ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ: ಕಾರಣ ಬಿಚ್ಚಿಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಮೇ 13: ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗು ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

ಪರಿಷತ್ ಚುನಾವಣೆ ಪೂರ್ವಭಾವಿ ಸಭೆ ಬಗ್ಗೆ ಕೇಳಿದಾಗ, "ಶಿಕ್ಷಕರ ಹಾಗು ಪದವೀಧರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಮ್ಮ ಪಕ್ಷದ ನಾಯಕರು ಹಾಗು ಪದಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಎಲ್ಲಾ ಮುಖಂಡರು ಸೇರಿ ಈ ಚುನಾವಣೆ ಎದುರಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಇನ್ನು ಪಕ್ಷದ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಾಗಿದೆ ಎಂದು ತಿಳಿಸಿದರು.

Lok Sabha Poll BJP cannot become the Prime MinisterDK Shivakumar

ಲೋಕಸಭೆ ಮಾದರಿಯಲ್ಲೇ ಚುನಾವಣೆ ಮಾಡುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು, ಲೋಕಸಭೆ ಚುನಾವಣೆ ಮಾದರಿಯಲ್ಲಿ ಈ ಚುನಾವಣೆ ಎದುರಿಸುತ್ತೇವೆ" ಎಂದರು. ಪರಿಷತ್ ಚುನಾವಣೆಗೂ ಬಿಜೆಪಿ ಹಾಗು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿ, ಅವರು ಶಾಶ್ವತವಾಗಿ ಮೈತ್ರಿ ಮಾಡಿಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಮೈತ್ರಿಯಾದರೂ ಮಾಡಿಕೊಳ್ಳಲಿ, ವಿಲೀನವಾದರೂ ಮಾಡಿಕೊಳ್ಳಲಿ. ಅದು ಅವರ ಪಕ್ಷಗಳ ತೀರ್ಮಾನ. ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+