2024 ರ ಲೋಕಸಭಾ ಚುನಾವಣೆಯ ಫಲಿತಾಂಶ; ಬಿಜೆಪಿ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ಗೆ ಎಷ್ಟು ಸ್ಥಾನ?
ಬೆಂಗಳೂರು, ಏಪ್ರಿಲ್ 22: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಲೋಕ ಸಮರ ಜೋರಾಗಿದ್ದು, ಕಾಂಗ್ರೆಸ್‌ನ ಚೊಂಬಿನ ಜಾಹೀರಾತಿಗೆ ಬಿಜೆಪಿ ತಿರುಗೇಟು ನೀಡಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಚೊಂಬೆ ಸಿಗುವುದು ಎಂದು ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ಹೌದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದ್ದು, ಬಿಜೆಪಿ ಹಾಗೂ ಜೆಡಿಎಸ್ 28 ಕ್ಷೇತ್ರಗಳನ್ನ ಗೆಲ್ಲುವ ತಂತ್ರಗಾರಿಕೆಯನ್ನ ನಡೆಸಿದೆ.

ಆದರೆ, ಚುನಾವಣಾ ಹೊತ್ತಲಿ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಮೋದಿ ರಾಜ್ಯಕ್ಕೆ ಕೊಟ್ಟಿದ್ದು ಚೊಂಬು ಎಂದು ಜಾಹೀರಾತಿ ನೀಡಿದ್ದು, ಕರ್ನಾಟಕಕ್ಕೆ ಮೋದಿ ಸರ್ಕಾರದ ಕೊಡುಗೆ ಚೊಂಬು ಎಂಬ ಕಾಂಗ್ರೆಸ್ ಜಾಹೀರಾತಿಗೆ ತಿರುಗೇಟು ನೀಡಿರುವ ಕರ್ನಾಟಕ ಬಿಜೆಪಿ ಕಾಂಗ್ರೆಸ್ ಅಂದ್ರೇ ಡೇಂಜರ್ ಎಂಬ ಜಾಹೀರಾತನ್ನು ನೀಡಿದೆ.
ಜನರಿಂದ ಕಾಂಗ್ರೆಸ್‌ಗೆ ಚೊಂಬೇ ಗ್ಯಾರಂಟಿ#ಮತ್ತೊಮ್ಮೆಮೋದಿಸರ್ಕಾರ #PhirEkBaarModiSarkar pic.twitter.com/AxJeWi2l2a
— BJP Karnataka (@BJP4Karnataka) April 21, 2024
ಇನ್ನೂ ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ಲೆಕ್ಕಾಚಾರವನ್ನ ಬಿಜೆಪಿ ಹಾಕಿಕೊಂಡಿದೆ. ಅಂದರೇ ಬಿಜೆಪಿ 25 ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳುವ ಮೂಲಕ ಜನರಿಂದ ಕಾಂಗ್ರೆಸ್‌ಗೆ ಚೊಂಬೇ ಗ್ಯಾರಂಟಿ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ತಿಳಿಸಿದೆ.












Click it and Unblock the Notifications