Lok Sabha Elections 2024 : ಮತ್ತೊಂದು ಸಮೀಕ್ಷೆ ಬಹಿರಂಗ: ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಶಾಕ್- ಕಾಂಗ್ರೆಸ್‌ ಕಥೆ ಏನು?

ಬೆಂಗಳೂರು, ಮಾರ್ಚ್‌ 20: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗಿದ್ದು, ಗೆಲ್ಲುವ ಅಭ್ಯರ್ಥಿಯ ಹುಡುಕಾಟವನ್ನ ಕಾಂಗ್ರೆಸ್‌ ಹಾಗೂ ಬಿಜೆಪಿ ನಡೆಸುತ್ತಿದೆ. ಇತ್ತ ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್‌ 26 ಮತ್ತು ಮೇ 7ರಂದು ಚುನಾವಣೆ ನಡೆಯಲಿದ್ದು, ಜೂನ್‌ 4 ರಂದು ಫಲಿತಾಂಶ ಬರಲಿದೆ.

ಲೋಕಸಮರಕ್ಕೆ ಬಿಜೆಪಿ - ಜೆಡಿಎಸ್‌ ಮೈತ್ರಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಚುನಾವಣೆಗೆ ರೆಡಿಯಾಗುತ್ತಿದ್ದು, ಇದರ ನಡುವೆಯೇ ಸಮೀಕ್ಷೆಯೊಂದು ಪ್ರಕಟವಾಗಿದ್ದು, 28 ಕ್ಷೇತ್ರಗಳನ್ನು ಗೆಲ್ಲುವ ಕನಸು ಹೊತ್ತಿದ್ದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಶಾಕ್‌ ನೀಡಿದ್ದರೆ, ಆಡಳಿತಾರೂಢ ಕಾಂಗ್ರೆಸ್‌ ಮೇಲುಗೈ ಸಾಧಿಸಿದೆ. ಈಗಾಗಲೇ ಹಲವು ಸಮೀಕ್ಷೆಗಳು ಬಹಿರಂಗಗೊಂಡಿದ್ದು, ಬಹುತೇಕ ಸರ್ವೆಯಲ್ಲಿ ಬಿಜೆಪಿ -ಜೆಡಿಎಸ್‌ 23 ರಿಂದ 25 ಕ್ಷೇತ್ರಗಳನ್ನ ಗೆಲ್ಲುವ ಸಾಧ್ಯತೆ ಇದ್ದು,ಕಾಂಗ್ರೆಸ್‌ 4-5 ಕ್ಷೇತ್ರಗಳಲ್ಲಿ ಗೆಲುವ ಸಾಧ್ಯತೆ ಇದೆ ಎಂದು ಹೇಳಿವೆ.

Lok Sabha Elections 2024 eedina mega survey Hints congress Will Win 17 Seats In Karnataka

ಈ ದಿನ ನಡೆಸಿದ ಮೆಗಾ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಕಾಂಗ್ರೆಸ್‌ ಅತಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲಿದೆ. ಗ್ಯಾರಂಟಿಗಳನ್ನ ಕೊಟ್ಟಿರುವ ಕಾಂಗ್ರೆಸ್‌ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ 11 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ ಎಂದು ಹೇಳಿದೆ. ಇನ್ನೂ ಉಳಿದ ಏಳು ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ ಏರ್ಪಡಿಲಿದೆ ಎಂದು ಸಮೀಕ್ಷೆ ಮೂಲಕ ತಿಳಿದು ಬಂದಿದೆ.

ನ್ಯೂಸ್‌ 18 ಚುನಾವಣಾ ಪೂರ್ವ ಸಮೀಕ್ಷೆ ಯಾರಿಗೆ ಹೆಚ್ಚು ಸ್ಥಾನ?

ಲೋಕಸಭಾ ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗುತ್ತಿದೆ. ಈ ನಡುವೆ ಹಲವು ಸಮೀಕ್ಷೆಗಳಿಗೆ ರಾಜಕೀಯ ಪಕ್ಷಗಳು ಹೆಚ್ಚು ಆಕ್ಟಿವ್‌ ಆಗಿತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ನ್ಯೂಸ್‌ 18 ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದ್ದು, ಈ ಸಮೀಕ್ಷೆಯ ಪ್ರಕಾರ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಫಸಲನ್ನು ತೆಗೆಯುವ ನಿರೀಕ್ಷೆ ಇದ್ದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ಕೊಟ್ಟ ಗ್ಯಾರಂಟಿಗಳ ಹೊರತಾಗಿಯೂ ಕಾಂಗ್ರೆಸ್‌ ನಿರಾಸೆ ಅನುಭವಿಸಲಿದೆ ಎನ್ನಲಾಗಿದೆ.

ನ್ಯೂಸ್‌ 18 ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಇತ್ತ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಕೇವಲ 3 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ ಎಂದು ಹೇಳಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಮೈತ್ರಿ ನಡುವೆ ಪ್ರಬಲ ಪೈಪೋಟಿ ಏರ್ಪಡಿಲಿ ಎಂದು ಸಮೀಕ್ಷೆ ಮೂಲಕ ತಿಳಿದು ಬಂದಿದೆ.

ಪಿ ಮಾರ್ಕ್‌ ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಕುರಿತು ಸ್ಥಳೀಯ ಸುದ್ದಿ ವಾಹಿನಿ ರಿಪಬ್ಲಿಕ್‌ ಕನ್ನಡದ ಜೊತೆ ಮತದಾರರ ಅಭಿಪ್ರಾಯ ಕಲೆಹಾಕಿರುವ ಪಿ ಮಾರ್ಕ್‌ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ 23 ರಿಂದ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಇತ್ತ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಕೇವಲ 2 ರಿಂದ 5 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ ಎಂದು ಸಮೀಕ್ಷೆ ಮೂಲಕ ಬಹಿರಂಗವಾಗಿದೆ. ಇನ್ನೂ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಮೈತ್ರಿ ನಡುವೆ ಪ್ರಬಲ ಪೈಪೋಟಿ ಏರ್ಪಡಲಿದ್ದು, ಆ ಎರಡು ಕ್ಷೇತ್ರಗಳು ಗೆಲುವಿನ ಸಂಖ್ಯೆಯನ್ನು ಸ್ಪಷ್ಟಪಡಿಸಲಿವೆ ಎಂದು ಸಮೀಕ್ಷೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+