿ ತಿಂಡಿ ತಿನಿಸು, ಪಾನೀಯ ನೀಡುವುದಾಗಿ ತಬೆಂಗಳೂರು ಹೋಟೆಲ್fಗಳ ಸಂಘವು ತಿಳಿಸಿದೆ.
ಏಪ್ರಿಲ್ 26ಕ್ಕೆ ಮತದಾನ
ಏಪ್ರಿಲ್ 26ರಂದು ರಾಜ್ಯದ 14 ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನುಳಿದ 14 ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಮೇ 7ರಂದು ಮತದಾನ
ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಅಂದ್ರೆ ಮೇ 7ರಂದು ಚುನಾವಣೆ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications