Lok Sabha Election 2024: ರಾಜಾಹುಲಿ ಪುತ್ರನ ವಿರುದ್ಧ ಶಿವಮೊಗ್ಗದಿಂದ ಕೆ ಎಸ್‌ ಈಶ್ವರಪ್ಪ ಸ್ಪರ್ಧೆ ಫಿಕ್ಸ್?‌

ಶಿವಮೊಗ್ಗ,ಮಾರ್ಚ್‌ 16: ಲೋಕಸಭಾ ಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ ನಡೆಸಿದ್ದು, ಬಿಜೆಪಿ ಹೈಕಮಾಂಡ್‌ ಎರಡನೇ ಪಟ್ಟಿಯಲ್ಲಿ ಅಳೆದುತೂಗಿ ಕರ್ನಾಟಕಸ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದೆ.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್‌ ಕೈ ತಪ್ಪಿದರೂ ಪಕ್ಷದ ಪರವಾಗಿದ್ದ ಮಾಜಿ ಸಚಿವ ಹಾಗೂ ಕುರುಬ ಸಮುದಾಯದ ಹಿರಿಯ ನಾಯಕ ಕೆ ಎಸ್‌ ಈಶ್ವರಪ್ಪ ಅವರು ಪುತ್ರನಿಗೆ ಹಾವೇರಿ ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೇ ರೆಬಲ್‌ ಆಗಿದ್ದಾರೆ.

Lok Sabha Elections 2024 Is KS Eshwarappa Contesting Against BY Raghavendra in Shivamogga Know more

ಕಳೆದ ಒಂದು ವರ್ಷದಿಂದ ಹಾವೇರಿ ಲೋಕಸಭೆ ಕ್ಷೇತ್ರ ಟಿಕೆಟ್‌ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಹೈಕಮಾಂಡ್‌ ಬಿಗ್‌ ಶಾಕ್‌ ಕೊಟ್ಟಿದೆ. ಟಿಕೆಟ್‌ ನಿರೀಕ್ಷೆಯಲ್ಲಿದ್ದ ಕಾಂತೇಶ್‌ಗೆ ಟಿಕೆಟ್‌ ನೀಡದೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್‌ ನೀಡಿದ್ದು, ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೇ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೈಕಮಾಂಡ್‌ ಹಾಗೂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು..

ನನ್ನ ಮಗನಿಗೆ ಟಿಕೆಟ್‌ ಕೊಡಿಸುತ್ತೇನೆ. ಹೈಕಮಾಂಡ್‌ ವರಿಷ್ಠರ ಜತೆ ಮಾತನಾಡಿ ನಿನ್ನ ಮಗನಿಗೆ ಟಿಕೆಟ್‌ ಕೊಡಿಸುತ್ತೇನೆ ಎಂದು ಮಾಜಿ ಯಡಿಯೂರಪ್ಪ ಅವರು ಭರವಸೆ ನೀಡಿದ್ರು. ಆದರೆ, ಇದೀಗ ಟಿಕೆಟ್‌ ಕೈ ತಪ್ಪಿದ್ದು, ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್‌ ಕೊಡಿಸಿ ಮಾತು ತಪ್ಪಿದ್ದಾರೆ ಎಂದು ಈಶ್ವರಪ್ಪ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

Lok Sabha Elections 2024 Is KS Eshwarappa Contesting Against BY Raghavendra in Shivamogga Know more

ಈಗಾಗಲೇ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ಟಿಕೆಟ್‌ ಕೈ ತಪ್ಪಿದ್ದು, ಇದೀಗ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪುತ್ರನಿಗೆ ಹಾವೇರಿ ಟಿಕೆಟ್‌ ಕೈ ತಪ್ಪಿರುವುದು ಕೆ ಎಸ್‌ ಈಶ್ವರಪ್ಪ ಅವರ ಬಂಡಾಯಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಈಗಾಗಲೇ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗರಂ ಆಗಿದ್ದು, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆಗೆ ಈಶ್ವರಪ್ಪ ಅವರು ಮಾಸ್ಟರ್ ಪ್ಲ್ಯಾನ್‌ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕಾಂತೇಶ್‌ ಗೆ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೆ ಎಸ್‌ ಈಶ್ವರಪ್ಪ ಅವರಿಗೆ ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ಇಳಿಯಲು ಕಾರ್ಯಕರ್ತರಿಂದ ಹಾಗೂ ಅಭಿಮಾನಿಗಳಿಂದ ತೀವ್ರ ಒತ್ತಡ ಕೇಳಿ ಬರುತ್ತಿದೆ ಎನ್ನಲಾಗಿದ್ದು, ಮತ್ತೋಮ್ಮೆ ಕೆ ಎಸ್‌ ಈಶ್ವರಪ್ಪ ಮತ್ತು ಬಿಎಸ್ ವೈ ನಡುವೆ ಮತ್ತೆ ಶೀತಲಸಮರ ಏರ್ಪಡಲಿದೆ ಎನ್ನಲಾಗಿದೆ.

ಹಾವೇರಿ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಅವರಿಗೆ ದೊಡ್ಡ ಆಘಾತವಾಗಿದೆ. ಕೊನೆ ಕ್ಷಣದವರೆಗೆ ಟಿಕೆಟ್ ಸಿಗುವ ವಿಶ್ವಾಸದಲ್ಲಿ ಈಶ್ವರಪ್ಪ ಮತ್ತು ಪುತ್ರ ಕಾಂತೇಶ್ ಇದ್ದರು. ಈಶ್ವರಪ್ಪ ಪುತ್ರನಿಗೆ ಟಿಕೆಟ್ ಸಿಗಲಿಲ್ಲ. ಪದೇ ಪದೇ ಈ ರೀತಿ ಭರವಸೆ ಕೊಟ್ಟು ಸುಮ್ಮನಾಗುತ್ತಿದ್ದಾರೆ ಎಂದು ಈಶ್ವರಪ್ಪ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ಇನ್ನೂ ಪುತ್ರನಿಗೆ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಈಶ್ವರಪ್ಪ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

ಇನ್ನೂ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಳಿಕ ಈಶ್ವರಪ್ಪ ಸುಮಾರು ಒಂದು ಘಂಟೆಗಳ ಕಾಲ ತಮ್ಮ ಆಪ್ತರ ಜೊತೆ ಅಜ್ಷಾತ ಸ್ಥಳದಲ್ಲಿ ಮೀಟಿಂಗ್ ನಡೆಸಿದ್ದಾರೆ. ಯಡಿಯೂರಪ್ಪ ನನಗೆ ಮತ್ತು ನನ್ನ ಪುತ್ರನಿಗೆ ಟಿಕೆಟ್ ಕೊಡಿಸುವುದಾಗಿ ಮತ್ತು ಆತನ ಪರ ಪ್ರಚಾರ ಮಾಡಿ ಗೆಲ್ಲಿಸುವುದಾಗಿ ಮಾತುಕೊಟ್ಟಿದ್ದರು. ಆದರೆ, ಈಗ ಅವರು ಮೋಸ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ಮತ್ತು ಬಸವರಾಜ್ ಗೆ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ ಬಿಎಸ್ ವೈ ತಮ್ಮ ಮಗ ಕಾಂತೇಶ್ ಗೆ ಯಾಕೇ ಟಿಕೆಟ್ ಕೊಟ್ಟಿಲ್ಲವೆಂದು ಈಶ್ವರಪ್ಪ ಗರಂ ಆಗಿದ್ದಾರೆ.

ಇತ್ತ ಕಾಂತೇಶ್‌ ಗೆ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಈಶ್ವರಪ್ಪ ಸ್ಪರ್ಧೆ ಮಾಡಬೇಕೆಂದು ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಮಾರ್ಚ್ 15) ‌ ಸಂಜೆ ಶಿವಮೊಗ್ಗದ ಬಂಜಾರ್ ಸಮೂದಾಯ ಭವನದಲ್ಲಿ ಬೆಂಬಲಿಗರ ಮತ್ತು ಮುಖಂಡರ ಸಭೆಯನ್ನ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಕರೆದಿದ್ದಾರೆ. ಇನ್ನೂ ಈ ಸಭೆಯ ಬಳಿಕ ಈಶ್ವರಪ್ಪ ಅವರು ತಮ್ಮ ಮುಂದಿನ ತಿರ್ಮಾಣವನ್ನ ತಿಳಿಸುವುದಾಗಿ ಕೆ ಎಸ್‌ ಈಶ್ವರಪ್ಪ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+