ಬೆಂಗಳೂರು ನಗರ ಸೇರಿದಂತೆ ಹಲವೆಡೆ ಸಂಜೆ ವೇಳೆಗೆ ಮಳೆ ಸಾಧ್ಯತೆ
Recommended Video
ಬೆಂಗಳೂರು, ಏ.18: ಒಂದೆಡೆ ಕರ್ನಾಟಕದಲ್ಲಿ ಮೊದಲನೇ ಹಂತದ ಮತದಾನ ಆರಂಭವಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಒಂದಷ್ಟು ಮಂದಿ ಬೆಳಗಿನ ಜಾವವೇ ಬಂದು ಮತ ಹಾಕಿದರೆ ಇನ್ನು ಕೆಲವು ಮಂದಿ ಬಿಸಿಲು ಕಳೆಯಲಿ ನಂತರ ಹೋದರಾಯಿತು ಅಂದುಕೊಂಡಿರುತ್ತಾರೆ.
ಗುರುವಾರದಿಂದ ಶುಕ್ರವಾರದವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿನ್ನೆ ಮುನ್ಸೂಚನೆ ನೀಡಿತ್ತು. ನಿನ್ನೆ ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಮಳೆಯಿಂದ ಹಲವು ಪ್ರದೇಶಗಳಿಗೆ ನೀರು ನುಗ್ಗಿತ್ತು. ರಸ್ತೆಯಲ್ಲೇ ನೀರು ನಿಂತ ಪರಿಣಾಮ ಸಂಚಾರ ಸಮಸ್ಯೆಯಾಗಿತ್ತು.

ಬೆಂಗಳೂರು ಕೇಂದ್ರ ಭಾಗದಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.6 ಡಿಗ್ರಿ ಸೆಲ್ಸಿಯಸ್, ಕೆಐಎನಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.2 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 35.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಈಗಾಗಲೇ ಮಹಾರಾಷ್ಟ್ರ, ಗುಜರಾತ್, ರಾಜಸ್ತಾನದಲ್ಲಿ ಭಾರಿ ಚಂಡ ಮಾರುತಕ್ಕೆ 64 ಮಂದಿ ಬಲಿಯಾಗಿದ್ದಾರೆ.












Click it and Unblock the Notifications