ಬೆಂಗಳೂರು ವ್ಯಾಪ್ತಿಯ ಲೋಕಸಭಾ ಕ್ಷೇತ್ರಗಳನ್ನ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲಾನ್; ಮತ್ತೊಂದು ಹೊಸ ಕಾರ್ಯಕ್ರಮ ಜಾರಿ
ಬೆಂಗಳೂರು, ಜನವರಿ 02: ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನ ಗೆಲ್ಲಲು ಕಾಂಗ್ರೆಸ್ ಹೈಕಮಾಂಡ್ ಟಾರ್ಗೆಟ್ ನೀಡಿದೆ. ಅದರಂತೆ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ರಾಜ್ಯ ಕಾಂಗ್ರೆಸ್ ನಾಯಕರು ಭರ್ಜರಿ ತಯಾರಿ ನಡೆಸಿದೆ.
ಹೌದು, ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿಯಾಗಿರುವ ಡಿ ಕೆ ಶಿವಕುಮಾರ್ ಗೆ ಅವರಿಗೆ ಬೆಂಗಳೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯ ನಾಲ್ಕು ಲೋಕಸಭಾ ಕ್ಷೇತ್ರಗಳ ಫೈಕಿ ಕನಿಷ್ಠ ಎರಡು ಕ್ಷೇತ್ರಗಳನ್ನ ಗೆಲ್ಲುವ ಮಾಸ್ಟರ್ ಪ್ಲಾನ್ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ನಡೆಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಸೃಷ್ಟಿಯಾಗಿದ್ದು, ಇದೀಗ ಬೆಂಗಳೂರು ವ್ಯಾಪ್ತಿಯಲ್ಲಿ ಬರುವ 8 ವಲಯಗಳಲ್ಲಿ 28 ವಿಧಾನಸಭಾ ಕ್ಷೇತ್ರಗಳಲ್ಲೂ ಹೊಸ ಕಾರ್ಯಕ್ರಮವನ್ನ ತರಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಂದಾಗಿದ್ದಾರೆ. ಅದರಂತೆ ಲೋಕಸಭಾ ಚುಣಾವಣೆಒಗೆ ಕೆಲವು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಬೆಂಗಳೂರು ಜನತೆಯ ಮನಸ್ಸು ಗೆಲ್ಲುವ ತಂತ್ರಗಾರಿಗೆಯನ್ನ ಡಿಕೆ ಶಿವಕುಮಾರ್ ನಡೆಸಿದ್ದಾರೆ.
ಲೋಕಸಭಾ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ದೃಷ್ಟಿಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಹೊಸ ಕಾರ್ಯಕ್ರಮ ಜಾರಿಗೊಳಿಸಲು ಮುಂದಾಗಿದ್ದಾರೆ. ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲು ಕಾಂಗ್ರೆಸ್ ನಾಯಕರು ಪ್ಲಾನ್ ನಡೆಸಿದ್ದಾರೆ.
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ ಡಿ.ಕೆ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ಜನವರಿ 3 ರಂದು ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು ಹಾಗೂ ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಈ ಕಾರ್ಯಕ್ರಮ ಜಾರಿಹೊಳಿಸಲು ಮುಂದಾಗಿದ್ದಾರೆ.
ನಾಗರಿಕರು ಸರ್ಕಾರಿ ಕಛೇರಿಗಳಿಗೆ ಬರುವ ಬದಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ 28 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ವಲಯವಾರು 2 ಅಥವಾ 3 ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಸದರಿ ಕಾರ್ಯಕ್ರಮವನ್ನು ನಡೆಸಲಾಗುವುದು.
ಅದರಂತೆ, ಮೊದಲನೇ ಹಂತದಲ್ಲಿ ಮಹದೇವಪುರ, ಯಲಹಂಕ ಹಾಗೂ ಪೂರ್ವ ವಲಯ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಎರಡನೇ ಹಂತದಲ್ಲಿ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗುವುದು.
ನಾಗರಿಕರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ತಮ್ಮ ಅಹವಾಲು/ಸಮಸ್ಯೆಗಳನ್ನು ನಿವೇದಿಸಿಕೊಳ್ಳಬಹುದಾಗಿದ್ದು, ನಾಗರಿಕರಿಗೆ ಆಸನಗಳ ವ್ಯವಸ್ಥೆ, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಹಾಗೂ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿರುತ್ತದೆ. ಅಲ್ಲದೆ ವಿದ್ಯುತ್, ಜನರೇಟರ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿರುತ್ತದೆ.
ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ನಾಗರಿಕರು ಅಹವಾಲುಗಳನ್ನು ನೀಡಲು ಅನುವಾಗಲೆಂದು ಟೋಕನ್ ಗಳನ್ನು ಪಡೆಯಲು 10 ಕೌಂಟರ್ ಗಳ ವ್ಯವಸ್ಥೆ ಮಾಡಲಾಗುತ್ತದೆ. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ನೇರವಾಗಿ ಭೇಟಿಯಾಗಲು ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಯಾ ಕ್ಷೇತ್ರದ ಶಾಸಕರನ್ನೂ ಆಹ್ವಾನಿಸಲಾಗಿದೆ.












Click it and Unblock the Notifications