Lok Sabha Elections 2024 : ಮತ್ತೊಂದು ಸಮೀಕ್ಷೆ ಬಹಿರಂಗ: ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
ಬೆಂಗಳೂರು, ಏಪ್ರಿಲ್ 03: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ - ಜೆಡಿಎಸ್ ಮೈತ್ರಿದ್ದು, ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದರೆ, ಇತ್ತ ಆಡಳಿತ ರೂಢ ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುವ ಕನಸು ಕಾಣುತ್ತಿದೆ. ಈ ಬೆಳವಣೆಗೆಯ ನಡುವೆ ಇಂಟಿಯಾ ಟಿವಿ - ಸಿಎನ್‌ಎಕ್ಸ್ ಸಮೀಕ್ಷೆ ಪ್ರಕಟವಾಗಿದ್ದು, ರಾಜಕೀಯ ಪಕ್ಷಗಳೀಗೆ ಈ ಸಮೀಕ್ಷೆಯ ವರದಿ ಶಾಕ್ ನೀಡಿದೆ.
ಹೌದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರವನ್ನ ವಶಪಡಿಸಿಕೊಳ್ಳವ ನಿಟ್ಟಿಯಲ್ಲಿ ಆಡಳಿತರೂಢ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಇತ್ತ ಹಾಲಿ 25 ಸಂಸದರಿರುವ ಬಿಜೆಪಿಯೂ ಈ ಬಾರಿ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಜೆಡಿಎಸ್ ಹಲವು ತಂತ್ರಗಾರಿಕೆಯನ್ನ ನಡೆಸಿವೆ.

ಇಂಟಿಯಾ ಟಿವಿ - ಸಿಎನ್‌ಎಕ್ಸ್ ಸಮೀಕ್ಷೆಯೊಂದು ಹೊರಬಿದ್ದಿದ್ದು, ಈ ಸಮೀಕ್ಷೆಯ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸುಲಭವಾಗಿ ಗೆಲುವನ್ನು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಅಲ್ಲದೇ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಅದರಲ್ಲಿ 22 ಕ್ಷೇತ್ರಗಳನ್ನು ಗೆಲ್ಲಲಿದ್ದು, ಜೆಡಿಎಸ್ ಸ್ಪರ್ಧಿಸಿದ ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲಿದೆ ಎಂದು ಸಮೀಕ್ಷೆ ಬಹಿರಂಗ ಪಡಿಸಿದೆ.
🚨 INDIA TV CNX LATEST OPINION POLL -
— Times Algebra (@TimesAlgebraIND) April 2, 2024
Impressive gains for BJP🔥 Share your comments.
Karnataka - BJP+ : 24, INC : 4
Andhra - BJP : 3, TDP : 12, YSRC : 10
Kerala - BJP : 3, INC+ : 10, LEFT : 7
Telangana - BJP : 5, INC : 9, BRS : 2, MIM : 1
Delhi - BJP : 7, INC : 0
Haryana -…
28 ಕ್ಷೇತ್ರಗಳನ್ನು ಗೆಲ್ಲಬೇಕು ಎನ್ನುವ ನಿಟ್ಟಿನಲ್ಲಿ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ 24 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ. ಇನ್ನು, ಬಿಜೆಪಿ ಕಳೆದ ಬಾರಿ ಪಕ್ಷೇತರ ಸಂಸದೆ ಸುಮಲತಾ ಸೇರಿ 26 ಸಂಸದರನ್ನು ಹೊಂದಿತ್ತು. ಅದು ಈ ಬಾರಿ 22 ಆಗಲಿದ್ದು, 4 ಸ್ಥಾನಗಳ ನಷ್ಟ ಅನುಭವಿಸಲಿದೆ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ. ಇನ್ನೂ ಕಳೆದ ಬಾರೀ ಕೇವಲ ಒಂದು ಕ್ಷೇತ್ರದಲ್ಲಿ ಗೆಲುವು ಕಂಡಿದ್ದ ಕಾಂಗ್ರೆಸ್ ಈ ಬಾರೀ ನಾಲ್ಕು ಕ್ಷೇತ್ರಗಳನ್ನ ಗೆಲ್ಲಲಿದೆ ಎಂದು ಸಮೀಕ್ಷೆ ಮೂಲಕ ತಿಳಿದು ಬಂದಿದೆ.
ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಗುರಿಯನ್ನು ಇಟ್ಟುಕೊಂಡಿರುವ ಕಾಂಗ್ರೆಸ್‌ಗೆ ಇಂಡಿಯಾ ಟಿವಿ - ಸಿಎನ್‌ಎಕ್ಸ್ ಸಮೀಕ್ಷೆ ಕೇವಲ ನಾಲ್ಕು ಕ್ಷೇತ್ರಗಳನ್ನ ಗೆಲ್ಲಲಿದೆ ಎಂದು ಬಹಿರಂಗ ಪಡಿಸಿದ್ದು, ಈ ಸಮೀಕ್ಷೆಯಿಂದ ಕಾಂಗ್ರೆಸ್ ಗೆ ನಿರಾಸೆ ಉಂಟು ಮಾಡಿದೆ.
ಇನ್ನೂ ಇಂಡಿಯಾ ಟಿವಿಯ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಬಿಜೆಪಿ 22 ಕ್ಷೇತ್ರಗಳನ್ನ ಗೆಲ್ಲುವ ಸಾಧ್ಯತೆ ಇದ್ದು,ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ. ಅಲ್ಲದೇ ಪ್ರಾದೇಶಿಕ ಪಕ್ಷ ಜೆಡಿಎಸ್ ಕರ್ನಾಟಕದಲ್ಲಿ ಎರಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದು ಇಂಡಿಯಾ ಟಿವಿಯ ಸಮೀಕ್ಷೆ ಭವಿಷ್ಯ ನುಡಿದಿದೆ.












Click it and Unblock the Notifications