ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನ? ಪಿ ಮಾರ್ಕ್‌ ಸಮೀಕ್ಷೆ ಬಹಿರಂಗ!

ಬೆಂಗಳೂರು, ಫೆಬ್ರವರಿ 24: ಲೋಕಸಭಾ ಚುನಾವಣೆಗೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ರಾಜಕೀಯ ನಾಯಕರುಗಳ ನಡುವೆ ವಾಕ್ಸಮರ ಜೋರಾಗಿದ್ದು, ಲೋಕಸಮರದ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ರಾಜ್ಯದಲ್ಲಿ ಪಕ್ಷ ಎಷ್ಟು ಸ್ಥಾನಗಳಿಸಬಹುದು? ಎಂದು ಚರ್ಚೆ ನಡೆಯತ್ತಿದೆ. ರಾಜ್ಯದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಯನ್ನು ಸಂಸ್ಥೆಯೊಂದು ನಡೆಸಿದ್ದು, ವರದಿ ಬಿಡುಗಡೆ ಮಾಡಿದೆ.

Lok Sabha Elections 2024 : P Marq Survey Hints Bjp Jds Alliance Will Win 25 Seats In Karnataka

28 ಲೋಕಸಭಾ ಕ್ಷೇತ್ರಗಳಲ್ಲಿ ಯಾರು ಎಷ್ಟು ಸ್ಥಾನಗಳನ್ನು ಗೆಲ್ಲಲಿದ್ದಾರೆ ಎಂಬ ಬಗ್ಗೆ ಚರ್ಚೆ ಶುರುವಾಗಿದ್ದು, ಕರ್ನಾಟಕಕ್ಕೆ ಸಂಬಂಧಿಸಿದಂತೆ ಪಿ ಮಾರ್ಕ್‌ ಸಂಸ್ಥೆಯ ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ.

2024ರ ಲೋಕಸಭೆ ಚುನಾವಣೆ ಕುರಿತು ಪಿ ಮಾರ್ಕ್‌ ಸಂಸ್ಥೆಯ ಕರ್ನಾಟಕದಲ್ಲಿ ಸಮೀಕ್ಷೆ ಮಾಡಿದ್ದು, ಸಮೀಕ್ಷೆಯ ವರದಿ ಬಿಜೆಪಿ ನಾಯಕರ ಚುನಾವಣಾ ಉತ್ಸಾಹವನ್ನು ಹೆಚ್ಚಿಸಿದ್ರೆ, ಇತ್ತ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ನಾಯಕರಿಗೆ ನಿದ್ದೆಗೆಡಿಸುವಂತೆ ಮಾಡಿದೆ.

ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಕುರಿತು ಸ್ಥಳೀಯ ಸುದ್ದಿ ವಾಹಿನಿ ರಿಪಬ್ಲಿಕ್‌ ಕನ್ನಡದ ಜೊತೆ ಮತದಾರರ ಅಭಿಪ್ರಾಯ ಕಲೆಹಾಕಿರುವ ಪಿ ಮಾರ್ಕ್‌ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ 23 ರಿಂದ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಇತ್ತ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಕೇವಲ 2 ರಿಂದ 5 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ ಎಂದು ಸಮೀಕ್ಷೆ ಮೂಲಕ ಬಹಿರಂಗವಾಗಿದೆ. ಇನ್ನೂ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಮೈತ್ರಿ ನಡುವೆ ಪ್ರಬಲ ಪೈಪೋಟಿ ಏರ್ಪಡಲಿದ್ದು, ಆ ಎರಡು ಕ್ಷೇತ್ರಗಳು ಗೆಲುವಿನ ಸಂಖ್ಯೆಯನ್ನು ಸ್ಪಷ್ಟಪಡಿಸಲಿವೆ ಎಂದು ಸಮೀಕ್ಷೆ ತಿಳಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಿಂದಾಗಿ ಶೇ.55ರಷ್ಟು ಮತಗಳನ್ನು ಪಡೆದರೆ, ಕಾಂಗ್ರೆಸ್‌ ಶೇ.39ರಷ್ಟು ಮತಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ಅಲ್ಲದೇ ಚುಣಾವಣೆಯಲ್ಲಿ ಕಾಂಗ್ರೆಸ್‌ ಗೆ ಕಾಂಗ್ರೆಸ್‌ಗೆ ಚಾಮರಾಜನಗರ, ಬಳ್ಳಾರಿ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವಿನ ಅವಕಾಶಗಳು ಹೆಚ್ಚಿದೆ ಎಂದು ಸಮೀಕ್ಷೆ ಮೂಲಕ ಬಹಿರಂಗವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+