‘ಮೋದಿಯನ್ನು ಬಾಯಿಗೆ ಬಂದ ಹಾಗೆ ಬೈದ ದೇವೇಗೌಡ್ರು ಈಗ ಅಪ್ಪಿಕೊಳ್ಳುವುದು ಎಂದರೆ ಏನರ್ಥ?’

ಚಿಕ್ಕಬಳ್ಳಾಪುರ, ಏಪ್ರಿಲ್‌ 18: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.

ಕೊಟ್ಟ ಮಾತು ಈಡೇರಿಸದ ಬಿಜೆಪಿಗೆ ಮತ್ತು ಇವರ ಜತೆ ಸೇರಿರುವ ಜೆಡಿಎಸ್ ಗೆ ನಿಮ್ಮ ಮತ ಕೇಳುವ ನೈತಿಕತೆ ಇಲ್ಲ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪಥನ ಆಗ್ತದೆ ಎನ್ಮುವುದು ಬರೀ ದೇವೇಗೌಡರ ಭ್ರಮೆ‌. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೀವಿ ಎಂದರು.

Lok Sabha Poll CM Siddaramaiah Lashed Out At Former Prime Minister HD Deve Gowda

ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗ್ತದೆ ಎಂದು ಖಚಿತವಾಗಿ ವಾಗ್ದಾಳಿ ನಡೆಸಿದರು.

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ.‌ ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದರು.

ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾದ ಮಾತುಗಳಲ್ಲಿ ಘೋಷಿಸಿದರು.‌ ನೀವೇ ತಿರಸ್ಕರಿಸಿದ NDA ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಕರೆ ನೀಡಿದರು.

ಭ್ರಷ್ಟಾಚಾರಿ ಎನ್ನುವ ಕಾರಣಕ್ಕೇ ಇಲ್ಲಿಯ ಜನತೆ ಸುಧಾಕರ್ ಅವರನ್ನು ಸೋಲಿಸಿದ್ದೀರಿ. ಇವರ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಇವರ ಭ್ರಷ್ಟಾಚಾರ ಸಾಬೀತಾಗುತ್ತದೆ. ಬಳಿಕ ಸುಧಾಕರ್ ಎಲ್ಲಿಗೆ ಹೋಗಬೇಕೋ ಅಲ್ಲಿಗೇ ಹೋಗ್ತಾರೆ ಎಂದರು.

ನಮ್ಮ ಸರ್ಕಾರ ರಾಜ್ಯದಲ್ಲಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಕುಟುಂಬದ ಮಹಿಳೆಯರ ಅಕೌಂಟಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಜಮೆ ಆಗುತ್ತದೆ. ರಾಜ್ಯ ಸರ್ಕಾರ ಕೊಡುವ ಪ್ರತಿ ತಿಂಗಳ 2 ಸಾವಿರ ರೂಪಾಯಿ ಕೂಡ ಇದಕ್ಕೆ ಸೇರಿ ವರ್ಷಕ್ಕೆ ಒಂದು ಲಕ್ಷದ 24 ಸಾವಿರ ರೂಪಾಯಿ ಪ್ರತೀ ಕುಟುಂಬಗಳ ಖಾತೆಗೆ ಬರುತ್ತದೆ ಎಂದು ಘೋಷಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+