ಲೋಕಸಭಾ ಎಲೆಕ್ಷನ್ ಬಳಿಕ ಗೆಲುವಿನ ಲೆಕ್ಕಾಚಾರ; ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ಗೆ ಇರೋ ಜಯದ ವಿಶ್ವಾಸ ಎಷ್ಟು?
ಬೆಂಗಳೂರು, ಮೇ 10: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಲೋಕಸಭೆ ಬೆನ್ನಲ್ಲೇ ಮೂರು ಪಕ್ಷದಲ್ಲೂ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ಭರ್ಜರಿ ಬಹುಮತ ಗಳಿಸಿದ್ದ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು.
ಆರಂಭದಲೇ ಕರ್ನಾಟಕ ಕಾಂಗ್ರೆಸ್ ಗೆ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಟ್ ಟಾರ್ಗೆಟ್ ನೀಡಿತ್ತು. ಅದರಂತೆ ಕಾಂಗ್ರೆಸ್ ಘಟಾನುಘಟಿ ನಾಯಕರು ಅಬ್ಬರ ಪ್ರಚಾರವನ್ನ ನಡೆಸಿದ್ದು, ಇದೀಗ ಕಾಂಗ್ರೆಸ್ ಪಾಳೆಯದಲ್ಲಿ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. 28 ಕ್ಷೇತ್ರಗಳ ಪೈಕಿ ಕನಿಷ್ಠ 9ರಲ್ಲಿ ಗೆಲುವು ಖಚಿತ ಎಂಬ ವಿಶ್ವಾಸ ಪಕ್ಷದ ನಾಯಕ ರಲ್ಲಿ ಕಂಡು ಬರುತ್ತಿದೆ.

28 ಕ್ಷೇತ್ರಗಳ ಪೈಕಿ ಕನಿಷ್ಠ 9 ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಗೆಲುವಿನ ಹತ್ತಿರದಲ್ಲಿದ್ದಾರೆ, ಇನ್ನೆರಡು ಕ್ಷೇತ್ರಗಳಲ್ಲಿ 50-50 ಅವಕಾಶವಿರುವುದಾಗಿ ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇತ್ತ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳಿಂದ 16 ರಿಂದ 17 ಸ್ಥಾನ ಗೆಲ್ಲುವ ಸಾಧ್ಯತೆಯೂ ಇದೆ ಎಂಬ ಮಾತು ಕಾಂಗ್ರೆಸ್ಸಿಗರಿಂದ ಕೇಳಿಬರುತ್ತಿದೆ. 16 ರಿಂದ 17 ಸ್ಥಾನ ಗೆಲ್ಲುವ ಸಾಧ್ಯತೆಯೂ ಇದೆ ಎಂಬ ಮಾತು ಕಾಂಗ್ರೆಸ್ಸಿಗರಿಂದ ಕೇಳಿಬರುತ್ತಿದೆ. ಆದರೆ, ಮೋದಿ ಅಲೆಯಿಂದಾಗಿ ಕರ್ನಾಟಕದಲ್ಲಿ 10-12 ಸ್ಥಾನಗಳನ್ನು ಗೆಲ್ಲುವುದು ಸಹ ಅನುಮಾನವಾಗಿದೆ.
ಇತ್ತ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಾಗಿದ್ದು, 28 ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ಮೂಲಕ ಕಾಂಗ್ರೆಸ್ ಸೋಲಿನ ಪಾಠ ಕಲಿಸಲು ಭರ್ಜರಿ ಪ್ರಚಾರ ನಡೆಸಿದ್ದ ಬಿಜೆಪಿ ನಾಯಕರು ಈಗಾಗಲೇ ಜೆಡಿಎಸ್ ಗೆ ಮೂರು ಕ್ಷೇತ್ರಗಳನ್ನ ಬಿಟ್ಟುಕೊಟ್ಟಿದ್ದು, 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಈ 25 ಕ್ಷೇತ್ರಗಳ ಫೈಕಿ 18ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆಯನ್ನ ಬಿಜೆಪಿ ನಾಯಕರು ಹೊಂದಿದ್ದಾರೆ ಎನ್ನಲಾಗಿದೆ. ಇತ್ತ ಜೆಪಿ ಮೈತ್ರಿಯೊಂದಿಗೆ 3 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ವನ್ನು ಪಕ್ಷದ ಮುಖಂಡರು ಹೊಂದಿದ್ದಾರೆ. ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೂ ಮಂಡ್ಯದಲ್ಲಿ ಜಯ ಖಚಿತ ಎಂದು ಮುಖಂಡರು ಹೇಳುತ್ತಾರೆ.
ರಾಜ್ಯದಲ್ಲಿ ಗ್ಯಾರಂಟಿಗಳ ಅಬ್ಬರ ನಡುವೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಬಿಜೆಪಿಯ ಕೈ ಹಿಡಿಯಲಿದೆ. ಬಿಜೆಪಿ ಕಾರ್ಯಕರ್ತರ ಬೆಂಬಲದಿಂದಾಗಿ ದಳಪತಿಗಳು ಸುಲಭವಾಗಿ ಕೋಲಾರ ಜೆಡಿಎಸ್ ತೆಕ್ಕೆಗೆ ಬರಲಿದೆ ಎಂದು ಬಲವಾಗಿ ನಂಬಿದ್ದಾರೆ. ಆದರೆ, ಹಲವು ವರ್ಷಗಳಿಂದ ಜೆಡಿಎಸ್ ಭದ್ರಕೋಟೆ ಎನಿಸಿರುವ ಹಾಸನ ಲೋಕಸಭಾ ಕ್ಷೇತ್ರ ಈ ಬಾರಿ ಬಿಜೆಪಿಯ ಸಂಪೂರ್ಣ ಬೆಂಬಲವಿಲ್ಲದೇ ಹಾಸನ ಕ್ಷೇತ್ರ ಕೈ ತಪ್ಪುವ ಸಾಧ್ಯತೆ ಇದೆ ಎಂಬ ಜೆಡಿಎಸ್ ನಾಯಕರಲ್ಲಿ ಆತಂಕ ಮೂಡಿದೆ.












Click it and Unblock the Notifications