ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ : ಸಿಇಟಿ ಪರೀಕ್ಷೆಗಳು ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಮಾರ್ಚ್ 11 : ಲೋಕಸಭಾ ಚುನಾವಣೆ ಮತದಾನದ ಹಿನ್ನಲೆಯಲ್ಲಿ 2019ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್ 23ರಂದು ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯಲಿದೆ.

ಸೋಮವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏಪ್ರಿಲ್ 23, 24ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. ನೂತನ ವೇಳಾಪಟ್ಟಿಯಂತೆ ಏಪ್ರಿಲ್ 29 ಮತ್ತು 30ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ.

ಚುನಾವಣೆ ಸಮಯ ಸಾಲುಸಾಲು ರಜಾ : ಮತ ಹಾಕದೆ ಮಾಡಬೇಡಿ ಮಜಾಚುನಾವಣೆ ಸಮಯ ಸಾಲುಸಾಲು ರಜಾ : ಮತ ಹಾಕದೆ ಮಾಡಬೇಡಿ ಮಜಾ

Lok sabha elections voting : Karnataka CET exam 2019 postponed

ಕೇಂದ್ರ ಚುನಾವಣಾ ಆಯೋಗ 2019ನೇ ಸಾಲಿನ ಲೋಕಸಭಾ ಚುನಾವಣೆ ವೇಳಾಪಟ್ಟಿಯನ್ನು ಮಾ.10ರಂದು ಪ್ರಕಟಿಸಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಏಪ್ರಿಲ್ 18 ಮತ್ತು 23ರಂದು ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ 2 ಹಂತದ ಮತದಾನಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ 2 ಹಂತದ ಮತದಾನ

ಏಪ್ರಿಲ್ 23ರಂದು ಮತದಾನ ನಡೆಯುವ ಹಿನ್ನಲೆಯಲ್ಲಿ ಅಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್ 23 ಮತ್ತು 24ರಂದು ನಡೆಯಬೇಕಿದ್ದ ಪರೀಕ್ಷೆಗಳು ಏಪ್ರಿಲ್ 29 ಮತ್ತು 30ರಂದು ನಡೆಯಲಿವೆ.

ಏಪ್ರಿಲ್ 29ರಂದು ಜೀವಶಾಸ್ತ್ರ, ಗಣಿತ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 30ರಂದು ಭೌತಶಾಸ್ತ್ರ, ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಮೇ 1ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ.

ಈ ವರ್ಷದಿಂದ ಆನ್‌ಲೈನ್ ಮೂಲಕ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದರು. ಆದರೆ, ಆನ್‌ಲೈನ್ ಪರೀಕ್ಷೆಗಳನ್ನು ನಡೆಸಲು ಅಗತ್ಯ ತಯಾರಿ, ಸೌಲಭ್ಯಗಳು ಆಗದ ಹಿನ್ನಲೆಯಲ್ಲಿ ಜನವರಿ 11ರಂದು ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಲಾಗಿತ್ತು.

English summary
The Karnataka Examinations Authority (KEA) postponed 2019 Common Entrance Test (CET) exam due to Lok sabha elections 2019 voting. As per new schedule exam will be held on April 29 and 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X