Congress List: ಅಂತಿಮವಾಯ್ತು ಕಾಂಗ್ರೆಸ್‌ ಪಟ್ಟಿ; ಸಂಭಾವ್ಯ ಅಭ್ಯರ್ಥಿಗಳ ಜೊತೆ ಸಿಎಂ, ಡಿಸಿಎಂ ಸಭೆ: ಫೈನಲ್‌ ಲಿಸ್ಟ್‌ ಇಲ್ಲಿದೆ

ಬೆಂಗಳೂರು, ಮಾರ್ಚ್‌ 21: ಲೋಕಸಭಾ ಚುನಾವಣೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಪಡೆ ಕರ್ನಾಟಕದ ಏಳು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಚಿಸಿದೆ. ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳನ್ನ ಕಾಂಗ್ರೆಸ್‌ ಹೈಕಮಾಂಡ್‌ ಆಯ್ಕೆ ಮಾಡಿದ್ದು, ಸಂಭಾವ್ಯ ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್‌ ಹಿರಿಯ ನಾಯಕರು ಸಭೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಸಂಬಂಧದ ಸಿದ್ದತೆಗಳನ್ನು ತೀವ್ರಗೊಳಿಸುವ ಸಂಬಂಧ ಸಚಿವರು, ಹಿರಿಯ ಶಾಸಕರು ಮತ್ತು ಸಂಭಾವ್ಯ ಅಭ್ಯರ್ಥಿಗಳ ಸಭೆ ನಡೆಯಿತು

Lok Sabha Poll CM And DCM Held A Meeting With Probable Congress Candidates

ಸಂಭಾವ್ಯ ಅಭ್ಯರ್ಥಿಗಳಾದ ಬಾಗಲಕೋಟೆ ಸಂಯುಕ್ತ ಪಾಟೀಲ್, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮನ್ಸೂರ್ ಅಲಿ ಖಾನ್, ವಿನೋದ್ ಹಸೂಟಿ ಧಾರವಾಡ, ಚಿತ್ರದುರ್ಗದ ಚಂದ್ರಪ್ಪ, ಉಡುಪಿ ಜಯಪ್ರಕಾಶ್ ಹೆಗ್ಡೆ, ತುಮಕೂರು ಮುದ್ದಹನುಮೇಗೌಡ, ದಕ್ಷಿಣ ಕನ್ನಡ ಪದ್ಮರಾಜ್, ಬಳ್ಳಾರಿಯ ಹಿರಿಯ ಶಾಸಕರಾದ ಈ.ತುಕಾರಾಂ, ರಾಯಚೂರು ಕುಮಾರನಾಯ್ಕ್, ಬೆಂಗಳೂರು ದಕ್ಷಿಣದ ಸೌಮ್ಯ ರೆಡ್ಡಿ, ಉತ್ತರ ಕನ್ನಡ ಅಂಜಲಿ ನಿಂಬಾಳ್ಕರ್, ಮಂಡ್ಯ ವೆಂಕಟರಮಣೇಗೌಡ, ಮೈಸೂರು ಲಕ್ಷ್ಮಣ್ ,ಬೆಂಗಳೂರು ಉತ್ತರದ ರಾಜೀವ್ ಗೌಡ, ಬೀದರ್ ಸಾಗರ್ ಖಂಡ್ರೆ, ಬೆಳಗಾವಿಯಿಂದ ಮೃಣಾಳ್ ಹೆಬ್ಬಾಳ್ಕರ್ ಸ್ಪರ್ಧಿಸುವುದು ಬಹುತೇಕ ಫಿಕ್ಸ್‌ ಆಗಿದೆ.

ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಗುರುವಾರ ಬಹುತೇಕ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಇನ್ನೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಸುಳ್ಳು, ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ವಂಚಿಸುವ ಬಿಜೆಪಿ ಷಡ್ಯಂತ್ರವನ್ನು ಜನರಿಗೆ ಸಮಾಧಾನದಿಂದ ಮನವರಿಕೆ ಮಾಡಿಸಿ. ದೇಶದ ಪ್ರಜಾತಂತ್ರ ಉಳಿವಿಗೆ-ಭವಿಷ್ಯದ ಭಾರತಕ್ಕಾಗಿ ಜನ ಮೋದಿ ಸರ್ಕಾರವನ್ನು ಬದಲಾಯಿಸುತ್ತಾರೆ. ನಾವು-ನೀವು ಗಟ್ಟಿಯಾಗಿ ಜನರ ನಡುವೆ ನಿಲ್ಲೋಣ ಎಂದು ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಕಾರ್ಯಕರ್ತರನ್ನು, ಸ್ಥಳೀಯ ಮುಖಂಡರನ್ನು ಮಾತಾಡಿಸಿ, ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ. ಪ್ರತಿಷ್ಠೆ ಬೇಡ. ಎಲ್ಲಾ ರೀತಿಯ ಅಧಿಕಾರ ದುರುಪಯೋಗ ಮಾಡಿ ನಮಗೆ ತೊಂದರೆ ಕೊಡುತ್ತಾರೆ. ನಾವು ಎದೆಗಾರಿಕೆಯಿಂದ ಎದುರಿಸಿ ಜನರಿಂದ ಶಕ್ತಿ ಪಡೆದುಕೊಳ್ಳಬೇಕು. ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ವೈಜ್ಞಾನಿಕವಾಗಿ ಪ್ರಚಾರ ಮಾಡಿ ಅರ್ಥಪೂರ್ಣ ವಾಗಿ ಚುನಾವಣೆ ನಡೆಸೋಣ ಎಂದು ಸಿಎಂ ಅಭ್ಯರ್ಥಿಗಳಿಗೆ ಸೂಚನೆ ನೀಡಿದರು.

ಇನ್ನೂ ಸಭೆಯಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಂತೋಷ್ ಎಸ್ ಲಾಡ್, ತಿಮ್ಮಾಪುರ, ಜಮೀರ್ ಅಹಮದ್ ಖಾನ್, ಎಂ.ಸಿ.ಸುಧಾಕರ್, ಶರಣಪ್ರಕಾಶ್ ಪಾಟೀಲ್, ಹೆಚ್.ಕೆ.ಪಾಟೀಲ್, ಕೆ.ಎನ್.ರಾಜಣ್ಣ, ಕೆ.ವೆಂಕಟೇಶ್, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವಾನಂದ ಪಾಟೀಲ್, ಡಿ.ಸುಧಾಕರ್, ರಹೀಂ ಖಾನ್, ಮಂಕಾಳ ವೈದ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ಚುನಾವಣೆಗೆ ಭರ್ಜರಿ ತಯಾರಿ ಕುರಿತು ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿಗಳ ಫೈನಲ್‌ ಪಟ್ಟಿ!

ಬಳ್ಳಾರಿ- ಇ ತುಕಾರಂ

ಚಿತ್ರದುರ್ಗ - ಚಂದ್ರಪ್ಪ

ಬೆಳಗಾವಿ - ಮೃನಾಲ್ ಹೆಬ್ಬಾಳ್ಕರ್

ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ

ಬಾಗಲಕೋಟೆ - ಸಂಯುಕ್ತ ಶಿವಾನಂದ ಪಾಟೀಲ್

ಹುಬ್ಬಳ್ಳಿ ಧಾರವಾಡ್ - ವಿನೋದ್ ಅಸುಟಿ

ದಾವಣಗೆರೆ - ಡಾ ಪ್ರಭಾ ಮಲ್ಲಿಕಾರ್ಜುನ್

ಕೊಪ್ಪಳ - ರಾಜಶೇಖರ್ ಹಿಟ್ನಾಳ್

ಬೀದರ್ - ರಾಜಶೇಖರ್ ಪಾಟೀಲ್

ದಕ್ಷಿಣ ಕನ್ನಡ- ಪದ್ಮರಾಜ್

ಉಡಪಿ-ಚಿಕ್ಕಮಗಳೂರು - ಜಯಪ್ರಕಾಶ್ ಹೆಗಡೆ

ಬೆಂಗಳೂರು ದಕ್ಷಿಣ - ಸೌಮ್ಯರೆಡ್ಡಿ

ಬೆಂಗಳೂರು ಸೆಂಟ್ರಲ್- ಮನಸೂರ್ ಅಲಿಖಾನ್

ಬೆಂಗಳೂರು ಉತ್ತರ -ಪ್ರೋ ರಾಜೀವ್ ಗೌಡ

ಮೈಸೂರು - ಎಂ ಲಕ್ಷ್ಮಣ್

ರಾಯಚೂರು- ಕುಮಾರ್ ನಾಯ್ಕ್

ಉತ್ತರ ಕನ್ನಡ -ಅಂಜಲಿ ನಿಂಬಾಳ್ಕರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+