ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್‌ 13ರ ಒಳಗೆ ಲೋಕಸಭೆ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ

|
Google Oneindia Kannada News

Recommended Video

Lok Sabha Elections 2019 : ಲೋಕಸಭೆ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಮಾರ್ಚ್‌ 13ರ ಒಳಗೆ

ಹುಬ್ಬಳ್ಳಿ, ಮಾರ್ಚ್‌ 08: ಮಾರ್ಚ್‌ 13 ರ ಒಳಗೆ ಲೋಕಸಭಾ ಚುನಾವಣೆಗೆ ಕರ್ನಾಟಕದ ಕ್ಷೇತ್ರವಾರು ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ಮೈತ್ರಿಯಲ್ಲಿ 24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ, ಮಾರ್ಚ್‌ 11 ಕ್ಕೆ ಜೆಡಿಎಸ್-ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಕುರಿತ ಅಂತಿಮ ಸಭೆ ಇದ್ದು ಯಾರಿಗೆ ಎಷ್ಟು ಸೀಟು ಎಂಬುದು ಅಂತಿಮವಾಗಲಿದೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.

ಲೋಕಸಭೆ ಚುನಾವಣೆ: 15 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್‌ಲೋಕಸಭೆ ಚುನಾವಣೆ: 15 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್‌

ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದ ದಿನೇಶ್ ಗುಂಡೂರಾವ್, ಮಂಡ್ಯದಲ್ಲಿ ಕೆಲ ಕಾಂಗ್ರೆಸ್ ಮುಖಂಡರು ಸುಮಲತಾ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿರುವ ಬಗ್ಗೆ ಮಾಹಿತಿ ಇಲ್ಲ ಎಂದರು.

ದೇವೇಗೌಡ-ರಾಹುಲ್ ಗಾಂಧಿ ಚರ್ಚೆ

ದೇವೇಗೌಡ-ರಾಹುಲ್ ಗಾಂಧಿ ಚರ್ಚೆ

ಈಗಾಗಲೇ ಸಮನ್ವಯ ಸಮಿತಿ ಸಭೆ ಸೇರಿ ಇನ್ನೂ ಕೆಲವು ಸಭೆಗಳಲ್ಲಿ ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಲಾಗಿದೆ ಆದರೆ ಸೀಟು ಹಂಚಿಕೆ ಈ ವರೆಗೆ ನಿಶ್ಚಯವಾಗಿಲ್ಲ. ದೇವೇಗೌಡ ಅವರು ನೇರವಾಗಿ ರಾಹುಲ್ ಅವರನ್ನು ಭೇಟಿಯಾಗಿ ಸೀಟು ಹಂಚಿಕೆ ಕುರಿತು ಚರ್ಚೆ ಮಾಡಿದ್ದಾರೆ ಆದರೆ ಅದು ಫಲಪ್ರದವಾಗಿಲ್ಲ.

ಮಾರ್ಚ್‌ 11 ಕ್ಕೆ ಅಂತಿಮ ಸಭೆ

ಮಾರ್ಚ್‌ 11 ಕ್ಕೆ ಅಂತಿಮ ಸಭೆ

ಈಗ ಮಾರ್ಚ್‌ 11 ಕ್ಕೆ ಅಂತಿಮ ಸಭೆ ಎರಡೂ ಪಕ್ಷದ ಮುಖಂಡರ ನಡುವೆ ಮಾಡಲಾಗುತ್ತಿದ್ದು, ಈ ಸಭೆ ಅಂತಿಮವಾಗಿದ್ದು ಯಾರಿಗೆ ಎಷ್ಟು ಸೀಟು ದೊರಕುತ್ತದೆ ಎಂಬುದು ನಿಶ್ಚಯವಾಗಲಿದೆ. ಮಾರ್ಚ್‌ 11 ರ ಸಭೆಯ ಎರಡು ದಿನಗಳ ನಂತರ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಲಿದೆ.

ಮುಂದಿನ ವಾರ ಪಟ್ಟಿ ಬಿಡುಗಡೆ ಮಾಡಲಿರುವ ಬಿಜೆಪಿ

ಮುಂದಿನ ವಾರ ಪಟ್ಟಿ ಬಿಡುಗಡೆ ಮಾಡಲಿರುವ ಬಿಜೆಪಿ

ಬಿಜೆಪಿ ಸಹ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಯಲ್ಲಿ ನಿರತವಾಗಿದ್ದು, ಇಂದು ಯಡಿಯೂರಪ್ಪ ಅವರು ಹೈಕಮಾಂಡ್‌ ಅನ್ನು ಭೇಟಿ ಆಗಿ ಮಾತುಕತೆ ನಡೆಸಿದ್ದಾರೆ. ಕೆಲವು ಹಾಲಿ ಸಂಸದರಿಗೂ ಈ ಬಾರಿ ಟಿಕೆಟ್ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿತ್ತಿದ್ದು. ಬಿಜೆಪಿ ಸಹ ಮುಂದಿನ ವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ.

ಚುನಾವಣೆ ದಿನಾಂಕ ಘೋಷಣೆ ಸನಿಹದಲ್ಲಿದೆ

ಚುನಾವಣೆ ದಿನಾಂಕ ಘೋಷಣೆ ಸನಿಹದಲ್ಲಿದೆ

ಚುನಾವಣಾ ಆಯೋಗವು ಮುಂದಿನ ವಾರದ ಮೊದಲಲ್ಲಿ ಚುನಾವಣಾ ದಿನಾಂಕ ಘೋಷಣೆಗೆ ಸಜ್ಜಾಗಿದ್ದು, ಸೋಮವಾರ ಅಥವಾ ಮಂಗಳವಾರ ಚುನಾವಣಾ ದಿನಾಂಕ ಘೋಷಣೆ ಆಗಲಿದೆ. ಆ ಒಳಗಾಗಿ ಸೀಟು ಹಂಚಿಕೆ ಅಂತಿಮಗೊಳಿಸಬೇಕು ಎಂಬ ಆತುರದಲ್ಲಿ ಕಾಂಗ್ರೆಸ್-ಜೆಡಿಎಸ್ ಇದೆ.

English summary
KPCC president Dinesh Gundu Rao said Lok Sabha elections 2019 Karnataka candidates list will announce before March 13. ಮಾರ್ಚ್‌ 13ರ ಒಳಗೆ ಲೋಕಸಭೆ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X