Lok Sabha Elections 2024 : ಮತ್ತೊಂದು ಸಮೀಕ್ಷೆ ಬಹಿರಂಗ: ಬಿಜೆಪಿಗೆ ಬಿಗ್ ಶಾಕ್- ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
ಬೆಂಗಳೂರು, ಏಪ್ರಿಲ್ 06: ಲೋಕಸಭಾ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ - ಜೆಡಿಎಸ್ ಹಾಗೂ ಕಾಂಗ್ರೆಸ್ ತಮ್ಮ ನಿಗದಿತ ಗುರಿಯನ್ನು ಮುಟ್ಟಲು ಶಕ್ತಿ ಮೀರಿ ಪ್ರಯತ್ನಿಸುತ್ತಿವೆ.
ಹೌದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್ ಗೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. ಇತ್ತ ಬಿಜೆಪಿ ಮತ್ತು ಜೆಡಿಎಸ್ ನಾಯಕರು 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ತಂತ್ರಗಾರಿಕೆ ನಡೆಸಿದ್ರೆ, ಇತ್ತ ಕಾಂಗ್ರೆಸ್ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಟಾರ್ಗೆಟ್ ಹಾಕಿಕೊಂಡಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಯೂ ಸಹ ಭಾರೀ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಟೈಮ್ಸ್ ನೌ-ಇಟಿಜಿ ನಡೆಸಿದ ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆಯು ಭವಿಷ್ಯ ನುಡಿದಿದೆ. ಎನ್‌ಡಿಎ ಬರೋಬ್ಬರಿ 384 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ.
ಟೈಮ್ಸ್ ನೌ-ಇಟಿಜಿ ಸಮೀಕ್ಷೆ ಪ್ರಚಾರ, ಕರ್ನಾಟಕದಲ್ಲಿ ಬಿಜೆಪಿಗೆ ಹೋದ ಚುನಾವಣೆಯಲ್ಲಿ ಬಂದಷ್ಟು ಸ್ಥಾನಗಳು ಬರುವ ಸಾಧ್ಯತೆಯಿಲ್ಲ, ಕೆಲವು ಸ್ಥಾನಗಳು ಕೈತಪ್ಪಲಿವೆ ಎಂದು ಸಮೀಕ್ಷೆ ಮೂಲಕ ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ 21-23 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ, ಕಾಂಗ್ರೆಸ್ 4-6 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳಬಹುದು ಎಂದು ಹೇಳಿದೆ ಅಲ್ಲದೇ ಪ್ರಾದೇಶಿಕ ಪಕ್ಷ ಜೆಡಿಎಸ್ ಕರ್ನಾಟಕದಲ್ಲಿ 1-2 ಸ್ಥಾನಗಳಿಗೆ ಗೆಲುವು ಸಾಧಿಸಬಹುದು ಎಂದು ಸಮೀಕ್ಷೆ ತಿಳಿಸಿದೆ.
ಇನ್ನೂ ಕಳೆದ ಬಾರಿ ಕರ್ನಾಟಕದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಟೈಮ್ಸ್ ನೌ-ಇಟಿಜಿ ಸಮೀಕ್ಷೆ ಪ್ರಚಾರ ಬಿಜೆಪಿ ಪಕ್ಷವೂ 21-23 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದು ಬಂದಿದ್ದು, ಬಿಜೆಪಿಗೆ ಟೈಮ್ಸ್ ನೌ-ಇಟಿಜಿ ಸಮೀಕ್ಷೆ ಬಿಗ್ ಶಾಕ್ ಕೊಟ್ಟಿದೆ. ಇನ್ನೂ ಕಳೆದ ಬಾರಿ ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಆದರೆ, ಈ ಬಾರಿ 4 ರಿಂದ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಮೂಲಕ ತಿಳಿದು ಬಂದಿದೆ.












Click it and Unblock the Notifications